ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (PM-KISAN) 13ನೇ ಕಂತಿನ ಹಣ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇನ್ನೂ ಆಗಿಲ್ಲ. ಇದೀಗ, ಹೊಸ ವರ್ಷದಂದು ಸರ್ಕಾರವು ರೈತರಿಗೆ 2,000 ರೂ. ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 13ನೇ ಕಂತಿನ ಹಣ ಫೆಬ್ರವರಿ-ಮಾರ್ಚ್ ಮಧ್ಯೆ ವರ್ಗಾವಣೆಯಾಗಬಹುದು ಎಂದು ‘ಎಬಿಪಿ ನ್ಯೂಸ್’ ವರದಿ ಮಾಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸರ್ಕಾರ ಇನ್ನಷ್ಟೇ ಮಾಡಬೇಕಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಮೂರು ಕಂತುಗಳಲ್ಲಿ 2,000 ರೂ.ನಂತೆ ವಾರ್ಷಿಕ 6,000 ರೂ. ನೀಡಲಾಗುತ್ತಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಹಣ ಬಿಡುಗಡೆ ಆಗಿದೆಯೇ? ಅದು ಖಾತೆಗೆ ವರ್ಗಾವಣೆಯಾಗಿದೆಯೇ ಎಂದು ಆನ್ಲೈನ್ ಮೂಲಕ ಪರಿಶೀಲಿಸುವ ಹಂತ ಹಂತದ ವಿವರ ಇಲ್ಲಿ ನೀಡಲಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ. ನೀಡಲಾಗುತ್ತದೆ. 2,000 ರೂ.ಗಳ ಮೂರು ಕಂತಿನಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಅರ್ಹ ರೈತರ ಕುಟುಂಬದವರು, ಅಂದರೆ ರೈತನ ಪತ್ನಿ, ಸಣ್ಣ ಮಕ್ಕಳೂ ಕಂತಿನ ಹಣ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ರೈತರು ಯಾರು ಎಂಬುದನ್ನು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಗುರುತಿಸುತ್ತವೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:24 pm, Tue, 27 December 22