PM Kisan 11th Installment: ಪಿಎಂ ಕಿಸಾನ್ ಸಮ್ಮಾನ್ ನಿಧಿ 11ನೇ ಕಂತು ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಮೇ 31ರಂದು ಬಿಡುಗಡೆ ಮಾಡಿದರು.

PM Kisan 11th Installment: ಪಿಎಂ ಕಿಸಾನ್ ಸಮ್ಮಾನ್ ನಿಧಿ 11ನೇ ಕಂತು ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:May 31, 2022 | 1:52 PM

ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮೇ 31ನೇ ತಾರೀಕಿನ ಮಂಗಳವಾರದಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಬಿಡುಗಡೆ ಮಾಡಲಾಯಿತು. ಸ್ವತಃ ಪ್ರಧಾನಿ ಮೋದಿ 21 ಸಾವಿರ ಕೋಟಿ ಮೊತ್ತವನ್ನು 10 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಸಮಾವೇಶದಲ್ಲಿ ಬಿಡುಗಡೆ ಮಾಡಿದರು. ಈ ಯೋಜನೆ ಅಡಿಯಲ್ಲಿ ರೈತ ಕುಟುಂಬಗಳಿಗೆ 2000 ರೂಪಾಯಿಯ ಅನುದಾನ ದೊರೆಯುತ್ತದೆ. ಇಲ್ಲಿಯ ತನಕ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ವೆಚ್ಚ ಮಾಡಲಾಗಿದೆ.

ಎರಡು ಸಾವಿರ ರೂಪಾಯಿಯಂತೆ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ಬಿಡುಗಡೆ ಮಾಡಲಾಗುತ್ತದೆ. ಇದರೊಂದಿಗೆ ವಾರ್ಷಿಕವಾಗಿ ಒಂದು ಕುಟುಂಬಕ್ಕೆ 6000 ರೂಪಾಯಿ ಸಿಗುತ್ತದೆ. ಈ ಕಂತು ತಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಿದೆಯೇ ಎಂದು ಪರಿಶೀಲನೆ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Kisan Samman Nidhi: ಒಂದು ಕುಟುಂಬದಲ್ಲಿ ಎಷ್ಟು ಮಂದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪ್ರಯೋಜನ ಪಡೆಯಬಹುದು?

Published On - 1:50 pm, Tue, 31 May 22