AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ

PM Kisan scheme, 18th installment date: ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ 2,000 ರೂ ಹಣ ಅಕ್ಟೋಬರ್ 5ಕ್ಕೆ ಬಿಡುಗಡೆ ಆಗಲಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 17 ಕಂತುಗಳ ಹಣವನ್ನು ಫಲಾನುಭವಿ ರೈತರು ಪಡೆದಿದ್ದಾರೆ. ವರ್ಷಕ್ಕೆ 6,000 ರೂ ನೀಡುವ ಈ ಸ್ಕೀಮ್​ಗೆ ರೈತರು ನೊಂದಾಯಿಸಿಕೊಳ್ಳುವುದು ಹೇಗೆ ಇತ್ಯಾದಿ ವಿವರ ಈ ಲೇಖನದಲ್ಲಿದೆ.

ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2024 | 11:30 AM

Share

ನವದೆಹಲಿ, ಸೆಪ್ಟೆಂಬರ್ 26: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ರಿಲೀಸ್ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಯಾರು ಅರ್ಹರು?

ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್​ಗೆ ಅರ್ಹರಾಗಿರುತ್ತಾರೆ. ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಇಲ್ಲಿಯವರೆಗೆ ಸುಮಾರು 10 ಕೋಟಿ ರೈತರು ಸ್ಕೀಮ್​ಗೆ ನೊಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಮೇಕ್ ಇನ್ ಇಂಡಿಯಾ’ ಕೈಂಕರ್ಯಕ್ಕೆ 10 ವರ್ಷ; ನರೇಂದ್ರ ಮೋದಿ ಪಟ್ಟಿ ಮಾಡಿದ ಸಾಧನೆಗಳ ವಿವರ

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸುವುದು ಹೇಗೆ?

ಯೋಜನೆಗೆ ನೊಂದಾಯಿಸಲು ಆಫ್​ಲೈನ್ ಮತ್ತು ಆನ್​ಲೈನ್ ಎರಡೂ ಮಾರ್ಗಗಳಲ್ಲಿ ಅವಕಾಶ ಇದೆ. ನಿಮ್ಮ ಗ್ರಾಮದ ಸಮೀಪ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಖುದ್ದಾಗಿ ನೊಂದಾಯಿಸಿಕೊಳ್ಳಬಹುದು. ಆಧಾರ್ ಕಾರ್ಡ್, ವೋಟರ್ ಐಡಿ, ಪಹಣಿ ಸರ್ಟಿಫಿಕೇಟ್, ಬ್ಯಾಂಕ್ ಖಾತೆ ಪ್ರತಿ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕಾಗಬಹುದು.

ಆನ್​ಲೈನ್​ನಲ್ಲಿ ಮಾಡಬೇಕೆಂದರೆ ಪಿಎಂ ಕಿಸಾನ್ ಸ್ಕೀಮ್​ನ ವೆಬ್​ಸೈಟ್​ಗೆ ಹೋಗಬೇಕು. ಅದರ ವಿಳಾಸ: pmkisan.gov.in/

ಇಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕಾಣಬಹುದು. ಅಲ್ಲಿ ಕ್ರಮಾವಳಿಗಳನ್ನು ಅನುಸರಿಸಿ ಯೋಜನೆಗೆ ನೊಂದಾಯಿಸಿಕೊಳ್ಳಲು ಸಾಧ್ಯವಿದೆ.

ನೀವೀಗಾಗಲೇ ನೊಂದಾಯಿಸಿದ್ದರೆ ಫಲಾನುಭವಿ ಪಟ್ಟಿ ಪರಿಶೀಲಿಸಿ

ನೀವು ಈಗಾಗಲೇ ಸ್ಕೀಮ್​ಗೆ ನೊಂದಾಯಿಸಿದ್ದು ಇನ್ನೂ ಕೂಡ ಕಂತಿನ ಹಣ ಬಂದಿಲ್ಲ ಎಂದಿದ್ದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಅದನ್ನು ಆನ್​ಲೈನ್​ನಲ್ಲೇ ಮಾಡಬಹುದು.

ಇದನ್ನೂ ಓದಿ: ದಯವಿಟ್ಟು… ಭಾರತ ಮೂಲದ ವಿನೋದ್ ಖೋಸ್ಲಾ ಬಳಿ ಕ್ಷಮೆ ಯಾಚಿಸಿದ ಇಲಾನ್ ಮಸ್ಕ್; ಕ್ಯಾಲಿಫೋರ್ನಿಯಾ ಬೀಚ್​ವೊಂದರ ಕಥೆ ಇದು

ಮೇಲೆ ತಿಳಿಸಿದ ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್​ನಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮವನ್ನು ಆಯ್ದುಕೊಂಡು ಸರ್ಚ್ ಕೊಡಿ. ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?