Petrol Price Today: ಸ್ಥಿರವಾಗಿದೆ ಪೆಟ್ರೋಲ್, ಡೀಸೆಲ್ ದರ; ಭಾರತದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಹೀಗಿದೆ

Petrol Price | Diesel Price Today, 25-04-2022: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ.

Petrol Price Today: ಸ್ಥಿರವಾಗಿದೆ ಪೆಟ್ರೋಲ್, ಡೀಸೆಲ್ ದರ; ಭಾರತದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
Edited By: sandhya thejappa

Updated on: Apr 25, 2022 | 9:13 AM

Petrol Diesel Price Today |ಉಕ್ರೇನ್, ರಷ್ಯಾ ನಡುವಿನ ಯುದ್ಧದಿಂದ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಏರಿಕೆಯಾಗಿದೆ. ಬೆಲೆ ಹೆಚ್ಚಾದರೂ ಪೆಟ್ರೋಲ್, ಡೀಸೆಲ್ ದಿನನಿತ್ಯ ಜೀವನಕ್ಕೆ ಅನಿವಾರ್ಯವಾಗಿದೆ. ಇಂದು (ಏಪ್ರಿಲ್ 25) ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಅಂತ ನೀವು ಯೋಚಿಸುತ್ತಾ ಇರಬಹುದು. ಅದರಲ್ಲೂ ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ದೇಶದಲ್ಲಿ ಕಳೆದ 19 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ:
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಕುರಿತು ಏಪ್ರಿಲ್27ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

PSI Recruitment Scam: ರಾಜಕೀಯ ಲಾಭದ ಹುನ್ನಾರ ಬೇಡ; ಪ್ರಿಯಾಂಕ್ ಖರ್ಗೆಗೆ ಆರಗ ಜ್ಞಾನೇಂದ್ರ

Web contact

TV9 Kannada

Read More
Follow Us