PM Kisan AI Chatbot: ಪಿಎಂ ಕಿಸಾನ್ ಸ್ಕೀಮ್​ನಲ್ಲಿ ರೈತರಿಗೆ ಸಹಾಯವಾಗುವ ಎಐ ಚಾಟ್​ಬೋಟ್

Agriculture Ministry Initiative: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ನಿನ್ನೆ ಗುರುವಾರ (ಸೆ. 21) ಎಐ ಚಾಟ್​ಬೊಟ್​ಗೆ ಚಾಲನೆ ನೀಡಿದ್ದಾರೆ. ಕೃಷಿ ಇಲಾಖೆ ಕಾರ್ಯದರ್ಶಿ ಮನೋಜ್ ಅಹುಜಾ, ಹೆಚ್ಚುವರಿ ಕೃಷಿ ಕಾರ್ಯದರ್ಶಿ ಪ್ರಮೋದ್ ಮೆಹೆರ್ದಾ ಉಪಸ್ಥಿತಿಯಲ್ಲಿ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಈ ಚಾಟ್​ಬೋಟ್ ಅನಾವರಣಗೊಳಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ವಿಚಾರದಲ್ಲಿ ರೈತರಿಗೆ ಎದುರಾಗುವ ಯಾವ ಸಮಸ್ಯೆ ಮತ್ತು ಗೊಂದಲಕ್ಕೂ ಎಐ ಚಾಟ್​ಬೋಟ್ ಉತ್ತರಿಸುತ್ತದೆ. ಪಿಎಂ ಕಿಸಾನ್ ಮೊಬೈಲ್ ಆ್ಯಪ್​ನಲ್ಲಿ ಈ ಬೋಟ್ ಅನ್ನು ಅಳವಡಿಸಲಾಗಿದೆ. ವಿವಿಧ ಭಾಷೆಗಳಲ್ಲಿ ಇದರ ಸೇವೆ ಲಭ್ಯ ಇದೆ.

PM Kisan AI Chatbot: ಪಿಎಂ ಕಿಸಾನ್ ಸ್ಕೀಮ್​ನಲ್ಲಿ ರೈತರಿಗೆ ಸಹಾಯವಾಗುವ ಎಐ ಚಾಟ್​ಬೋಟ್
ಪಿಎಂ ಕಿಸಾನ್ ಸ್ಕೀಮ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 22, 2023 | 12:14 PM

ನವದೆಹಲಿ, ಸೆಪ್ಟೆಂಬರ್ 22: ಕೇಂದ್ರ ಸರ್ಕಾರದಿಂದ ಕೃಷಿಕರಿಗೆ ನೀಡಲಾಗುತ್ತಿರುವ ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Samman Nidhi Yojana) ಹೊಸ ಫೀಚರ್ ಒದಗಿಸಲಾಗಿದೆ. ಪಿಎಂ ಕಿಸಾನ್ ಮೊಬೈಲ್ ಆ್ಯಪ್​ನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ನೆರವನ್ನು ನೀಡಲಾಗಿದ್ದು, ಎಐ ಚಾಟ್​ಬೋಟ್ ಸಹಾಯವನ್ನು ರೈತರು ಪಡೆಯಬಹುದಾಗಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ನಿನ್ನೆ ಗುರುವಾರ (ಸೆ. 21) ಎಐ ಚಾಟ್​ಬೊಟ್​ಗೆ (AI Chatbot) ಚಾಲನೆ ನೀಡಿದ್ದಾರೆ. ಕೃಷಿ ಇಲಾಖೆ ಕಾರ್ಯದರ್ಶಿ ಮನೋಜ್ ಅಹುಜಾ, ಹೆಚ್ಚುವರಿ ಕೃಷಿ ಕಾರ್ಯದರ್ಶಿ ಪ್ರಮೋದ್ ಮೆಹೆರ್ದಾ ಉಪಸ್ಥಿತಿಯಲ್ಲಿ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಈ ಚಾಟ್​ಬೋಟ್ ಅನಾವರಣಗೊಳಿಸಿದ್ದಾರೆ.

ಏನಿದು ಎಐ ಚಾಟ್​ಬೋಟ್?

ಪಿಎಂ ಕಿಸಾನ್ ಯೋಜನೆ ವಿಚಾರದಲ್ಲಿ ರೈತರಿಗೆ ಎದುರಾಗುವ ಯಾವ ಸಮಸ್ಯೆ ಮತ್ತು ಗೊಂದಲಕ್ಕೂ ಎಐ ಚಾಟ್​ಬೋಟ್ ಉತ್ತರಿಸುತ್ತದೆ. ಪಿಎಂ ಕಿಸಾನ್ ಮೊಬೈಲ್ ಆ್ಯಪ್​ನಲ್ಲಿ ಈ ಬೋಟ್ ಅನ್ನು ಅಳವಡಿಸಲಾಗಿದೆ. ವಿವಿಧ ಭಾಷೆಗಳಲ್ಲಿ ಇದರ ಸೇವೆ ಲಭ್ಯ ಇದೆ. ಸದ್ಯಕ್ಕೆ ಇಂಗ್ಲೀಷ್, ಹಿಂದಿ ಅಲ್ಲದೇ, ಬಂಗಾಳಿ, ಒಡಿಯಾ ಮತ್ತು ತಮಿಳು ಭಾಷೆಗಳಲ್ಲಿ ಎಐ ಚಾಟ್​​ಬೋಟ್ ಸಂವಹನ ಮಾಡಬಲ್ಲುದು. ಮುಂದಿನ ದಿನಗಳಲ್ಲಿ ಎಲ್ಲಾ 22 ಅಧಿಕೃತ ಭಾಷೆಗಳಲ್ಲೂ ಇದು ಲಭ್ಯ ಇರುತ್ತದೆ ಎಂದು ಹೇಳಲಾಗಿದೆ. ಈ ಚಾಟ್​ಬೋಟ್ ಅನ್ನು ಭಾಷಿಣಿ ಮತ್ತು ಏಕ್​ಸ್ಟೆಪ್ ಫೌಂಡೇಶನ್ ಸಂಸ್ಥೆಗಳ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ: Ayushman Bhav: ನಾಲ್ಕೇ ದಿನದಲ್ಲಿ 5 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಣೆ; ಅಭಿಯಾನಕ್ಕೆ ಲಕ್ಷಾಂತರ ಮಂದಿ ಸ್ಪಂದನೆ

‘ಪಿಎಂ ಕಿಸಾನ್ ಸ್ಕೀಮ್​ನ ಕ್ಷಮತೆ ಹೆಚ್ಚಿಸಲು ಮತ್ತು ಅದರ ವ್ಯಾಪ್ತಿ ವಿಸ್ತರಿಸಲು ಎಐ ಚಾಟ್​ಬೋಟ್ ಸಹಾಯಕವಾಗಲಿದೆ. ರೈತರ ಗೊಂದಲ ಮತ್ತು ಪ್ರಶ್ನೆಗಳಿಗೆ ಈ ಚಾಟ್​ಬೋಟ್​ನಿಂದ ನಿಖರ ಮತ್ತು ಸ್ಪಷ್ಟ ಉತ್ತರ ಸಿಗುತ್ತದೆ’ ಎಂದು ಕೃಷಿ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪಿಎಂ ಕಿಸಾನ್ ಸ್ಕೀಮ್ ಬಗ್ಗೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ 2019ರಲ್ಲಿ ಆರಂಭವಾದ ಯೋಜನೆ. ಕೃಷಿಕರಿಗೆ ವ್ಯವಸಾಯ ಮಾಡಲು ಅನುಕೂಲವಾಗಲೆಂದು ಸರ್ಕಾರ ಪ್ರತೀ ನಾಲ್ಕು ತಿಂಗಳಿಗೊಮ್ಮೆ 2,000 ರೂ ಧನಸಹಾಯ ಒದಗಿಸುತ್ತದೆ. ವರ್ಷಕ್ಕೆ 6,000 ರೂ ಹಣವು ಫಲಾನುಭವಿಗಳ ಖಾತೆಗೆ ನೇರವಾಗಿ ಬಂದು ಬೀಳುತ್ತದೆ.

ಇದನ್ನೂ ಓದಿ: ವಿಪ್ರೋ ಹೊಸ ಸಿಎಫ್ಒ ಅಪರ್ಣಾ ಅಯ್ಯರ್ 2002ರ ಸಿಎ ಬ್ಯಾಚ್​ನ ಗೋಲ್ಡ್ ಮೆಡಲಿಸ್ಟ್; ಈಕೆಯ ವೃತ್ತಿ ಪ್ರಯಾಣ ಹೇಗಿದೆ? ಇಲ್ಲಿದೆ ವಿವರ

ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಈವರೆಗೂ 10 ಕೋಟಿಗೂ ಹೆಚ್ಚು ಮಂದಿ ರೈತರು ಪಡೆದುಕೊಂಡಿದ್ದಾರೆ. ಈವರೆಗೆ 2,000 ರೂಗಳ 14 ಕಂತುಗಳನ್ನು ವಿತರಿಸಲಾಗಿದೆ. ಪಿಎಂ ನರೇಂದ್ರ ಮೋದಿ 14ನೇ ಕಂತಿನ ಹಣವನ್ನು ಜುಲೈ 27ರಂದು ಬಿಡುಗಡೆ ಮಾಡಿದ್ದರು. ಒಟ್ಟು 9.54 ಕೋಟಿ ಮಂದಿ ರೈತರ ಖಾತೆಗಳಿಗೆ ಸರ್ಕಾರ ಹಣ ಹಾಕಿತು. ಆಗಸ್ಟ್​ನಿಂದ ನವೆಂಬರ್​ವರೆಗಿನ ಅವಧಿಯಲ್ಲಿ 15ನೇ ಕಂತಿನ ಹಣ ಬರಲಿದೆ. ನವೆಂಬರ್ ತಿಂಗಳಲ್ಲಿ ಮುಂದಿನ ಕಂತು ಬಿಡುಗಡೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?