Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆಗಿಂತಲೂ ಮುಂಚೆಯೇ ಬರಲಿದೆ ಪಿಎಂ ಕಿಸಾನ್ 15ನೇ ಕಂತಿನ ಹಣ; ಇಲ್ಲಿದೆ ಬಿಡುಗಡೆ ದಿನಾಂಕ, ಫಲಾನುಭವಿಗಳ ಪಟ್ಟಿ ಮೊದಲಾದ ವಿವರ

PM Kisan 15th Installment release date: ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 15ನೇ ಕಂತಿನ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಧ್ಯಮದ ಮೂಲಕ ಹಣ ವರ್ಗಾವಣೆ ಮಾಡುತ್ತಾರೆ,’ ಎಂದು ಸಚಿವ ತೋಮರ್ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ನಿರೀಕ್ಷೆಗಿಂತಲೂ ಮುಂಚೆಯೇ ಬರಲಿದೆ ಪಿಎಂ ಕಿಸಾನ್ 15ನೇ ಕಂತಿನ ಹಣ; ಇಲ್ಲಿದೆ ಬಿಡುಗಡೆ ದಿನಾಂಕ, ಫಲಾನುಭವಿಗಳ ಪಟ್ಟಿ ಮೊದಲಾದ ವಿವರ
ಪಿಎಂ ಕಿಸಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 13, 2023 | 5:18 PM

ನವದೆಹಲಿ, ನವೆಂಬರ್ 13: ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣದ ಬಿಡುಗಡೆಯ ದಿನಾಂಕ (PM Kisan 15th Installment release date) ಬಹಿರಂಗವಾಗಿದೆ. ನವೆಂಬರ್ 15ರಂದು 15ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ವಿಚಾರವನ್ನು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಪ್ರಕಟಿಸಿದ್ದಾರೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬುಧವಾರದಂದು 2,000 ರೂ ಹಣ ವರ್ಗಾವಣೆ ಆಗಲಿದೆ.

‘ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 15ನೇ ಕಂತಿನ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಧ್ಯಮದ ಮೂಲಕ ಹಣ ವರ್ಗಾವಣೆ ಮಾಡುತ್ತಾರೆ,’ ಎಂದು ಸಚಿವ ತೋಮರ್ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು 13ನೇ ಕಂತಿನ ಹಣದ ಬಿಡುಗಡೆಯನ್ನು ಮಾರ್ಚ್ 27ರಂದು ಬೆಳಗಾವಿಯಲ್ಲಿ ಪ್ರಕಟಿಸಿದ್ದರು. ಜುಲೈ 27ರಂದು 14ನೇ ಕಂತಿನ ಹಣವನ್ನು ಪ್ರಧಾನಿಯವರು ರಾಜಸ್ಥಾನದ ಸೀಕರ್​ನಲ್ಲಿ ಬಿಡುಗಡೆ ಮಾಡಿದ್ದರು. ಈಗ 15ನೇ ಕಂತಿನ ಹಣವನ್ನು ಜಾರ್ಖಂಡ್​ನ ಖೂಂಟಿಯಲ್ಲಿ ಅವರು ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾಫಿ ಬೆಳೆಗಾರರಿಗೆ ಡಬಲ್ ಶಾಕ್; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಕುಸಿತ; ಇಳುವರಿಯೂ ಕಡಿಮೆ, ಬೆಲೆಯೂ ಕಡಿಮೆ

ಕಳೆದ ಬಾರಿ 14ನೇ ಕಂತಿನಲ್ಲಿ ಸುಮಾರು 8.5 ಕೋಟಿ ಫಲಾನುಭವಿಗಳಿಗೆ 17,000 ಕೋಟಿ ರೂ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಾರಿಯೂ 8 ಕೋಟಿಗೂ ಹೆಚ್ಚು ಫಲಾನುಭವಿಗಳು 15ನೇ ಕಂತಿನ ಹಣ ಪಡೆಯಲಿದ್ದಾರೆ.

ಪಿಎಂ ಕಿಸಾನ್ ಸ್ಕೀಮ್​ನಲ್ಲಿ ನಿಮ್ಮ ಹೆಸರಿದೆಯಾ?

ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು 6,000 ರೂ ಹಣವನ್ನು ನೀಡುತ್ತದೆ. ಉಳುಮೆಯ ಜಮೀನು ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಸ್ಕೀಮ್​ನಲ್ಲಿ ನೀವು ನೊಂದಾಯಿಸಿಕೊಂಡಿದ್ದರೆ, ಫಲಾನುಭವಿಗಳ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ….

  • ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಿ: pmkisan.gov.in
  • ಮುಖ್ಯಪುಟದಲ್ಲಿ ಕೆಳಗೆ ತುಸು ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಭಾಗ ಕಾಣುತ್ತದೆ.
  • ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ
  • ಅಲ್ಲಿ ರಾಜ್ಯ, ಜಿಲ್ಲೆ, ಬ್ಲಾಕ್ ಹಾಗೂ ಗ್ರಾಮವನ್ನು ಆಯ್ಕೆ ಮಾಡಿ, ಗೆಟ್ ರಿಪೋರ್ಟ್ ಟ್ಯಾಬ್ ಒತ್ತಿರಿ.

ಇದನ್ನೂ ಓದಿ: ಅಮೇಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸಾರ್ವಕಾಲಿಕ ದಾಖಲೆ; 110 ಕೋಟಿ ವಿಸಿಟ್; ಸ್ಮಾರ್ಟ್​ಫೋನ್ ಭರಾಟೆ

ಈಗ ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ನೀವು ನೋಡಬಹುದು. ಕೇವಲ ನಿಮ್ಮ ಗ್ರಾಮ ಮಾತ್ರವಲ್ಲ, ದೇಶದ ಯಾವುದೇ ಭಾಗದ ಗ್ರಾಮದಲ್ಲಿರುವ ಫಲಾನುಭವಿಗಳ ಪಟ್ಟಿಯನ್ನು ಇದರಲ್ಲಿ ನೋಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Mon, 13 November 23

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ