AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಪ್ರಧಾನಿ ಮೋದಿ ಇಂದು ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಇದು 9 ಕೋಟಿ ರೈತರಿಗೆ ₹18,000 ಕೋಟಿಗೂ ಹೆಚ್ಚು ಹಣ ಸಂದಾಯವಾಗಿದೆ. ಈ ಯೋಜನೆಯಡಿ ವಾರ್ಷಿಕ ₹6,000 ಸಹಾಯಧನ ಸಿಗುತ್ತದೆ. ಅರ್ಹ ರೈತರು pmkisan.gov.in ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಬಹುದು. ಆಧಾರ್, ಭೂಮಿ ವಿವರಗಳೊಂದಿಗೆ ಸುಲಭವಾಗಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಿರಿ.

ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ
Pm Kisan Yojana
ಅಕ್ಷಯ್​ ಪಲ್ಲಮಜಲು​​
|

Updated on:Nov 19, 2025 | 4:56 PM

Share

ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Yojana) ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆ ಉದ್ಘಾಟಿಸಿ ಪಿಎಂ ಕಿಸಾನ್ ಹಣವನ್ನೂ ಬಿಡುಗಡೆ ಮಾಡಿದ್ದಾರೆ. ಇದು 9 ಕೋಟಿ ರೈತರಿಗೆ (Farmer) ಒಟ್ಟು 18,000 ಕೋಟಿ ರೂಗೂ ಅಧಿಕ ಹಣ ಸಂದಾಯವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ . ಒಟ್ಟು ವಾರ್ಷಿಕವಾಗಿ 6,000 ರೂ.ಗಳನ್ನು  ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ.

ಪ್ರಧಾನಿ ಮೋದಿ ಅವರು ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. ಹಿಂದಿನ 20 ನೇ ಕಂತನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, 2.4 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವಾಗಿದೆ. ಮೊದಲ 20 ಕಂತುಗಳಲ್ಲಿ, ಪ್ರಧಾನಿ ಮೋದಿ ಈ ಯೋಜನೆಯಡಿ 3,90,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಿತರಿಸಿದ್ದಾರೆ.

ಇದನ್ನೂ ಓದಿ: ಬರಲಿದೆ ಹೊಸ ಆಧಾರ್; ಹೆಸರು, ನಂಬರ್, ವಿಳಾಸ ಮರೆಮಾಚಿರುವ ಕಾರ್ಡ್ ಸದ್ಯದಲ್ಲೇ

ಪಿಎಂ ಕಿಸಾನ್ ಯೋಜನೆ ವೆಬ್​ಸೈಟ್ ಮೂಲಕ ರಿಜಿಸ್ಟರ್ ಮಾಡುವ ಕ್ರಮ ಇಲ್ಲಿದೆ:

ಪಿಎಂ ಕಿಸಾನ್ ಯೋಜನೆ ವೆಬ್​ಸೈಟ್​ ವಿಳಾಸ: pmkisan.gov.in

ಮುಖ್ಯಪುಟದಲ್ಲಿ ಕೆಳಗೆ ತುಸು ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ನೋಡಬಹುದು.

ಅಲ್ಲಿ ‘ನ್ಯೂ ಫಾರ್ಮರ್ ರಿಜಿಸ್ಟ್ರೇಶನ್’ ಅನ್ನು ಕ್ಲಿಕ್ ಮಾಡಿ.

ಇಲ್ಲಿ ನಿಮ್ಮ ಆಧಾರ್ ನಂಬರ್, ಮೊಬೈಲ್ ನಂಬರ್ ನಮೂದಿಸಬೇಕು. ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ, ನಂತರ ಒಟಿಪಿ ಪಡೆದು ಮುಂದುವರಿಯಿರಿ.

ಇಲ್ಲಿ ನೀವು ಯೋಜನೆಗೆ ನೊಂದಾಯಿಸಿಕೊಳ್ಳಬಹುದು. ನಿಮ್ಮ ಹೆಸರು, ಭೂಮಿಯ ವಿವರ, ಪಹಣಿಯ ಪ್ರತಿ ಇತ್ಯಾದಿ ದಾಖಲೆಗಳನ್ನು ಒದಗಿಸಬೇಕು.

ನಂತರ ಸೇವ್ ಕ್ಲಿಕ್ ಮಾಡಿರಿ.

ಫಲಾನುಭವಿಯಾಗಿದ್ದರೂ ಕಂತು ಸಿಕ್ಕಿಲ್ಲವೇ? ಏನು ಮಾಡಬೇಕೆಂದು ಇಲ್ಲಿದೆ:

ಸಹಾಯಕ್ಕಾಗಿ ಸ್ಥಳೀಯ ಕೃಷಿ ಕಚೇರಿ, ಸಾಮಾನ್ಯ ಸೇವಾ ಕೇಂದ್ರ (CSC) ಗಳಿಗೆ ಭೇಟಿ ನೀಡಿ.

ನಿಮ್ಮ ಕಂತಿನ ಸ್ಥಿತಿ ತಿರಸ್ಕೃತ, ಬಾಕಿ ಅಥವಾ ತಡೆಹಿಡಿಯಲಾಗಿದೆ ಎಂದು ತೋರಿಸುತ್ತಿದ್ದರೆ, ಈ ಕೇಂದ್ರ ಪರಿಶೀಲನೆ ಮಾಡಬಹುದು.

ಜತೆಗೆ ಸೀಡಿಂಗ್, ಆಧಾರ್ ಪರಿಶೀಲನೆ, KYC ಅಥವಾ ಬ್ಯಾಂಕ್ ವಿವರಗಳು ಅಥವಾ ಯಾವುದೇ ಇತರ ಹೊಂದಾಣಿಕೆಯಾಗದ ಸಮಸ್ಯೆಗಳು ಆಗಿದ್ದಾರೆ. ಈ ಕೇಂದ್ರದ ಸಿಬ್ಬಂದಿಗಳು ಸಹಾಯ ಮಾಡುತ್ತಾರೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 19 November 25

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು