AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?

Farmers Corner: 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ. ಈಗ ನವೆಂಬರ್ 30ರೊಳಗೆ 15ನೇ ಕಂತಿನ ಹಣ ಬಿಡುಗಡೆ ಆಗಬೇಕಿದೆ.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಪಿಎಂ ಕಿಸಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 10, 2023 | 12:00 PM

Share

ನವದೆಹಲಿ, ಅಕ್ಟೋಬರ್ 10: ರೈತರ ವ್ಯವಸಾಯ ಕಾರ್ಯಗಳಿಗೆ ಧನಸಹಾಯ ಒದಗಿಸಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Yojana 15th Installment) 15ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಯೋಜನೆಯ 14ನೇ ಕಂತಿನ ಹಣ ಜುಲೈ 27ರಂದು ಬಿಡುಗಡೆ ಆಗಿತ್ತು. ಈಗ 15ನೇ ಕಂತಿನ ಹಣ ನವೆಂಬರ್ 30ರೊಳಗೆ ರಿಲೀಸ್ ಆಗಲಿದೆ. ಕೆಲ ವರದಿಗಳ ಪ್ರಕಾರ ನವೆಂಬರ್ 27 ಅಥವಾ 30ರಂದು ರೈತರ ಖಾತೆಗಳಿಗೆ 2,000 ರೂ ಹಣ ಬಿಡುಗಡೆ ಆಗಬಹುದು ಎನ್ನಲಾಗಿದೆ. ಆದರೆ, ಸರ್ಕಾರದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಒದಗಿಸಲಾಗಿಲ್ಲ. ಪಿಎಂ ಕಿಸಾನ್ ಪೋರ್ಟಲ್​ನಲ್ಲೂ ಮಾಹಿತಿ ನೀಡಲಾಗಿಲ್ಲ.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಠೇವಣಿ ದರ ಹೆಚ್ಚಳ; ಬೇರೆ ಬ್ಯಾಂಕುಗಳಲ್ಲಿ ಎಷ್ಟಿವೆ ಎಫ್​ಡಿ ಬಡ್ಡಿದರಗಳು?

ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹರು ಯಾರು?

ವ್ಯವಸಾಯ ಮಾಡುವ ರೈತರಿಗೆಂದು ಮಾಡಲಾದ ಸ್ಕೀಮ್ ಇದು. ಅಂದರೆ ಜಮೀನು ಹೊಂದಿರುವ ರೈತರು ಇದರ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ವೃತ್ತಿಪರರು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಇತ್ಯಾದಿಯವರು ಫಲಾನುಭವಿಗಳ ಕುಟುಂಬದಲ್ಲಿ ಇರಬಾರದು ಎಂಬಿತ್ಯಾದಿ ಕೆಲ ನಿರ್ಬಂಧಗಳಿವೆ.

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಪಟ್ಟಿ ನೋಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ ವಿಳಾಸ ಇಂತಿದೆ: pmkisan.gov.in

ಇದರ ಮುಖ್ಯಪುಟದಲ್ಲಿ ಫಾರ್ಮರ್ಸ್ ಕಾರ್ನರ್ (Farmers Corner) ಎಂಬ ಸೆಕ್ಷನ್ ಕಾಣಬಹುದು. ಇಲ್ಲಿ ಇ ಕೆವೈಸಿ, ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್, ನೋ ಯುವರ್ ಸ್ಟೇಟಸ್ ಇತ್ಯಾದಿ ನಾನಾ ಫೀಚರ್​ಗಳನ್ನು ನೀವು ನೋಡಬಹುದು. ಇದರಲ್ಲೇ ಇರುವ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.

ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಅನ್ನು ಆಯ್ದುಕೊಂಡು ನಿಮ್ಮ ಗ್ರಾಮವನ್ನೂ ಆರಿಸಿ. ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಗ್ರಾಮದಲ್ಲಿ ಯಾರಾರು ಈ ಸ್ಕೀಮ್ ಹೊಂದಿದ್ದಾರೋ ಅವರೆಲ್ಲರ ಹೆಸರಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಇದನ್ನೂ ಓದಿ: ಸ್ವಿಸ್ ಬ್ಯಾಂಕ್​ನಲ್ಲಿ ಖಾತೆ ತೆರೆಯೋದು ಹೇಗೆ? ಎಷ್ಟು ಗೌಪ್ಯತೆ ಕಾಯ್ದುಕೊಳ್ಳಲಾಗುತ್ತದೆ? ಇಲ್ಲಿದೆ ಡೀಟೇಲ್ಸ್

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಇ ಕೆವೈಸಿ ಮಾಡಿಸಿ

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಇ ಕೆವೈಸಿ ಮಾಡದೇ ಹೋಗಿರುವ ಸಾಧ್ಯತೆ ಇರುತ್ತದೆ. ಅದನ್ನೂ ಆದಷ್ಟೂ ಬೇಗ ಮಾಡಿ.

ಫಾರ್ಮರ್ಸ್ ಕಾರ್ನರ್​ನಲ್ಲಿ ಇ ಕೆವೈಸಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ ಸರ್ಚ್ ಮಾಡಿ. ಆಧಾರ್​ಗೆ ಜೋಡಿತವಾದ ಮೊಬೈನ್ ನಂಬರ್​ಗೆ ಬರುವ ಒಟಿಪಿಯನ್ನು ಹಾಕಿ ಕೆವೈಸಿ ಪೂರ್ಣಗೊಳಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:49 am, Tue, 10 October 23

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್