ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Maan Dhan Yojana) ಸೇರಿದಂತೆ ಸರ್ಕಾರ ರೈತರಿಗೆಂದು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯೂ ಒಂದು. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪಿಎಂ ಕಿಸಾನ್ ಮಾನಧನ್ ಯೋಜನೆ ಎರಡೂ ಕೂಡ ಭಿನ್ನವಾಗಿದ್ದರೂ 2019ರಲ್ಲೇ ಎರಡೂ ಆರಂಭವಾಗಿರುವುದು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ ವ್ಯವಸಾಯಕ್ಕೆಂದು ಸರ್ಕಾರ ವರ್ಷಕ್ಕೆ 6,000 ರೂ ಧನಸಹಾಯ ನೀಡುತ್ತದೆ. ಆದರೆ, ಪಿಎಂ ಕಿಸಾನ್ ಮಾನಧನ್ ಯೋಜನೆಯಲ್ಲಿ ಸಣ್ಣ ರೈತರಿಗೆ ಮಾಸಿಕ 3,000 ರೂ ಪಿಂಚಣಿ ಕಲ್ಪಿಸಲಾಗುತ್ತದೆ.
ಇದರಲ್ಲಿ ಎರಡು ಹೆಕ್ಟೇರ್ ಅಥವಾ ಐದು ಎಕರೆವರೆಗೆ ಜಮೀನು ಹೊಂದಿರುವ ಹಾಗೂ 18ರಿಂದ 40 ವರ್ಷ ವಯೋಮಾನದೊಳಗಿನ ರೈತರು ಪ್ರಧಾನಮಂತ್ರಿ ಕಿಸಾನ್ ಮಾನಧನ್ ಯೋಜನೆಯಲ್ಲಿ ನೊಂದಣಿ ಮಾಡಲು ಅರ್ಹರಿರುತ್ತಾರೆ. ಸದ್ಯ 19,47,588 ರೈತರು ಈ ಯೋಜನೆಗೆ ನೊಂದಾಯಿಸಿಕೊಂಡಿದ್ದಾರೆ.
ಇದರಲ್ಲಿ ಅರ್ಹ ರೈತರು ತಿಂಗಳಿಗೆ 55 ರೂನಿಂದ 200 ರೂವರೆಗೆ ಹಣವನ್ನು ಪಿಂಚಣಿ ನಿಧಿಗೆ ತುಂಬಿಸುತ್ತಾ ಹೋಗಬೇಕು. ಕೇಂದ್ರ ಸರ್ಕಾರ ಕೂಡ ಇಷ್ಟೇ ಹಣವನ್ನು ನಿಧಿಗೆ ಹಾಕುತ್ತದೆ. ಒಂದು ವೇಳೆ 18 ವರ್ಷ ವಯಸ್ಸಿನಲ್ಲಿ ಈ ಯೋಜನೆ ಆರಂಭಿಸಿದರೆ ತಿಂಗಳಿಗೆ ಕನಿಷ್ಠ 55 ರೂನಂತೆ ಕಟ್ಟಿಕೊಂಡು ಹೋಗಬೇಕು. ಒಂದು ವೇಳೆ 40ನೇ ವಯಸ್ಸಿನಲ್ಲಿ ಯೋಜನೆ ಪಡೆದರೆ ತಿಂಗಳಿಗೆ ಕಟ್ಟಬೇಕಾಗಿರುವ ಕನಿಷ್ಠ ಮೊತ್ತ 200 ರೂ ಕಟ್ಟಬೇಕು.
ಇದನ್ನೂ ಓದಿ: ಪಿಎಂ ಕಿಸಾನ್ ಫಲಾನುಭವಿಗಳು, ಕಟ್ಟಡ ಕಾರ್ಮಿಕರಿಗೆ 10 ಲಕ್ಷ ರೂವರೆಗೆ ವಿಮಾ ಕವರೇಜ್?
60 ವರ್ಷದವರೆಗೆ ಪ್ರತೀ ತಿಂಗಳು ಪಿಂಚಣಿ ನಿಧಿಗೆ ಕಟ್ಟಬೇಕು. ಅದಾದ ಬಳಿಕ ತಿಂಗಳಿಗೆ 3,000 ರೂ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಪಿಂಚಣಿಯನ್ನು ರೈತರು ಪಡೆಯಬಹುದು.
ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ನೀಡಿ ನೊಂದಾಯಿಸಬೇಕು. ರೈತರ ವಯಸ್ಸಿಗೆ ಅನುಗುಣವಾಗಿ ಅವರು ಕನಿಷ್ಠ ಎಷ್ಟು ಹಣ ಕಟ್ಟಬೇಕು ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ. ಗ್ರಾಮ ಮಟ್ಟದ ಉದ್ದಿಮೆದಾರ ಈ ನೊಂದಾವಣಿಯಲ್ಲಿ ಸಹಾಯ ಮಾಡುತ್ತಾರೆ. ಅರ್ಹ ರೈತರು ಮೊದಲ ಕಂತನ್ನು ನಗದು ರೂಪದಲ್ಲಿ ಆ ಉದ್ದಿಮೆದಾರನಿಗೆ ನೀಡಬೇಕು. ಬಳಿಕ ಆಟೊ ಡೆಬಿಟ್ ಅರ್ಜಿ ತುಂಬಿಸಿ ಸಲ್ಲಿಸಬೇಕು. ಆ ಬಳಿಕ ಪ್ರತೀ ತಿಂಗಳು ಕೂಡ ಎಸ್ಬಿ ಖಾತೆಯಿಂದ ನಿರ್ದಿಷ್ಟ ಮೊತ್ತದ ಹಣವು ಪಿಂಚಣಿ ನಿಧಿಗೆ ಹೋಗುತ್ತಿರುತ್ತದೆ.
ಯೋಜನೆಯಲ್ಲಿ ನೊಂದಣಿ ಮಾಡಿಕೊಂಡ ಬಳಿಕ ರೈತರಿಗೆ ವಿಶೇಷ ಕಿಸಾನ್ ಪೆನ್ಷನ್ ಅಕೌಂಟ್ ನಂಬರ್ (ಕೆಪಿಎಎನ್) ಸೃಷ್ಟಿಯಾಗುತ್ತದೆ. ಬಳಿಕ ಕಿಸಾನ್ ಕಾರ್ಡ್ ಕೊಡಲಾಗುತ್ತದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 11:09 am, Thu, 18 January 24