AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಂದಿಲ್ಲವಾ? ಜೂನ್ 18ಕ್ಕೆ ಬಿಡುಗಡೆ ಆಗಲಿದೆ ಹಣ

PM Kisan Scheme 17th Installment release Date: ಮೋದಿ 3.0 ಸರ್ಕಾರ ಬಂದ ಬಳಿಕ ಪ್ರಧಾನಿಯವರು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಅದು ಅವರ ಮೊದಲ ಕ್ರಮ. ಜೂನ್ 18, ಮಂಗಳವಾರ ಹಣ ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 18ರಂದು ವಾರಾಣಸಿಗೆ ಭೇಟಿ ನೀಡುವಾಗ 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 20,000 ಕೋಟಿ ರೂ ಹಣ ವರ್ಗಾವಣೆ ಆಗಲಿದೆ.

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಂದಿಲ್ಲವಾ? ಜೂನ್ 18ಕ್ಕೆ ಬಿಡುಗಡೆ ಆಗಲಿದೆ ಹಣ
ಪಿಎಂ ಕಿಸಾನ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2024 | 11:42 AM

Share

ನವದೆಹಲಿ, ಜೂನ್ 16: ಕಳೆದ ವಾರ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ವಹಿಸಿಕೊಂಡ ಬಳಿಕ ಮೊದಲ ಕ್ರಮ ತೆಗೆದುಕೊಂಡಿದ್ದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ (PM Kisan Yojana 17th installment release) ಇರುವ ಕಡತಕ್ಕೆ ಸಹಿಹಾಕಿದ್ದು. ಜೂನ್ 18ರಂದು 9.26 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 20,000 ಕೋಟಿ ರೂ ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾರಾಣಸಿಗೆ ಭೇಟಿ ನೀಡಿದ ವೇಳೆ ಪಿಎಂ ಕಿಸಾನ್ ಯೋಜನೆ ಹಣವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪಿಎಂ ಆದ ಬಳಿಕ ವಾರಾಣಸಿ ಕ್ಷೇತ್ರಕ್ಕೆ ನೀಡಲಿರುವ ಮೊದಲ ಭೇಟಿ ಅದು. ರೈತರಿಗೆ ಕೃಷಿ ಕಾರ್ಯಗಳಿಗೆ ಸಹಾಯವಾಗುವ ರೀತಿಯಲ್ಲಿ ತರಬೇತಿ ಕೊಡಲಾದ ಸ್ವಸಹಾಯ ಸಂಘಗಳ 30,000 ಕೃಷಿ ಸಖಿಯರಿಗೆ ಈ ವೇಳೆ ಪ್ರಧಾನಿಗಳು ಪ್ರಮಾಣಪತ್ರಗಳನ್ನು ನೀಡಲಿದ್ದಾರೆ.

ಏನಿದು ಕೃಷಿ ಸಖಿ ಯೋಜನೆ?

ದೇಶಾದ್ಯಂತ ಇರುವ ವಿವಿಧ ಸ್ವಸಹಾಯ ಸಂಘಗಳಿಂದ 90,000 ಮಹಿಳೆಯರಿಗೆ ಕೃಷಿ ಕಾರ್ಯಗಳಲ್ಲಿ ತರಬೇತಿ ಕೊಡುವ ಯೋಜನೆಯೇ ಕೃಷಿ ಸಖಿ ಸ್ಕೀಮ್. ಕರ್ನಾಟಕ ಸೇರಿದಂತೆ 12 ಜಿಲ್ಲೆಗಳಿಂದ 34,000 ಮಹಿಳೆಯರಿಗೆ ಈ ಯೋಜನೆ ಅಡಿ ತರಬೇತಿ ನೀಡಿ ಪ್ರಮಾಣಪತ್ರ ಒದಗಿಸಲಾಗಿದೆ. ಸದ್ಯ 70,000 ಕೃಷಿ ಸಖಿಯರಿಗೆ ಗುರಿ ಇಡಲಾಗಿದೆ.

ಇದನ್ನೂ ಓದಿ: ಫಾರೆಕ್ಸ್ ರಿಸರ್ವ್ಸ್ ಮೊತ್ತ ಈಗ 655 ಬಿಲಿಯನ್ ಡಾಲರ್; ಮತ್ತೆ ಹೊಸ ದಾಖಲೆ

ಪಿಎಂ ಕಿಸಾನ್ ಯೋಜನೆ ಬಗ್ಗೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಜಮೀನು ಉಳುಮೆ ಮಾಡುವ ರೈತರಿಗೆ ಕೃಷಿ ಕಾರ್ಯಕ್ಕಾಗಿ ಧನಸಹಾಯ ಒದಗಿಸುವ ಉದ್ದೇಶ ಹೊಂದಿದೆ. ಈ ಸ್ಕೀಮ್​ನಲ್ಲಿ ಕೇಂದ್ರ ಸರ್ಕಾರ ಸದ್ಯ ವರ್ಷಕ್ಕೆ ಆರು ಸಾವಿರ ರೂ ನೀಡುತ್ತದೆ. ತಲಾ 2,000 ರೂನಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. 2019ರಲ್ಲಿ ಈ ಯೋಜನೆ ಆರಂಭವಾಗಿದ್ದು ಈವರೆಗೂ 16 ಕಂತುಗಳನ್ನು ಸರ್ಕಾರ ನೀಡಿದೆ. ಜೂನ್ 18ರಂದು 17ನೇ ಕಂತಿನ ಹಣ ಬಿಡುಗಡೆ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್