AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಸ್ಕೀಮ್: 24ನೇ ಕಂತಿನ ಹಣ ಯಾವಾಗ ಬಿಡುಗಡೆ? ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ನೋಡಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಲ್ಲಿಯವರೆಗೆ 23 ಕಂತುಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರತೀ ಕಂತಿನಲ್ಲಿ 2,000 ರೂ ಹಣವು ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಿದೆ. ವರ್ಷಕ್ಕೆ 3 ಕಂತುಗಳನ್ನು ಸರ್ಕಾರ ನೀಡುತ್ತಿದ್ದು, ರೈತರು 24ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ವರದಿಗಳ ಪ್ರಕಾರ, ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಮುಂದಿನ ಕಂತು ಬಿಡುಗಡೆಯಾಗಬಹುದು.

ಪಿಎಂ ಕಿಸಾನ್ ಸ್ಕೀಮ್: 24ನೇ ಕಂತಿನ ಹಣ ಯಾವಾಗ ಬಿಡುಗಡೆ? ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ನೋಡಿ
ರೈತImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 21, 2026 | 6:50 PM

Share

ನವದೆಹಲಿ, ಸೆಪ್ಟೆಂಬರ್ 21: ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರು ಈಗ 24ನೇ ಕಂತಿನ ಹಣದ ನಿರೀಕ್ಷೆಯಲ್ಲಿದ್ದಾರೆ. ಜೂನ್ ತಿಂಗಳಲ್ಲಿ 23ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಕಂತು ಈ ತಿಂಗಳ ಕೊನೆಯಲ್ಲಿ ಬರಬಹುದು, ಅಥವಾ ಅಕ್ಟೋಬರ್ ತಿಂಗಳಲ್ಲಿ ಬರುವ ಸಾಧ್ಯತೆ ಇದೆ. ಕೆಲ ವರದಿಗಳ ಪ್ರಕಾರ ನವೆಂಬರ್ ತಿಂಗಳಲ್ಲಿ 24ನೇ ಕಂತಿನ ಹಣ ಬಿಡುಗಡೆಯಾಗಬಹುದು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷ ಒಟ್ಟು ₹6,000 ನೆರವನ್ನು ನೀಡಲಾಗುತ್ತದೆ. ಇದನ್ನು ತಲಾ ₹2,000 ರಂತೆ ಮೂರು ಕಂತುಗಳಲ್ಲಿ (4 ತಿಂಗಳಿಗೊಮ್ಮೆ) ನೀಡಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ವರ್ಷದ ಮೂರನೇ ಕಂತಿನ (ಅಕ್ಟೋಬರ್-ನವೆಂಬರ್) ಹಣವನ್ನು ಹಬ್ಬಗಳ ಸೀಸನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: ಬ್ಯಾಂಕ್ ಉದ್ಯೋಗಿಗಳ ಮುಷ್ಕರ: ಸೆಪ್ಟೆಂಬರ್ 26ರಿಂದ ಐದು ದಿನಗಳ ಕಾಲ ಬ್ಯಾಂಕುಗಳು ಬಂದ್

ಇ-ಕೆವೈಸಿ ಕಡ್ಡಾಯ (e-KYC): 24ನೇ ಕಂತಿನ ಹಣವನ್ನು ಯಾವುದೇ ಅಡೆತಡೆಯಿಲ್ಲದೆ ಪಡೆಯಲು ರೈತರು ತಮ್ಮ ಪಿಎಂ-ಕಿಸಾನ್ ಖಾತೆಗೆ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದು ಕಡ್ಡಾಯ.

ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಮತ್ತು ಎನ್‌ಪಿಸಿಐ (NPCI/Direct Benefit Transfer) ಸಕ್ರಿಯಗೊಂಡಿರುವುದನ್ನು (Active) ರೈತರು ಖಚಿತಪಡಿಸಿಕೊಳ್ಳಬೇಕು.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೀಗೆ

  • ಪಿಎಂ-ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ pmkisan.gov.in ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Farmers Corner’ ವಿಭಾಗದ ಅಡಿಯಲ್ಲಿ ‘Beneficiary Status’ ಅಥವಾ ‘Beneficiary List’ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get Report’ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ: ಆಪಲ್​ನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ; ಎರಡು ತಿಂಗಳಲ್ಲಿ ಎರಡನೇ ಬಾರಿ ಲೇ ಆಫ್

ಆ ಗ್ರಾಮದಲ್ಲಿ ಯಾರೆಲ್ಲಾ ಪಿಎಂ ಕಿಸಾನ್ ಸ್ಕೀಮ್​ನ ಫಲಾನುಭವಿಗಳಿದ್ದಾರೋ ಅವರೆಲ್ಲರ ಹೆಸರುಗಳಿರುವ ಪಟ್ಟಿ ಸಿಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯೇ ಎಂದು ಪರಿಶೀಲಿಸಬಹುದು.

ಗಮನಿಸಿ: ಇ-ಕೆವೈಸಿ ಪೂರ್ಣಗೊಳ್ಳದಿದ್ದರೆ ಅಥವಾ ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ನಿಮ್ಮ ಕಂತಿನ ಹಣ ತಡೆಹಿಡಿಯಲ್ಪಡಬಹುದು. ಆದ್ದರಿಂದ ಹತ್ತಿರದ ಸಿಎಸ್‌ಸಿ (CSC) ಕೇಂದ್ರಕ್ಕೆ ಭೇಟಿ ನೀಡಿ ಅಥವಾ ಪಿಎಂ-ಕಿಸಾನ್ ಆಪ್ ಮೂಲಕ ತಕ್ಷಣ ಇ-ಕೆವೈಸಿ ಮುಗಿಸಿಕೊಳ್ಳಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ