AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 14th Instalment: ಪಿಎಂ ಕಿಸಾನ್ 14ನೇ ಕಂತಿನ ಹಣ ಬಿಡುಗಡೆ ದಿನಾಂಕ ಬಹಿರಂಗ; ಮುಂದಿನ ವಾರವೇ ಹಣ ಬಿಡುಗಡೆ; ಫಲಾನುಭವಿಗಳ ಪಟ್ಟಿ ನೋಡಿ

e-KYC Done Before July 15th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತಿನ ಹಣ 2023ರ ಜುಲೈ 27ರಂದು ಬಿಡುಗಡೆ ಆಗಲಿದೆ. ಜುಲೈ 15ರೊಳಗೆ ಇಕೆವೈಸಿ ಮಾಡಿಸಿರುವ ಫಲಾನುಭವಿಗಳಿಗೆ ಹಣ ಸಿಗಲಿದೆ.

PM Kisan 14th Instalment: ಪಿಎಂ ಕಿಸಾನ್ 14ನೇ ಕಂತಿನ ಹಣ ಬಿಡುಗಡೆ ದಿನಾಂಕ ಬಹಿರಂಗ; ಮುಂದಿನ ವಾರವೇ ಹಣ ಬಿಡುಗಡೆ; ಫಲಾನುಭವಿಗಳ ಪಟ್ಟಿ ನೋಡಿ
ಪಿಎಂ ಕಿಸಾನ್ ಸ್ಕೀಮ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 20, 2023 | 4:38 PM

Share

ನವದೆಹಲಿ, ಜುಲೈ 20: ರೈತರ ವ್ಯವಸಾಯಕ್ಕೆ ಸಹಾಯವಾಗಲೆಂದು ಸರ್ಕಾರ ರೂಪಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) 14ನೇ ಕಂತಿನ ಹಣ ಬಿಡುಗಡೆಗೆ ಎರಡು ತಿಂಗಳಿಂದಲೂ ಫಲಾನುಭವಿಗಳು ನಿರೀಕ್ಷಿಸುತ್ತಿದ್ದಾರೆ. ಇದೀಗ ಹಣ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ. ನ್ಯೂಸ್18ನಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ 2023ರ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಮುಂದಿನ ಗುರುವಾರ 8.5 ಕೋಟಿ ರೈತರ ಖಾತೆಗಳಿಗೆ 2,000 ರೂ ಜಮೆ ಆಗಲಿದೆ.

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಫೆಬ್ರುವರಿ 27ರಂದು ಬಿಡುಗಡೆ ಆಗಿತ್ತು. ಬೆಳಗಾವಿಯ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಣ ಬಿಡುಗಡೆಯನ್ನು ಘೋಷಿಸಿದ್ದರು. ಈಗ 14ನೇ ಕಂತಿನ ಹಣ ಬಿಡುಗಡೆಯನ್ನು ಪ್ರಧಾನಿಗಳು ರಾಜಸ್ಥಾನದ ಸಿಕರ್​ನಲ್ಲಿ ಪ್ರಕಟಿಸಲಿದ್ದಾರೆ. ಜುಲೈ 27ರಂದು ಅವರು ರೈತರೊಂದಿಗೆ ಸಂವಾದ ನಡೆಸುವ ನಿರೀಕ್ಷೆ ಇದೆ.

ಜೂನ್ 15ರೊಳಗೆ ಇಕೆವೈಸಿ ಮಾಡಿಸಿರಬೇಕಾ?

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ನೊಂದಣಿ ಮಾಡಿಸಿದ್ದರೆ ಸಾಲದು, ಇಕೆವೈಸಿ ಅಪ್​ಡೇಟ್ ಆಗಿರಬೇಕು. ಇಕೆವೈಸಿ ಮಾಡದಿದ್ದವರಿಗೆ 13ನೇ ಕಂತಿನ ಹಣ ಸಿಕ್ಕಿರಲಿಲ್ಲ. ಈ ಬಾರಿಯೂ ಅದೇ ಪರಿಸ್ಥಿತಿ ಬರುತ್ತದೆ.

ಇದನ್ನೂ ಓದಿPM Kisan Update: ಪಿಎಂ ಕಿಸಾನ್ ಅಪ್​ಡೇಟ್; 14ನೇ ಕಂತು ಬಿಡುಗಡೆಗೆ ಮುನ್ನ ಈ 3 ಸಂಗತಿ ಖಚಿತಪಡಿಸಿಕೊಳ್ಳಿ

ವರದಿಯ ಪ್ರಕಾರ 14ನೇ ಕಂತಿನ ಹಣ ಸಿಗಬೇಕಾದರೆ ಫಲಾನುಭವಿಗಳ ಖಾತೆಗಳಿಗೆ ಜೂನ್ 15ರೊಳಗೆ ಇಕೆವೈಸಿ ಅಪ್​ಡೇಟ್ ಆಗಿರಬೇಕು. ಹರ್ಯಾಣ ಸರ್ಕಾರ ಜೂನ್ 9ರಂದು ಮಾಡಿದ ಟ್ವೀಟ್​ನಲ್ಲಿ, ಜೂನ್ 15ರೊಳಗೆ ಇಕೆವೈಸಿ ಮಾಡುವಂತೆ ಯೋಜನೆಯ ಫಲಾನುಭವಿಗಳಿಗೆ ಮನವಿ ಮಾಡಿತ್ತು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಫಲಾನುಭವಿಗಳ ಹೆಸರು ನೋಡುವ ಕ್ರಮ

  • ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in
  • ಮುಖ್ಯಪುಟದ ಫಾರ್ಮರ್ಸ್ ಕಾರ್ನರ್ ಸೆಕ್ಷನ್​ನಲ್ಲಿ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಹಾಗೂ ಗ್ರಾಮವನ್ನು ಆಯ್ಕೆ ಮಾಡಿ, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ

ಇದನ್ನೂ ಓದಿPost Office Schemes: ಪೋಸ್ಟ್ ಆಫೀಸ್ ಸ್ಕೀಮ್​ಗಳ ಬಗ್ಗೆ ಕುತೂಹಲವಾ? ಇಲ್ಲಿದೆ ವಿವಿಧ ಯೋಜನೆಗಳು, ಬಡ್ಡಿ ದರಗಳ ವಿವರ

ಇಲ್ಲಿ ಆ ಗ್ರಾಮದ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಗಮನಿಸಿ. ಅದರಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ಇಕೆವೈಸಿ ಆಗದೇ ಇದ್ದಿರಬಹುದು, ಅಥವಾ ನೀವಿನ್ನೂ ನೊಂದಣಿ ಮಾಡಿಸದೇ ಇರಬಹುದು.

ಇದೇ ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ಇಕೆವೈಸಿ ಮಾಡಲು ಅವಕಾಶ ಸದಾ ಇರುತ್ತದೆ. ಹಾಗೆಯೇ, ಹೊಸದಾಗಿ ನೊಂದಣಿ ಮಾಡಿಸಬೇಕೆಂದರೆ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ, ಎಲ್ಲಾ ಅಗತ್ಯ ವಿವರ ತುಂಬಿ ಸಲ್ಲಿಸಿದರೆ ಯೋಜನೆಗೆ ನೀವು ನೊಂದಾಯಿಸಿಕೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ