Petrol Price Today: ಇಂದು ಕೂಡಾ ಇಂಧನ ದರ ಸ್ಥಿರ; ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

| Updated By: sandhya thejappa

Updated on: Apr 27, 2022 | 8:25 AM

Petrol Price | Diesel Price Today, 27-04-2022: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ.

Petrol Price Today: ಇಂದು ಕೂಡಾ ಇಂಧನ ದರ ಸ್ಥಿರ; ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

ಕಿಲೋಮೀಟರ್ ಗಟ್ಟಲೆ ನಡೆದು ಹೋಗುವ ಕಾಲವಿತ್ತು. ಆದರೆ ಹೀಗೆ ಹಾಗಲ್ಲ. 50 ಮೀಟರ್ ಹೋಗಬೇಕು ಅಂದರೂ ವಾಹನಗಳಲ್ಲೇ ಹೋಗುವುದು ರೂಢಿಯಾಗಿದೆ. ಇಂಧನ ದರ ಇಳಿಕೆಯಾಗಲಿ, ಏರಿಕೆಯಾಗಲಿ ಇದು ದಿನನಿತ್ಯದ ಜೀವನಕ್ಕೆ ಅನಿವಾರ್ಯವಾಗಿ ಬಿಟ್ಟಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಆದರೆ ಸದ್ಯ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ:
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​

Viral Video: ಆ್ಯಂಬುಲೆನ್ಸ್​ ಶುಲ್ಕ ಭರಿಸಲಾಗದೆ 90 ಕಿ.ಮೀ ಬೈಕ್​ನಲ್ಲೇ ಮಗನ ಶವವನ್ನು ಹೊತ್ತೊಯ್ದ ತಂದೆ!