AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಗತಿಶಕ್ತಿ ಯೋಜನೆಗೆ 5 ವರ್ಷ: 18 ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳ ನಿರ್ವಹಣೆ

ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ₹18.66 ಲಕ್ಷ ಕೋಟಿಗೂ ಅಧಿಕ ಮೌಲ್ಯದ 396 ಪ್ರಮುಖ ಮೂಲಭೂತ ಸೌಕರ್ಯ ಯೋಜನೆಗಳನ್ನು ನಿರ್ವಹಿಸಲಾಗುತ್ತಿದೆ. ವಿವಿಧ ಇಲಾಖೆಗಳ ಮಧ್ಯೆ ಸಮನ್ವಯತೆ ತಂದು ಯೋಜನೆಗಳನ್ನು ಕ್ಷಿಪ್ರವಾಗಿ ಜಾರಿಗೆ ತರಲಾಗುತ್ತದೆ. ಜಿಐಎಸ್ ಆಧಾರಿತ ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ನಡೆಯುತ್ತಿರುವ ಈ ಯೋಜನೆಗಳ ಪ್ರಮುಖ ವಿವರ ಇಲ್ಲಿದೆ.

ಪಿಎಂ ಗತಿಶಕ್ತಿ ಯೋಜನೆಗೆ 5 ವರ್ಷ: 18 ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳ ನಿರ್ವಹಣೆ
ಮೂಲಸೌಕರ್ಯ ಯೋಜನೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 13, 2026 | 2:10 PM

Share

ನವದೆಹಲಿ, ಅಕ್ಟೋಬರ್ 13: ವಿವಿಧ ಇಲಾಖೆಗಳ ಮಧ್ಯೆ ಸಮನ್ವಯತೆ ತಂದು ಮೂಲಸೌಕರ್ಯ ಯೋಜನೆಗಳನ್ನು ಕ್ಷಿಪ್ರವಾಗಿ ಜಾರಿಗೊಳಿಸಲು ಸರ್ಕಾರ ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ (PM GatiShakti National Master Plan) ಹಾಕಿಕೊಂಡಿದೆ. ಈ ಯೋಜನೆಗೆ ಈಗ ಐದು ವರ್ಷ ಆಗಿದೆ. ಈ ಪ್ಲಾನ್ ಅಡಿಯಲ್ಲಿ ದೇಶಾದ್ಯಂತ ಒಟ್ಟು ₹18.66 ಲಕ್ಷ ಕೋಟಿ ಮೌಲ್ಯದ 396 ಬೃಹತ್ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಸರ್ಕಾರದ ಇತ್ತೀಚಿನ ವರದಿ ತಿಳಿಸಿದೆ.

ನೆಟ್‌ವರ್ಕ್ ಪ್ಲಾನಿಂಗ್ ಗ್ರೂಪ್ (Network Planning Group) ಮೌಲ್ಯಮಾಪನ ಮಾಡಿರುವ ಒಟ್ಟು 396 ಪ್ರಮುಖ ಯೋಜನೆಗಳಲ್ಲಿ, ಈಗಾಗಲೇ 256 ಯೋಜನೆಗಳಿಗೆ ಅಧಿಕೃತ ಅನುಮೋದನೆ ದೊರೆತಿದೆ. ಇವುಗಳಲ್ಲಿ 198 ಯೋಜನೆಗಳು ಪ್ರಸ್ತುತ ವಿವಿಧ ಹಂತಗಳಲ್ಲಿ ಅನುಷ್ಠಾನಗೊಳ್ಳುತ್ತಿವೆ. ಯೋಜನೆಗೆ ಐದು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಏಕೀಕೃತ ಸಾರಿಗೆ ಮತ್ತು ಸಾಗಣೆ ವ್ಯವಸ್ಥೆ ಪ್ರಾಧಿಕಾರಕ್ಕೆ (ಐಟಿಎಲ್​ಎ) ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ಡಿಜಿಟಲ್ ಜಿಐಎಸ್ ಪ್ಲಾಟ್‌ಫಾರ್ಮ್ ಬೆಂಬಲ: ಈ ಸಂಪೂರ್ಣ ವ್ಯವಸ್ಥೆಯು ಅತ್ಯಾಧುನಿಕ ಜಿಐಎಸ್ (GIS-based) ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಯೋಜನೆಗಳ ಸ್ಥಳ ಆಯ್ಕೆ (Site Suitability), ಮಲ್ಟಿಮೋಡಲ್ ಕನೆಕ್ಟಿವಿಟಿ ಹಾಗೂ ಸಾಗಣೆ ವೆಚ್ಚವನ್ನು (Logistics Costs) ತಗ್ಗಿಸಲು ಇದು ನೆರವಾಗುತ್ತಿದೆ. 58 ಕೇಂದ್ರ ಸಚಿವಾಲಯಗಳು ಮತ್ತು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: ಈ ವರ್ಷ ಶೇ. 7 ಬೆಳವಣಿಗೆ ಸಾಧ್ಯತೆ; ಭಾರತದ ಆರ್ಥಿಕ ದರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದ ಐಎಂಎಫ್

ಆರ್ಥಿಕ ಬೆಳವಣಿಗೆಗೆ ಉತ್ತೇಜನ: ರಸ್ತೆಗಳು, ರೈಲ್ವೆಗಳು, ಬಂದರುಗಳು, ಜಲಮಾರ್ಗಗಳು, ವಿಮಾನ ನಿಲ್ದಾಣಗಳು ಮತ್ತು ಮಾಸ್ ಕನೆಕ್ಟಿವಿಟಿ ಸೇರಿದಂತೆ ಪ್ರಮುಖ ಮೂಲಭೂತ ಸೌಕರ್ಯ ರಂಗಗಳನ್ನು ಸಮನ್ವಯಗೊಳಿಸುವುದರ ಮೂಲಕ ದೇಶದ ವ್ಯಾಪಾರ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿತಗೊಳಿಸುವುದು ಈ ಮಾಸ್ಟರ್ ಪ್ಲಾನ್‌ನ ಪ್ರಮುಖ ಗುರಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ