AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ರೈತರಿಗೆ ಹೊಸ ವರ್ಷದ ಗಿಫ್ಟ್; ಬಿಡುಗಡೆಯಾಗಲಿದೆ ಪಿಎಂ ಕಿಸಾನ್ 13ನೇ ಕಂತಿನ ಹಣ

PM Kisan 13th Installment; ಹೊಸ ವರ್ಷದಂದು ಸರ್ಕಾರವು ರೈತರಿಗೆ 2,000 ರೂ. ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸರ್ಕಾರ ಇನ್ನಷ್ಟೇ ಮಾಡಬೇಕಿದೆ.

PM Kisan: ರೈತರಿಗೆ ಹೊಸ ವರ್ಷದ ಗಿಫ್ಟ್; ಬಿಡುಗಡೆಯಾಗಲಿದೆ ಪಿಎಂ ಕಿಸಾನ್ 13ನೇ ಕಂತಿನ ಹಣ
ಪಿಎಂ ಕಿಸಾನ್ ಸಮ್ಮಾನ್ ನಿಧಿ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Updated By: Digi Tech Desk|

Updated on:Dec 27, 2022 | 5:42 PM

Share

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (PM-KISAN) 13ನೇ ಕಂತಿನ ಹಣ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇನ್ನೂ ಆಗಿಲ್ಲ. ಇದೀಗ, ಹೊಸ ವರ್ಷದಂದು ಸರ್ಕಾರವು ರೈತರಿಗೆ 2,000 ರೂ. ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 13ನೇ ಕಂತಿನ ಹಣ ಫೆಬ್ರವರಿ-ಮಾರ್ಚ್ ಮಧ್ಯೆ ವರ್ಗಾವಣೆಯಾಗಬಹುದು ಎಂದು ‘ಎಬಿಪಿ ನ್ಯೂಸ್’ ವರದಿ ಮಾಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸರ್ಕಾರ ಇನ್ನಷ್ಟೇ ಮಾಡಬೇಕಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಮೂರು ಕಂತುಗಳಲ್ಲಿ 2,000 ರೂ.ನಂತೆ ವಾರ್ಷಿಕ 6,000 ರೂ. ನೀಡಲಾಗುತ್ತಿದೆ.

ಪಿಎಂ ಕಿಸಾನ್ 13ನೇ ಕಂತಿನ ಹಣ ಜಮೆ ಆಗಿದೆಯೇ, ಚೆಕ್​ ಮಾಡುವುದು ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಹಣ ಬಿಡುಗಡೆ ಆಗಿದೆಯೇ? ಅದು ಖಾತೆಗೆ ವರ್ಗಾವಣೆಯಾಗಿದೆಯೇ ಎಂದು ಆನ್​ಲೈನ್ ಮೂಲಕ ಪರಿಶೀಲಿಸುವ ಹಂತ ಹಂತದ ವಿವರ ಇಲ್ಲಿ ನೀಡಲಾಗಿದೆ.

  • ಪಿಎಂ ಕಿಸಾನ್ (www.kisan.gov.in) ಭೇಟಿ ನೀಡಿ.
  • ವೆಬ್ ಪುಟದ ಬಲಭಾಗದ ಅಂಚಿನಲ್ಲಿರುವ ‘ಫಾರ್ಮರ್ಸ್ ಕಾರ್ನರ್’ಗೆ ಸ್ಕ್ರಾಲ್ ಮಾಡಿ.
  • ‘ಬೆನಿಫೀಷಿಯರಿ ಸ್ಟೇಟಸ್’ ಎಂಬ ಸೆಕ್ಷನ್ ಅನ್ನು ಕ್ಲಿಕ್ ಮಾಡಿ.
  • ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಕಾಣಿಸುವ ಅರ್ಜಿಯಲ್ಲಿ ಫಲಾನುಭವಿಯ ಹೆಸರು ಭರ್ತಿ ಮಾಡಬೇಕು.
  • ಹೊಸ ಪುಟದಲ್ಲಿ ಯಾವುದನ್ನು ಹುಡುಕಲು ಬಯಸುತ್ತೀರಿ ಎಂಬ ಎರಡು ಆಯ್ಕೆಗಳಿರುತ್ತವೆ.
  • ದೂರವಾಣಿ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು.
  • ಮೊಬೈಲ್ ಫೋನ್ ಸಂಖ್ಯೆಯನ್ನೂ ಆಯ್ಕೆ ಮಾಡಬಹುದು.
  • ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿದಾಗ ಒಟಿಪಿ ಸಂದೇಶ ಬರುತ್ತದೆ. ಅದನ್ನು ನಮೂದಿಸಬೇಕು.
  • ‘ಗೆಟ್ ಡಾಟಾ’ ಆಯ್ಕೆಯನ್ನು ಕ್ಲಿಕ್ ಮಾಡಿದಾಗ ಪಾವತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದು ಕಾಣಿಸುತ್ತದೆ.
  • ನಂತರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬ ಸಂದೇಶ ಕಾಣಿಸುತ್ತದೆ.
  • ನೋಂದಣಿ ಸಂಖ್ಯೆಯ ಆಧಾರದಲ್ಲಿ ಸ್ಥಿತಿಗತಿ ಪರಿಶೀಲಿಸಲು ಬಯಸುತ್ತೀರಾದರೆ, ಅದನ್ನು ನಮೂದಿಸಿ. ನಂತರ ‘ಗೆಟ್ ಡಾಟಾ’ ಆಯ್ಕೆಯನ್ನು ಕ್ಲಿಕ್ ಮಾಡಿ. ನಂತರ ನಿಮಗೆ ಸ್ಥಿತಿಗತಿ ಏನಿದೆ ಎಂಬುದು ಕಾಣಿಸುತ್ತದೆ.
  • 13ನೇ ಕಂತಿನ ಹಣ ಬಿಡುಗಡೆ ಆಗಿದೆಯೋ ಇಲ್ಲವೋ ಎಂಬುದು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎಂದರೇನು?

ಪಿಎಂ ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ. ನೀಡಲಾಗುತ್ತದೆ. 2,000 ರೂ.ಗಳ ಮೂರು ಕಂತಿನಲ್ಲಿ ಹಣವನ್ನು ರೈತರ ಬ್ಯಾಂಕ್​ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಅರ್ಹ ರೈತರ ಕುಟುಂಬದವರು, ಅಂದರೆ ರೈತನ ಪತ್ನಿ, ಸಣ್ಣ ಮಕ್ಕಳೂ ಕಂತಿನ ಹಣ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ರೈತರು ಯಾರು ಎಂಬುದನ್ನು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಗುರುತಿಸುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Tue, 27 December 22