AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ 19ನೇ ಕಂತಿನ ಹಣ ಫೆ. 24ಕ್ಕೆ ಬಿಡುಗಡೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ…

PM Kisan Scheme 19th installment release date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 19ನೇ ಕಂತಿನ ಹಣ ಇದೇ ಫೆಬ್ರುವರಿ 24, ಸೋಮವಾರದಂದು ಬಿಡುಗಡೆ ಆಗಲಿದೆ. ನರೇಂದ್ರ ಮೋದಿ ಅವರು ಹಣ ರಿಲೀಸ್ ಮಾಡಲಿದ್ದಾರೆ ಎಂದು ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ. ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂಗಳನ್ನು ಫಲಾನುಭವಿ ರೈತರ ಖಾತೆಗಳಿಗೆ ನೀಡುತ್ತದೆ. 19ನೇ ಕಂತಿನಲ್ಲಿ 2,000 ರೂ ನೀಡಲಾಗುತ್ತಿದೆ.

ಪಿಎಂ ಕಿಸಾನ್ 19ನೇ ಕಂತಿನ ಹಣ ಫೆ. 24ಕ್ಕೆ ಬಿಡುಗಡೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ...
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2025 | 4:05 PM

Share

ನವದೆಹಲಿ, ಫೆಬ್ರುವರಿ 18: ವಿಶ್ವದಾಖಲೆ ಸ್ಥಾಪಿಸಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣದ ಬಿಡುಗಡೆ ಇದೇ ತಿಂಗಳು ಇದೆ. ಫೆಬ್ರುವರಿ 24ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಣ ರಿಲೀಸ್ ಮಾಡಲಿದ್ದಾರೆ. ಈ ಸಂಗತಿಯನ್ನು ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ. ಈ 19ನೇ ಕಂತಿನ ಹಣ ಫೆಬ್ರುವರಿ ಕೊನೆಯ ವಾರದಲ್ಲಿ ಬಿಡುಗಡೆ ಆಗಬಹುದು ಎಂದು ಈ ಹಿಂದೆ ಹಲವು ವರದಿಗಳು ಅಂದಾಜು ಮಾಡಿದ್ದವು. ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಸುಳಿವು ನೀಡಿದ್ದರು. ಇದೀಗ ಫೆಬ್ರುವರಿ 24ರಂದು ಹಣ ಬಿಡುಗಡೆ ಆಗುವುದು ಖಾತ್ರಿಯಾಗಿದೆ. ಮುಂದಿನ ಸೋಮವಾರ ಫಲಾನುಭವಿ ರೈತರು ತಮ್ಮ ಖಾತೆಗೆ 2,000 ರೂ ಬರಬಹುದೆಂದು ನಿರೀಕ್ಷಿಸಬಹುದು.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ರೈತರಿಗೆ ವ್ಯವಸಾಯಕ್ಕೆ ಸಹಾಯವಾಗಿ ವರ್ಷಕ್ಕೆ 6,000 ರೂನಷ್ಟು ಹಣ ನೀಡುತ್ತದೆ. ಈ 6,000 ರೂ ಹಣವನ್ನು ವರ್ಷದಲ್ಲಿ ಮೂರು ಕಂತುಗಳಲ್ಲಿ ನೀಡುತ್ತದೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ 2,000 ರೂ ಹಾಕುತ್ತದೆ. ಏಪ್ರಿಲ್​ನಿಂದ ಜುಲೈ, ಆಗಸ್ಟ್​​ನಿಂದ ನವೆಂಬರ್, ಡಿಸೆಂಬರ್​ನಿಂದ ಮಾರ್ಚ್ ಹೀಗೆ ಮೂರು ಬಾರಿ ಸರ್ಕಾರದಿಂದ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗುತ್ತದೆ.

ಇದನ್ನೂ ಓದಿ: ಒಂದು ವರ್ಷದೊಳಗೆ ಇನ್ಷೂರೆನ್ಸ್ ಪಾಲಿಸಿ ರದ್ದುಗೊಳಿಸಲು ಸಾಧ್ಯವಾ? ಫ್ರೀಲುಕ್ ಅವಧಿ ವಿಸ್ತರಿಸಲು ಸರ್ಕಾರದ ಯೋಜನೆ

ಈ ಯೋಜನೆಯಲ್ಲಿ 9 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಕೃಷಿ ಜಮೀನು ಹೊಂದಿದವರು ಈ ಯೋಜನೆಗೆ ನೊಂದಾಯಿಸಬಹುದು. ಕೆಲ ಷರತ್ತುಗಳೂ ಇವೆ. ವೈದ್ಯ, ಎಂಜಿನಿಯರ್ ಇತ್ಯಾದಿ ವೃತ್ತಿಪರರು, ಶಾಸಕ, ಸಂಸದರು, ಸರ್ಕಾರಿ ನೌಕರರು, ಐಟಿ ಪಾವತಿದಾರರು ಮೊದಲಾದವರು ಕೃಷಿ ಜಮೀನು ಹೊಂದಿದ್ದರೂ ಯೋಜನೆಗೆ ಅನರ್ಹರಾಗಿರುತ್ತಾರೆ.

ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ

ನೀವು ಯೋಜನೆಗೆ ನೊಂದಾಯಿಸಿದ್ದು ಈ 19ನೇ ಕಂತಿನ ಹಣ ನಿಮ್ಮ ಕೈಸೇರುತ್ತದೋ ಇಲ್ಲವೋ ಎಂದು ಆತಂಕಗೊಂಡಿರಬಹುದು. ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯ.

ಮೊದಲಿಗೆ ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್​ಗೆ ಹೋಗಿರಿ: pmkisan.gov.in/

ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ಕಾಣುತ್ತೀರಿ. ಇಲ್ಲಿ ‘ಬೆನಿಫಿಷಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ.

ನಂತರ, ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗು ಊರನ್ನು ಆಯ್ದುಕೊಂಡರೆ, ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು. ಇದರಲ್ಲಿ ನಿಮ್ಮ ಹೆಸರಿದೆಯಾ ಗಮನಿಸಿ ನೋಡಿ.

ಇದನ್ನೂ ಓದಿ: ಭಾರತದ ಸರಕುಗಳಿಗೆ ಅಮೆರಿಕ ಶೇ. 20ರಷ್ಟು ಸುಂಕ ವಿಧಿಸಿದರೆ ಆರ್ಥಿಕತೆಗೆ ಎಷ್ಟು ನಷ್ಟವಾಗುತ್ತೆ? ಇಲ್ಲಿದೆ ಡೀಟೇಲ್ಸ್

ಯೋಜನೆಗೆ ನೊಂದಾಯಿಸಿ: ನೀವು ಈ ಯೋಜನೆಗೆ ಅರ್ಹರಾಗಿದ್ದು, ಇನ್ನೂ ನೊಂದಾಯಿಸದಿದ್ದರೆ ಈಗಲೂ ಅವಕಾಶ ಇದೆ. ಇದೇ ವೆಬ್​ಸೈಟ್​ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್​ನಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕ್ಲಿಕ್ ಮಾಡಿ ಅಲ್ಲಿಂದ ನೀವು ಯೋಜನೆಗೆ ನೊಂದಾಯಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ