ಪಿಎಂ ಕಿಸಾನ್: ಬಂತು 15ನೇ ಕಂತಿನ ಹಣ; ಪ್ರಧಾನಿ ನರೇಂದ್ರ ಮೋದಿಯಿಂದ 18,000 ಕೋಟಿ ರೂ ಬಿಡುಗಡೆ

PM Kisan Scheme 15th Installment Release: ಪಿಎಂ ಕಿಸಾನ್ ಸ್ಕೀಮ್​ನ 15ನೇ ಕಂತಿನ ಹಣ ಬಿಡುಗಡೆ ಅಗಿದೆ. ಆಗಸ್ಟ್​ನಿಂದ ನವೆಂಬರ್​ವರೆಗಿನ ಅವಧಿಗೆ ಒಟ್ಟು 18,000 ಕೋಟಿ ರೂ ಹಣವನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್​ನ ಖೂಂಟಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿಗಳಿಂದ 15ನೇ ಕಂತಿನ ಹಣ ರಿಲೀಸ್ ಆಗಿದೆ. ಒಟ್ಟು 8.5 ಕೋಟಿ ರೈತರ ಖಾತೆಗಳಿಗೆ ತಲಾ 2,000 ರೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ.

ಪಿಎಂ ಕಿಸಾನ್: ಬಂತು 15ನೇ ಕಂತಿನ ಹಣ; ಪ್ರಧಾನಿ ನರೇಂದ್ರ ಮೋದಿಯಿಂದ 18,000 ಕೋಟಿ ರೂ ಬಿಡುಗಡೆ
ಪಿಎಂ ಕಿಸಾನ್ ಯೋಜನೆ
Follow us
|

Updated on: Nov 15, 2023 | 2:34 PM

ರಾಂಚಿ, ನವೆಂಬರ್ 15: ಪಿಎಂ ಕಿಸಾನ್ ಸ್ಕೀಮ್​ನ 15ನೇ ಕಂತಿನ ಹಣ (PM Kisan Scheme) ಬಿಡುಗಡೆ ಅಗಿದೆ. ಆಗಸ್ಟ್​ನಿಂದ ನವೆಂಬರ್​ವರೆಗಿನ ಅವಧಿಗೆ ಒಟ್ಟು 18,000 ಕೋಟಿ ರೂ ಹಣವನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್​ನ ಖೂಂಟಿಯಲ್ಲಿ (Khunti, Jharkhand) ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿಗಳಿಂದ 15ನೇ ಕಂತಿನ ಹಣ ರಿಲೀಸ್ ಆಗಿದೆ. ಒಟ್ಟು 8.5 ಕೋಟಿ ರೈತರ ಖಾತೆಗಳಿಗೆ ತಲಾ 2,000 ರೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ.

2019ರ ಫೆಬ್ರವರಿಯಲ್ಲಿ ಈ ಯೋಜನೆ ಆರಂಭಗೊಂಡಿತು. ವರ್ಷಕ್ಕೆ 6 ಸಾವಿರ ರೂಗಳನ್ನು ತಲಾ 2,000 ರೂಗಳ 3 ಕಂತುಗಳಲ್ಲಿ ಸರ್ಕಾರವು ಕೃಷಿಕ ಕುಟುಂಬಗಳಿಗೆ ನೀಡುತ್ತಿದೆ. ಅದರಂತೆ ಈವರೆಗೆ 15 ಕಂತುಗಳನ್ನು ನೀಡಿದೆ. ಇಲ್ಲಿಯವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಹಣದ ಮೊತ್ತ 2.75 ಲಕ್ಷ ಕೋಟಿ ರೂ ಆಗಿದೆ.

ಒಂದು ಹಣಕಾಸು ವರ್ಷದಲ್ಲಿ ಏಪ್ರಿಲ್​ನಿಂದ ಜುಲೈವರೆಗೆ ಒಂದು ಕಂತು; ಆಗಸ್ಟ್​ನಿಂದ ನವೆಂಬರ್​ವರೆಗೂ ಇನ್ನೊಂದು ಕಂತು; ಹಾಗು ಡಿಸೆಂಬರ್​ನಿಂದ ಮಾರ್ಚ್​ವರೆಗೆ ಮಗದೊಂದು ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತದೆ. ಸ್ವಂತವಾಗಿ ಕೃಷಿ ಜಮೀನು ಹೊಂದಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರು.

ಇದನ್ನೂ ಓದಿ: LIC Scheme: ನಿವೃತ್ತಿ ಬಳಿಕ ವರ್ಷಕ್ಕೆ 1 ಲಕ್ಷ ರೂ ಪಿಂಚಣಿ ಬರಲು ಪಾಲಿಸಿ ಮೊತ್ತ ಎಷ್ಟು ಬೇಕು?

ಪಿಎಂ ಕಿಸಾನ್ ಯೋಜನೆ; ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ ಆಗಿದೆ. ನೀವು ಫಲಾನುಭವಿಗಳಾಗಿದ್ದೂ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲದೇ ಹೋಗಿದ್ದರೆ, ಈ ಬಾರಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಒಮ್ಮೆ ಪರೀಕ್ಷಿಸಿ. ಅದರ ಕ್ರಮ ಹೀಗಿದೆ…

  • ಪಿಎಂ ಕಿಸಾನ್ ಸ್ಕೀಮ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in
  • ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಅನ್ನು ನೋಡಬಹುದು.
  • ಅಲ್ಲಿ ವಿವಿಧ ಟ್ಯಾಬ್​​ಗಳಿದ್ದು, ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
  • ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಂಡು, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.

ಈಗ ಆ ಗ್ರಾಮದಲ್ಲಿ ಇರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು.

ಇದನ್ನೂ ಓದಿ: ಬಾಂಗ್ಲಾದೇಶದ ಬೆನ್ನೆಲುಬಾದ ಗಾರ್ಮೆಂಟ್ಸ್ ಫ್ಯಾಕ್ಟರಿಗಳ ಬಾಗಿಲು ಬಂದ್; ತಲೆನೋವು ತಂದ ಕಾರ್ಮಿಕರ ಪ್ರತಿಭಟನೆ; 11,000 ಮಂದಿ ಮೇಲೆ ಪೊಲೀಸ್ ಕೇಸ್

ನೀವು ಇತ್ತೀಚೆಗೆ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದರೆ, ಬೆನಿಫಿಶಿಯರಿ ಸ್ಟೇಟಸ್ ಅನ್ನು ಪರಿಶೀಲಿಸಬಹುದು.

  • ಫಾರ್ಮರ್ಸ್ ಕಾರ್ನರ್​ನಲ್ಲಿ ನೋ ಯುವರ್ ಸ್ಟೇಟಸ್ ಎಂಬ ಟ್ಯಾಬ್ ಕ್ಲಿಕ್ ಮಾಡಿ.
  • ಅಲ್ಲಿ ರಿಜಿಸ್ಟ್ರೇಶನ್ ನಂಬರ್ ದಾಖಲಿಸಿ ಸ್ಟೇಟಸ್ ಪರಿಶೀಲಿಸಬಹುದು.

ರಿಜಿಸ್ಟ್ರೇಶನ್ ಸಂಖ್ಯೆ ಗೊತ್ತಿಲ್ಲದೇ ಇದ್ದರೆ ನಿಮ್ಮ ನೊಂದಾಯಿತು ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಮೂಲಕ ರಿಜಿಸ್ಟ್ರೇಶನ್ ನಂಬರ್ ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ