Petrol Rate Today: ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್ ಮತ್ತು ಡಿಸೇಲ್ ದರ; ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು?

Petrol Diesel Price Today: ಶನಿವಾರ ದೇಶದ ಕೆಲವು ನಗರಗಳಲ್ಲಿ, ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂಪಾಯಿ ನಿಗದಿ ಮಾಡಲಾಗಿದೆ. ಅದರಂತೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಅನೇಕ ನಗರಗಳಲ್ಲಿ ಬೆಲೆಗಳು ಪ್ರತಿ ಲೀಟರ್‌ಗೆ 100 ರೂಪಾಯಿಗೆ ಮಾರಾಟವಾಗುತ್ತಿದ್ದು, ಮುಂಬೈನಲ್ಲಿಯೂ ಕೂಡ ಪೆಟ್ರೋಲ್ ಬೆಲೆ 100ರ ಹತ್ತಿರ ತಲುಪುತ್ತಿದೆ.

Petrol Rate Today: ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್ ಮತ್ತು ಡಿಸೇಲ್ ದರ; ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು?
ಸಾಂದರ್ಭಿಕ ಚಿತ್ರ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು (ಮೇ 15 ಶನಿವಾರ) ಯಾವುದೇ ಬದಲಾವಣೆ ಇಲ್ಲ. ಶುಕ್ರವಾರ ದೇಶಾದ್ಯಂತ ಏರಿಕೆ ಕಂಡಿದ್ದ ತೈಲ ಬೆಲೆ ಇಂದು ಸ್ಥಿರವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಈ ವಾರ ನಾಲ್ಕು ಬಾರಿ ಹೆಚ್ಚಿಸಲಾಗಿದೆ. ಶುಕ್ರವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 29 ಪೈಸೆ ಮತ್ತು ಡೀಸೆಲ್ ಅನ್ನು ಲೀಟರ್‌ಗೆ 34 ಪೈಸೆ ಹೆಚ್ಚಿಸಲಾಗಿತ್ತು. ಆ ಮೂಲಕ ಬೆಂಗಳೂರಿನಲ್ಲಿ ಇಂದು ಕೂಡ ಪ್ರತಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಇರಲಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 87.94 ರೂಪಾಯಿಯಾಗಿದೆ. ಈ ಹೆಚ್ಚಳದ ನಂತರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.34 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 82.95 ರೂಪಾಯಿ ತಲುಪಿದೆ ಮತ್ತು ಇಂದು ಅದೇ ದರದಲ್ಲಿ ಮಾರಾಟವಾಗುತ್ತಿದೆ.

ದೇಶದ ಕೆಲವು ನಗರಗಳಲ್ಲಿ, ಪೆಟ್ರೋಲ್ ಬೆಲೆ ಈಗಾಗಲೇ ಲೀಟರ್‌ಗೆ 100 ರೂಪಾಯಿ ನಿಗದಿ ಮಾಡಲಾಗಿದೆ. ಅದರಂತೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಅನೇಕ ನಗರಗಳಲ್ಲಿ ಬೆಲೆಗಳು ಪ್ರತಿ ಲೀಟರ್‌ಗೆ 100 ರೂಪಾಯಿಗೆ ಮಾರಾಟವಾಗುತ್ತಿದ್ದು, ಮುಂಬೈನಲ್ಲಿಯೂ ಕೂಡ ಪೆಟ್ರೋಲ್ ಬೆಲೆ 100ರ ಹತ್ತಿರ ತಲುಪುತ್ತಿದೆ.

ಮುಂಬೈಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 98.65 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 90.11 ರೂಪಾಯಿ ತಲುಪಿದೆ. ದೇಶದ ವಿವಿಧ ನಗರಗಳಲ್ಲಿ, ಅಲ್ಲಿನ ಇಂಧನದ ಬೆಲೆಯ ಆಧಾರದ ಮೇಲೆ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ಮತ್ತು ಸರಕುಗಳ ಸಾಗಾಣಿಕೆಯ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತದೆ. ರಾಜಸ್ಥಾನದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತ್ಯಧಿಕ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸಲಾಗುತ್ತದೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ಬೆಲೆ ಗರಿಷ್ಠ ಪ್ರತಿ ಲೀಟರ್​ಗೆ 103.27 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ 95.70 ರೂಪಾಯಿ ನಿಗದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಈ ವಾರ ನಾಲ್ಕನೇ ಬಾರಿಗೆ ಹೆಚ್ಚಿಸಲಾಗಿದ್ದರೆ, ಇವುಗಳ ಬೆಲೆಯನ್ನು ಮೇ 4 ರಿಂದ ಮೇ 15 ರ ವರೆಗೆ ಎಂಟು ಬಾರಿ ಏರಿಸಲಾಗಿದೆ. ಆದರೆ, ಕಳೆದ ತಿಂಗಳು ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬೆಲೆಗಳು ಸ್ಥಿರವಾಗಿದ್ದವು. ಎಂಟು ಬಾರಿಯ ಹೆಚ್ಚಳದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 1.95 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 2.22 ರೂಪಾಯಿ ಏರಿಕೆಯಾಗಿದೆ.

ಕಳೆದ ವರ್ಷ ಮಾರ್ಚ್​ನಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದ ದರವನ್ನು ಅತ್ಯುನ್ನತ ಮಟ್ಟಕ್ಕೆ ಹೆಚ್ಚಿಸಿದ್ದು, ಅಂದಿನಿಂದ ಪೆಟ್ರೋಲ್ ಬೆಲೆ ಲೀಟರ್​ಗೆ 22.75 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 20.66 ರೂಪಾಯಿ ಹೆಚ್ಚಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್‌ನ ಚಿಲ್ಲರೆ ಬೆಲೆಯ ಶೇಕಡಾ 60 ಮತ್ತು ಡೀಸೆಲ್ ಬೆಲೆಯಲ್ಲಿ ಶೇ 54 ರಷ್ಟು ಸಂಗ್ರಹಿಸುತ್ತವೆ. ಇದರಲ್ಲಿ ಕೇಂದ್ರವು ಪೆಟ್ರೋಲ್‌ಗೆ 32.90 ರೂಪಾಯಿ ಮತ್ತು ಡೀಸೆಲ್‌ಗೆ 31.80 ರೂಪಾಯಿ ಅಬಕಾರಿ ಸುಂಕವನ್ನು ವಿಧಿಸುತ್ತದೆ.

ಇದನ್ನೂ ಓದಿ:

Petrol Rate Today: ಮೇ ತಿಂಗಳಿನಲ್ಲಿ 8 ಬಾರಿ ಏರಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ; ವಿವಿಧ ನಗರಗಳಲ್ಲಿನ ತೈಲ ಬೆಲೆ ವಿವರ ಇಲ್ಲಿದೆ