ನವದೆಹಲಿ, ಜೂನ್ 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) ಕೇಂದ್ರ ಸರ್ಕಾರದಿಂದ ನೀಡಲಾಗುವ 17ನೇ ಕಂತಿನ ಹಣ ಇಂದು ಬಿಡುಗಡೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ಮಂಗಳವಾರ ವಾರಾಣಸಿಯಲ್ಲಿ ಅಧಿಕೃತವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಸಂಜೆಯ ಒಳಗೆ 9.3 ಕೋಟಿ ರೈತರ ಖಾತೆಗಳಿಗೆ ಒಟ್ಟು 20,000 ಕೋಟಿ ರೂ ಹಣ ಜಮೆ ಆಗಲಿದೆ. ಪ್ರತಿಯೊಂದು ಖಾತೆಗೂ 2,000 ರೂ ಹಣ ವರ್ಗಾವಣೆ ಆಗಲಿದೆ.
ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂ ಕೊಡಲಾಗುತ್ತದೆ. ತಲಾ 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಆರು ಸಾವಿರ ರೂ ಅನ್ನು ಜಮೆ ಮಾಡಲಾಗುತ್ತದೆ. ಈವರೆಗೆ ಕೇಂದ್ರ ಸರ್ಕಾರ 16 ಕಂತುಗಳ ಹಣ ಬಿಡುಗಡೆ ಮಾಡಿದೆ. ಇವತ್ತು 17ನೇ ಕಂತಿನ ಹಣ ವರ್ಗಾವಣೆ ಆಗುತ್ತಿದೆ.
ಕಳೆದ ಒಂದು ವರ್ಷದಿಂದಲೂ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಅಪ್ಡೇಟ್ ಮಾಡುವಂತೆ ಸರ್ಕಾರ ತಿಳಿಸುತ್ತಲೇ ಇದೆ. ಕಳೆದ ಮೂರು ಬಾರಿಯಿಂದಲೂ ಇಕೆವೈಸಿ ಮಾಡದವರಿಗೆ ಯೋಜನೆಯ ಹಣ ಬರುತ್ತಿಲ್ಲ. ನೀವು ಯೋಜನೆಯ ಫಲಾನುಭವಿಗಳಾಗಿದ್ದು, ನಿಮಗೆ ಹಣ ಬರುತ್ತಿಲ್ಲವಾದಲ್ಲಿ ಇಕೆವೈಸಿ ಅಪ್ಡೇಟ್ ಮಾಡಿಲ್ಲದೇ ಇರಬಹುದು. ಒಂದು ವೇಳೆ ಇತ್ತೀಚೆಗೆ ನೀವು ಇಕೆವೈಸಿ ಅಪ್ಡೇಟ್ ಮಾಡಿದ್ದಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂದು ಪರಿಶೀಲಿಸಿ. ಹೇಗೆ ಆ ಪಟ್ಟಿ ನೋಡುವುದು, ಈ ವಿವರ ಕೆಳಗಿದೆ.
ಇದನ್ನೂ ಓದಿ: ಇನ್ಫೋಸಿಸ್ ಹುಬ್ಬಳ್ಳಿ ಕ್ಯಾಂಪಸ್ನಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಿಗಳಿಗೆ ಆಕರ್ಷಕ ಪ್ಯಾಕೇಜ್
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ