Petrol Price Today: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಹೀಗಿದೆ
Petrol Price | Diesel Price Today, 26-04-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.
ರಷ್ಯಾ- ಉಕ್ರೇನ್ ಯುದ್ಧದಿಂದ ಪೆಟ್ರೋಲ್ (Petrol), ಡೀಸೆಲ್ (Diesel) ದರ ಏರಿಕೆಯಾಗಿತ್ತು. ಇಂಧನ ದರ ಏರಿಕೆಯಾಗುತ್ತಿದ್ದಂತೆ ದೇಶದ ಜನರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಹಲವು ಕಡೆ ಪ್ರತಿಭಟನೆಗಳನ್ನೂ ನಡೆಸಿದ್ದರು. ಇಂಧನದ ದರ ಹೆಚ್ಚಾದರೂ ಅನಿವಾರ್ಯವಾಗಿ ಬಳಸಲೇಬೇಕು. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಸದ್ಯ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.
ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ
Covid India Update: ಭಾರತದಲ್ಲಿ 2541 ಮಂದಿಗೆ ಕೊರೊನಾ ಸೋಂಕು, 30 ಮಂದಿ ಸಾವು
ಬೆಂಗಳೂರಿನಲ್ಲಿ ಕಿಡ್ನಿ ಖರೀದಿ ಹೆಸರಲ್ಲಿ ಮಹಾಮೋಸ; ಕಿಡ್ನಿ ವಂಚನೆಯ ಮಾಸ್ಟರ್ ಮೈಂಡ್ ಬಂಧನಕ್ಕಾಗಿ ಮುಂದುವರೆದ ತನಿಖೆ
Published On - 8:42 am, Tue, 26 April 22