AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಬತ್ತು ಕೋಟಿಗೂ ಅಧಿಕ ರೈತರ ಖಾತೆಗೆ ನಾಳೆ ಶನಿವಾರ ಪಿಎಂ ಕಿಸಾನ್ ಹಣ ಬಿಡುಗಡೆ; ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ನೋಡಿ

PM Kisan scheme 18th installment release on Oct 5th: ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ 5ರಂದು ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ 17ನೇ ಕಂತಿನ ಹಣವನ್ನು ಉತ್ತರಪ್ರದೇಶದಿಂದ ಬಿಡುಗಡೆ ಮಾಡಿದ್ದರು. ಈಗ 18ನೇ ಕಂತಿನ ಹಣವನ್ನು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಲಿದ್ದಾರೆ. ಒಂಬತ್ತು ಕೋಟಿಗೂ ಅಧಿಕ ರೈತರಿಗೆ ನಾಳೆ ಶನಿವಾರ 2,000 ರೂ ಸಿಗಲಿದೆ.

ಒಂಬತ್ತು ಕೋಟಿಗೂ ಅಧಿಕ ರೈತರ ಖಾತೆಗೆ ನಾಳೆ ಶನಿವಾರ ಪಿಎಂ ಕಿಸಾನ್ ಹಣ ಬಿಡುಗಡೆ; ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ನೋಡಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 04, 2024 | 1:19 PM

Share

ನವದೆಹಲಿ, ಅಕ್ಟೋಬರ್ 4: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಪ್ರಧಾನಿಗಳು ನಾಳೆ ಭೇಟಿ ನೀಡಲಿದ್ದು ಅಂದೇ ಪಿಎಂ ಕಿಸಾನ್ ಹಣ ಬಿಡುಗಡೆ ಹಾಗು ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ ನಾಳೆ ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಆಗಲಿದೆ. 2019ರಲ್ಲಿ ಆರಂಭವಾದ ಈ ಸ್ಕೀಮ್​ನಲ್ಲಿ ಐದು ವರ್ಷದಲ್ಲಿ 3 ಲಕ್ಷ ಕೋಟಿಗೂ ಅಧಿಕ ಹಣವನ್ನು ಸರ್ಕಾರ ವ್ಯಯಿಸಿದೆ. ನಾಳೆಯ ಬಿಡುಗಡೆ ಸೇರಿಸಿದರೆ ಸರ್ಕಾರದ ವೆಚ್ಚ ಸುಮಾರು 3.45 ಲಕ್ಷ ಕೋಟಿ ರೂ ಆಗಬಹುದು.

2024ರ ಜೂನ್ 18ರಂದು ಪ್ರಧಾನಿಗಳು ವಾರಾಣಸಿಯಲ್ಲಿ ಪಿಎಂ ಕಿಸಾನ್ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. 9.26 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ ಹಣ ಸಂದಾಯವಾಗಿತ್ತು.

ಪಿಎಂ ಕಿಸಾನ್ ಸ್ಕೀಮ್​ನಲ್ಲಿ ರೈತರಿಗೆ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಸಹಾಯಧನವಾಗಿ ನೀಡುತ್ತದೆ. 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಬೇಸಾಯಕ್ಕೆ ಸಹಾಯವಾಗಲೆಂದು ಸರ್ಕಾರ ಡಿಬಿಟಿ ಸ್ಕೀಮ್​ನಲ್ಲಿ ಈ ಸಹಾಯಧನ ಒದಗಿಸುತ್ತಿದೆ. ವಿಶ್ವದ ಯಾವುದೇ ದೇಶದಲ್ಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಆಗುವುದಿಲ್ಲ. ಆ ಮಟ್ಟಿಗೆ ಪಿಎಂ ಕಿಸಾನ್ ಸ್ಕೀಮ್ ದಾಖಲೆ ಮಾಡಿದೆ.

ಇದನ್ನೂ ಓದಿ: BSNL 4G Offer: ಬಿಎಸ್ಸೆನ್ನೆಲ್​ನಿಂದ 24 ಜಿಬಿ ಡಾಟಾ ಉಚಿತ; 25ನೇ ಸಂಸ್ಥಾಪನಾ ವರ್ಷದ ನಿಮಿತ್ತ ಗ್ರಾಹಕರು ಈ ಫ್ರೀ ಡಾಟಾ ಆಫರ್ ಪಡೆಯುವುದು ಹೇಗೆ?

ಪಿಎಂ ಕಿಸಾನ್ ಸ್ಕೀಮ್​ನ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದೆಯಾ ಪರಿಶೀಲಿಸುವ ಕ್ರಮ

  • ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ವಿವಿಧ ಆಯ್ಕೆಗಳನ್ನು ಕಾಣಬಹುದು. ವೆಬ್​​ಸೈಟ್ ವಿಳಾಸ ಇಂತಿದೆ: pmkisan.gov.in/
  • ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣಬಹುದು.
  • ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ
  • ಇಲ್ಲಿ ರಾಜ್ಯ, ಜಿಲ್ಲ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಳ್ಳಬೇಕು.
  • ನಂತರ ‘ಗೆಟ್ ರಿಪೋರ್ಟ್’ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
  • ನೀವು ಆಯ್ದುಕೊಂಡಿರುವ ಗ್ರಾಮದ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ನೀವು ಇತ್ತೀಚೆಗಷ್ಟೇ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಬಂದಿಲ್ಲದೇ ಇರಬಹುದು. ಆಗ ನೀವು ಪಿಎಂ ಕಿಸಾನ್ ವೆಬ್​ಸೈಟ್​ನ ಮುಖ್ಯಪುಟದ ಬಲಬದಿಯಲ್ಲಿರುವ ‘ನೋ ಯುವರ್ ಸ್ಟೇಟಸ್’ ಮೂಲಕ ನಿಮ್ಮ ಬೆನಿಫಿಶಿಯರಿ ಸ್ಟೇಟಸ್ ಪರಿಶೀಲಿಸಬಹುದು.

ಇದನ್ನೂ ಓದಿ: ರೈಲ್ವೆ ಉದ್ಯೋಗಿಗಳಿಗೆ 2,029 ಕೋಟಿ ರೂ ಮೊತ್ತದ ಬೋನಸ್ ಬಿಡುಗಡೆಗೆ ಸಂಪುಟ ಅನುಮೋದನೆ

ನೀವು ರೈತರಾಗಿದ್ದು ಇನ್ನೂ ಕೂಡ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸದೇ ಇದ್ದಲ್ಲಿ ಈಗಲೂ ಅವಕಾಶ ಇದೆ. ಇದೇ ವೆಬ್​ಸೈಟ್ ಮುಖಾಂತರ ನೀವು ನೊಂದಾಯಿಸಬಹುದು. ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿಯೂ ನೊಂದಾಯಿಸಬಹುದು. ಈಗ ನೊಂದಾಯಿಸಿದರೆ, 18ನೇ ಕಂತಿನ ಹಣ ಸಿಗುವುದಿಲ್ಲ. ಮುಂದಿನ ಕಂತುಗಳ ಹಣವನ್ನು ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ