ನವದೆಹಲಿ, ನವೆಂಬರ್ 13: ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣದ ಬಿಡುಗಡೆಯ ದಿನಾಂಕ (PM Kisan 15th Installment release date) ಬಹಿರಂಗವಾಗಿದೆ. ನವೆಂಬರ್ 15ರಂದು 15ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ವಿಚಾರವನ್ನು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಪ್ರಕಟಿಸಿದ್ದಾರೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬುಧವಾರದಂದು 2,000 ರೂ ಹಣ ವರ್ಗಾವಣೆ ಆಗಲಿದೆ.
‘ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 15ನೇ ಕಂತಿನ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಧ್ಯಮದ ಮೂಲಕ ಹಣ ವರ್ಗಾವಣೆ ಮಾಡುತ್ತಾರೆ,’ ಎಂದು ಸಚಿವ ತೋಮರ್ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರು 13ನೇ ಕಂತಿನ ಹಣದ ಬಿಡುಗಡೆಯನ್ನು ಮಾರ್ಚ್ 27ರಂದು ಬೆಳಗಾವಿಯಲ್ಲಿ ಪ್ರಕಟಿಸಿದ್ದರು. ಜುಲೈ 27ರಂದು 14ನೇ ಕಂತಿನ ಹಣವನ್ನು ಪ್ರಧಾನಿಯವರು ರಾಜಸ್ಥಾನದ ಸೀಕರ್ನಲ್ಲಿ ಬಿಡುಗಡೆ ಮಾಡಿದ್ದರು. ಈಗ 15ನೇ ಕಂತಿನ ಹಣವನ್ನು ಜಾರ್ಖಂಡ್ನ ಖೂಂಟಿಯಲ್ಲಿ ಅವರು ಬಿಡುಗಡೆ ಮಾಡಲಿದ್ದಾರೆ.
ಕಳೆದ ಬಾರಿ 14ನೇ ಕಂತಿನಲ್ಲಿ ಸುಮಾರು 8.5 ಕೋಟಿ ಫಲಾನುಭವಿಗಳಿಗೆ 17,000 ಕೋಟಿ ರೂ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಾರಿಯೂ 8 ಕೋಟಿಗೂ ಹೆಚ್ಚು ಫಲಾನುಭವಿಗಳು 15ನೇ ಕಂತಿನ ಹಣ ಪಡೆಯಲಿದ್ದಾರೆ.
ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು 6,000 ರೂ ಹಣವನ್ನು ನೀಡುತ್ತದೆ. ಉಳುಮೆಯ ಜಮೀನು ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಸ್ಕೀಮ್ನಲ್ಲಿ ನೀವು ನೊಂದಾಯಿಸಿಕೊಂಡಿದ್ದರೆ, ಫಲಾನುಭವಿಗಳ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ….
ಇದನ್ನೂ ಓದಿ: ಅಮೇಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸಾರ್ವಕಾಲಿಕ ದಾಖಲೆ; 110 ಕೋಟಿ ವಿಸಿಟ್; ಸ್ಮಾರ್ಟ್ಫೋನ್ ಭರಾಟೆ
ಈಗ ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ನೀವು ನೋಡಬಹುದು. ಕೇವಲ ನಿಮ್ಮ ಗ್ರಾಮ ಮಾತ್ರವಲ್ಲ, ದೇಶದ ಯಾವುದೇ ಭಾಗದ ಗ್ರಾಮದಲ್ಲಿರುವ ಫಲಾನುಭವಿಗಳ ಪಟ್ಟಿಯನ್ನು ಇದರಲ್ಲಿ ನೋಡಬಹುದು.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:17 pm, Mon, 13 November 23