PM Kisan 14th Installment: ಕೃಷಿಕರಿಗೆ ನೀಡುವ ಪಿಎಂ ಕಿಸಾನ್ 14ನೇ ಕಂತಿನ ಹಣ ಮುಂದಿನ ವಾರ ಬಿಡುಗಡೆ? ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ

2023 June 3rd Week Release Date: ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಪ್ರಕಾರ ಜೂನ್ 3ನೇ ವಾರದಲ್ಲಿ ಕೇಂದ್ರದಿಂದ 14ನೇ ಕಂತಿನ ಹಣ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಕೆಲ ವರದಿಗಳು ಜೂನ್ 19ರ ದಿನದತ್ತ ಬೊಟ್ಟು ಮಾಡಿವೆ.

PM Kisan 14th Installment: ಕೃಷಿಕರಿಗೆ ನೀಡುವ ಪಿಎಂ ಕಿಸಾನ್ 14ನೇ ಕಂತಿನ ಹಣ ಮುಂದಿನ ವಾರ ಬಿಡುಗಡೆ? ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ
ಪಿಎಂ ಕಿಸಾನ್ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 12, 2023 | 1:25 PM

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Samman Nidhi Yojana) ರೈತರಿಗೆ ಕೇಂದ್ರ ಸರ್ಕಾರ ಒದಗಿಸುವ ಸಹಾಯಧನದಲ್ಲಿ 14ನೇ ಕಂತಿನ 2,000 ರೂ ಹಣ (PM Kisan 14th Installment) ಯಾವಾಗ ಬೇಕಾದರೂ ಬಿಡುಗಡೆ ಆಗುವ ಸಾಧ್ಯತೆ ಇದೆ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಪ್ರಕಾರ ಜೂನ್ 3ನೇ ವಾರದಲ್ಲಿ ಕೇಂದ್ರದಿಂದ ಹಣ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ಬಿಡುಗಡೆ ಯಾವಾಗ ಎಂದು ಮುಂಚಿತವಾಗಿ ಹೇಳುವುದು ಅಪರೂಪ. ಆದರೆ ಕೆಲ ವರದಿಗಳು ಜೂನ್ 19ರಂದು ಪಿಎಂ ಕಿಸಾನ್ ಹಣ ಬರಬಹುದು ಎಂದು ನಿರೀಕ್ಷಿಸಿವೆ.

2019ರ ಫೆಬ್ರುವರಿಯಲ್ಲಿ ಆರಂಭಗೊಂಡ ಪಿಎಂ ಕಿಸಾನ್ ಯೋಜನೆಯಲ್ಲಿ ಸರ್ಕಾರ ಕೃಷಿ ಜಮೀನು ಮಾಲೀಕರಿಗೆ ಪ್ರತೀ ವರ್ಷ 6,000 ರೂ ನೀಡುತ್ತದೆ. ಪ್ರತೀ ವರ್ಷ ಮೂರು ಕಂತುಗಳಲ್ಲಿ ತಲಾ 2,000 ರೂನಂತೆ ಈ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುತ್ತದೆ. ಈವರೆಗೂ 13 ಕಂತುಗಳ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. 2023ರ ಮಾರ್ಚ್ ತಿಂಗಳಲ್ಲಿ 13ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಬೆಳಗಾವಿಯ ಸಾರ್ವಜನಿಕ ಸಮಾವೇಸದಲ್ಲಿ ಪ್ರಧಾನಿ ನರೇಂದ್ರ ಮೋದಿ 13ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆ ಆಗಿರುವುದಾಗಿ ಘೋಷಣೆ ಮಾಡಿದ್ದರು.

ಇದನ್ನೂ ಓದಿPM Kisan: ಪಿಎಂ ಕಿಸಾನ್ ಯೋಜನೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ತಿಳಿಯುವುದು ಹೇಗೆ? ನೊಂದಣಿ ಹೇಗೆ? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರದಿಂದ 6 ಸಾವಿರ ರೂ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ 4,000 ರೂ, ಒಟ್ಟು 10,000 ರೂ ಹಣವು ಒಂದು ವರ್ಷಕ್ಕೆ ಸಿಗುತ್ತದೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಈ ಹೆಚ್ಚುವರಿ ಹಣವನ್ನು ರಾಜ್ಯ ಸರ್ಕಾರ ನೀಡುತ್ತದಾ ಎಂಬುದು ಗೊತ್ತಿಲ್ಲ.

ಈವರೆಗೂ ಕಂತು ಬಿಡುಗಡೆ ಆದ ದಿನ ಗಣನೆಗೆ ತೆಗೆದುಕೊಂಡರೆ ಈ ಬಾರಿ ಏಪ್ರಿಲ್​ನಿಂದ ಜುಲೈವರೆಗಿನ ಅವಧಿಯಲ್ಲಿ ಹಣ ಬಿಡುಗಡೆ ಆಗಬಹುದು. ಆಗಸ್ಟ್​ನಿಂದ ನವೆಂಬರ್, ಹಾಗು ಡಿಸೆಂಬರ್​ನಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಹಣ ಬಿಡುಗಡೆ ಆಗುವುದು ವಾಡಿಕೆ. ಈ ಲೆಕ್ಕಾಚಾರದಲ್ಲಿ 14ನೇ ಕಂತಿನ ಹಣ ಬಿಡುಗಡೆಗೆ ಜುಲೈವರೆಗೂ ಸಮಯ ಇದೆ. ಆದರೆ, ವರದಿಗಳ ಪ್ರಕಾರ ಜೂನ್ 3ನೇ ವಾರದಲ್ಲೇ 2,000 ರೂ ಹಣ ಬಿಡುಗಡೆ ಆಗಬಹುದು.

ಇದನ್ನೂ ಓದಿPoor and Inflation: ಬಡವರು ಇನ್ನಷ್ಟು ಬಡವರಾಗಲು, ಸಿರಿವಂತರು ಇನ್ನಷ್ಟು ಸಿರಿವಂತರಾಗಲು ಏನು ಕಾರಣ? ವಿಷ ವರ್ತುಲವಾ ಹಣದುಬ್ಬರ? ಕುತೂಹಲದ ಉದಾಹರಣೆ

ಪಿಎಂ ಕಿಸಾನ್ ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ

ಪಿಎಂ ಕಿಸಾನ್ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in. ಇಲ್ಲಿ ಬಹಳಷ್ಟು ಅಗತ್ಯ ಮಾಹಿತಿ ಮತ್ತು ಸೇವೆ ಪಡೆಯಬಹುದು.

ಈ ಪೋರ್ಟಲ್​ಗೆ ಭೇಟಿ ನೀಡಿದರೆ ಮುಖ್ಯಪುಟದಲ್ಲಿ ಫಾರ್ಮರ್ ಕಾರ್ನರ್ ಸೆಕ್ಷನ್​ನಲ್ಲಿ ಪಿಎಂ ಕಿಸಾನ್ ಬೆನಿಫಿಶಿಯರಿ ಲಿಸ್ಟ್ ಕಾಣಬಹುದು.

ಅಲ್ಲಿ ರಾಜ್ಯ, ಜಿಲ್ಲೆ, ತಾಲೂಕು, ಊರು ಆಯ್ಕೆ ಮಾಡಿಕೊಂಡರೆ ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣಬಹುದು.

ಇನ್ನು, ನೀವು ಇಕೆವೈಸಿ ಮಾಡಿರದೇ ಹೋದರೆ ಯೋಜನೆಯ ಹಣ ಬರುವುದಿಲ್ಲ. ಮೊದಲು ಇಕೆವೈಸಿ ಸಲ್ಲಿಸಿ. ಇದೇ ಮೊದಲ ಬಾರಿಗೆ ಪಿಎಂ ಕಿಸಾನ್ ಯೋಜನೆಯಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಳ್ಳುವುದಿದ್ದರೆ ಅದಕ್ಕೆ ಈ ಪೋರ್ಟಲ್​ನಲ್ಲಿ ಅವಕಾಶ ಇದೆ. ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಕ್ಲಿಕ್ ಮಾಡಿ ಆ ಮೂಲಕ ಅರ್ಜಿ ತುಂಬಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ