Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

| Updated By: shivaprasad.hs

Updated on: May 07, 2022 | 8:06 AM

Petrol Price | Diesel Price, 07.05.2022: ದೇಶದಲ್ಲಿ ಕಳೆದ 31 ದಿನಗಳಿಂದ ಅಂದರೆ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us on

Petrol Diesel Price Today: ದೇಶದಲ್ಲಿ ಕಳೆದ 31 ದಿನಗಳಿಂದ ಅಂದರೆ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಇಂದು (ಶನಿವಾರ, ಮೇ 07, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 6 ಶುಕ್ರವಾರದ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ
Vedantu Layoff: ಎಡ್​ಟೆಕ್​ ಯುನಿಕಾರ್ನ್ ವೇದಾಂತುನಿಂದ 200 ಉದ್ಯೋಗಿಗಳಿಗೆ ಕೊಕ್
L&T Infotech And Mindtree Merger: ಎಲ್​ಅಂಡ್​ಟಿ ಇನ್​ಫೋಟೆಕ್ ಹಾಗೂ ಮೈಂಡ್​ಟ್ರೀ ವಿಲೀನ ಘೋಷಣೆ

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.