Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್ ಯೋಜನೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ತಿಳಿಯುವುದು ಹೇಗೆ? ನೊಂದಣಿ ಹೇಗೆ? ಇಲ್ಲಿದೆ ವಿವರ

Details of PM Kisan Scheme: ಕೃಷಿ ಜಮೀನು ಹೊಂದಿರುವ ರೈತರಿಗೆ ನೆರವು ನೀಡಲೆಂದು ಪಿಎಂ ಕಿಸಾನ್ ಯೋಜನೆ ರೂಪಿಸಲಾಗಿದೆ. ಇದೀಗ 13ನೇ ಕಂತಿನ 2 ಸಾವಿರ ರೂ ಹಣ ಬಿಡುಗಡೆಯಾಗಿದೆ. ಈ ಯೋಜನೆಗೆ ರಿಜಿಸ್ಟರ್ ಆಗುವುದು ಹೇಗೆ, ಫಲಾನುಭವಿಗಳು ಯಾರಾಗಬಹುದು, ಪಟ್ಟಿ ವೀಕ್ಷಿಸುವುದು ಹೇಗೆ ಇತ್ಯಾದಿ ವಿವರ ಇಲ್ಲಿದೆ:

PM Kisan: ಪಿಎಂ ಕಿಸಾನ್ ಯೋಜನೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ತಿಳಿಯುವುದು ಹೇಗೆ? ನೊಂದಣಿ ಹೇಗೆ? ಇಲ್ಲಿದೆ ವಿವರ
ರೈತ ಮಹಿಳೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 27, 2023 | 6:48 PM

ಪ್ರಧಾನಿ ನರೇಂದ್ರ ಮೋದಿ ಫೆಬ್ರುವರಿ 27ರಂದು ಬೆಳಗಾವಿಯಲ್ಲಿ ಪಿಎಂ ಕಿಸಾನ್ ಯೋಜನೆಯ (PM Kisan Scheme) 13ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಎಂಟು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಒಟ್ಟಾರೆ 16,000 ಕೋಟಿ ರೂಗೂ ಹೆಚ್ಚು ಹಣ ಕೊಡಲಾಗಿದೆ. ಪ್ರತಿಯೊಬ್ಬ ಫಲಾನುಭವಿಯ ಬ್ಯಾಂಕ್ ಖಾತೆಗೂ ತಲಾ 2 ಸಾವಿರ ರೂ ನೇರವಾಗಿ ಜಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಯೋಜನೆ ಆರಂಭವಾದ 2019ರಿಂದ ಈಚೆ ಒಟ್ಟು 2.25 ಲಕ್ಷ ಕೋಟಿ ರೂಗೂ ಹೆಚ್ಚು ಹಣವನ್ನು ರೈತರ ಖಾತೆಗಳಿಗೆ ಸಂದಾಯ ಮಾಡಿದೆ. ಈ ರೈತರ ಪೈಕಿ 3 ಕೋಟಿಗೂ ಹೆಚ್ಚು ಮಹಿಳಾ ರೈತರಿದ್ದಾರೆ.

ಏನಿದು ಯೋಜನೆ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2018 ಡಿಸೆಂಬರ್ 1ರಂದು ಮೊದಲು ಚಾಲನೆಗೊಂಡಿತು. 2019ರ ಫೆಬ್ರುವರಿಯಲ್ಲಿ ಮೊದಲ ಕಂತಿನ ಹಣ ಬಿಡುಗಡೆ ಆಯಿತು. ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಕೃಷಿಗಾರಿಕೆಗೆ ಸಹಾಯವಾಗಲು ಹಣದ ನೆರವು ಒದಗಿಸುವುದು ಈ ಯೋಜನೆಯ ಉದ್ದೇಶ. ಮೊದಲಿಗೆ 2 ಹೆಕ್ಟೇರ್​ಗಿಂತ (5 ಎಕರೆ) ಕಡಿಮೆ ಜಮೀನು ಹೊಂದಿರುವ ರೈತರನ್ನು ಮಾತ್ರ ಫಲಾನುಭವಿಗಳೆಂದು ಪರಿಗಣಿಸಲಾಗಿತ್ತು. ಇತ್ತೀಚೆಗೆ ಇದು ಎಲ್ಲಾ ರೈತರನ್ನೂ ಒಳಗೊಂಡಿದೆ. ಆದರೆ, ಜಮೀನು ಮಾಲಕತ್ವ ಹೊಂದಿದವರು ಮಾತ್ರ ಫಲಾನುಭವಿಗಳಾಗಬಹುದು.

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿ ರೈತರಿಗೂ ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ರೂ ನೀಡುತ್ತದೆ. ಇದು ತಲಾ 2 ಸಾವಿರ ರೂಗಳಂತೆ ಪ್ರತೀ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 2 ಕಂತುಗಳು ಸಿಗುತ್ತದೆ. ಅಂದರೆ ರಾಜ್ಯದ ರೈತರಿಗೆ ವರ್ಷಕ್ಕೆ 10 ಸಾವಿರ ರೂ ಸಿಗುತ್ತದೆ.

ಇದನ್ನೂ ಓದಿ: PM KISAN 13th Installment: ಬೆಳಗಾವಿಯಲ್ಲಿ ಪಿಎಂ ಕಿಸಾನ್ 13ನೇ ಕಂತು ಬಿಡುಗಡೆ ಮಾಡಿದ ನರೇಂದ್ರ ಮೋದಿ

ಯಾವ ರೈತರು ಅನರ್ಹರು?

  • ಸಾಂಸ್ಥಿಕ ಭೂ ಹಿಡುವಳಿದಾರರು
  • ಕೃಷಿಗಾರಿಕೆಗೆ ನೆರವು ನೀಡುವ ಉದ್ದೇಶದ ಯೋಜನೆಯಾದ್ದರಿಂದ ಇಲ್ಲಿ ಜಮೀನು ಮಾಲಕತ್ವ ಇಲ್ಲದವರು ಫಲಾನುಭವಿಗಳಾಗಲು ಬರುವುದಿಲ್ಲ.
  • ವೃತ್ತಿಪರ ಸಂಸ್ಥೆಗಳಲ್ಲಿ ನೊಂದಾವಣಿ ಮಾಡಿಕೊಂಡಿರುವ ವೈದ್ಯರು, ಎಂಜಿನಿಯರು ಇತ್ಯಾದಿ ವೃತ್ತಿಪರರು ಯಾರಾದರೂ ರೈತರ ಕುಟುಂಬದಲ್ಲಿ ಇದ್ದರೆ ಅಂಥ ರೈತರಿಗೆ ಈ ಯೋಜನೆ ಅಲಭ್ಯ.
  • ಸಾಂವಿಧಾನಿಕ ಸಂಸ್ಥೆಗಳನ್ನು ಅಲಂಕರಿಸಿದವರು, ಸಚಿವರು, ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಮೇಯರ್​ಗಳು, ಸರ್ಕಾರಿ ಅಧಿಕಾರಿಗಳು, ಹಾಲಿ, ಮಾಜಿ ಅಥವಾ ನಿವೃತ್ತರು, ಕುಟುಂಬದಲ್ಲಿ ಇದ್ದರೆ ಅಂಥ ರೈತರು
  • ಕುಟುಂಬದಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿದಾರರಾಗಿದ್ದರೆ
  • 10 ಸಾವಿರ ರೂಗೂ ಹೆಚ್ಚು ಮಾಸಿಕ ಪಿಂಚಣಿ ಪಡೆಯುವವರು ಕುಟಂಬದಲ್ಲಿ ಇದ್ದರೆ. ಇಲ್ಲಿ ಕುಟುಂಬಸದಸ್ಯರೆಂದರೆ ಗಂಡ, ಹೆಂಡತಿ ಮತ್ತು ಪುಟ್ಟ ಮಕ್ಕಳು.

ಫಲಾನುಭವಿಗಳ ಪಟ್ಟಿ

ಪಿಎಂ ಕಿಸಾನ್ ಯೋಜನೆಗೆ ನೊಂದಾವಣಿ ಮಾಡಿಸಿದ ಅನೇಕ ರೈತರಿಗೆ ಯೋಜನೆಯ ಹಣ ಸಿಕ್ಕಿಲ್ಲ. ಅಂತಹವರು ಈ ಯೋಜನೆಯಲ್ಲಿ ತಮ್ಮ ಹೆಸರಿದೆಯಾ ಎಂಬುದನ್ನು ಆನ್​ಲೈನ್​ನಲ್ಲೇ ಪರಿಶೀಲಿಸಬಹುದು. ಅದಕ್ಕಾಗಿ ಪಿಎಂ ಕಿಸಾನ್ ಯೋಜನೆಯ ಪೋರ್ಟಲ್​ಗೆ ಹೋಗಬೇಕು. ಅಲ್ಲಿ ಬೆನಿಫಿಷಿಯರಿ ಲಿಸ್ಟ್ ಟ್ಯಾಬ್ ಕ್ಲಿಕ್ ಮಾಡಿ, ರಾಜ್ಯ, ಜಿಲ್ಲೆ, ಗ್ರಾಮ ಇತ್ಯಾದಿ ಆಯ್ಕೆ ಮಾಡಿಕೊಂಡರೆ ಪಟ್ಟಿ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ನೋಡಿ. ಇಲ್ಲದಿದ್ದರೆ ಯೋಜನೆಗೆ ಮತ್ತೊಮ್ಮೆ ನೊಂದಾವಣಿ ಮಾಡಿಸಬೇಕಾಗಬಹುದು.

ಇದನ್ನೂ ಓದಿ: PM KUSUM Scheme: ಪಿಎಂ ಕುಸುಮ್- ಕೇಂದ್ರದ ದೂರದೃಷ್ಟಿಯ ಒಂದು ಯೋಜನೆ

ಯೋಜನೆಗೆ ನೊಂದಣಿ ಹೇಗೆ?

ಪಿಎಂ ಕಿಸಾನ್ ಪೋರ್ಟಲ್​ನಲ್ಲಿ New Farmer Registration Form ಕ್ಲಿಕ್ ಮಾಡಿದರೆ ಆಧಾರ್ ನಂಬರ್, ಮೊಬೈಲ್ ನಂಬರ್ ಇತ್ಯಾದಿ ವಿವರ ಕೇಳುತ್ತದೆ. ಅದನ್ನು ಭರ್ತಿ ಮಾಡಿದ ಬಳಿಕ ನಂತರ ಕೇಳಲಾಗುವ ದಾಖಲೆಯನ್ನೂ ಒದಗಿಸಿ ಯೋಜನೆಗೆ ನೊಂದಣಿ ಮಾಡಿಸಬಹುದು.

ಅಥವಾ ನಿಮ್ಮ ಗ್ರಾಮದ ಸಮೀಪದ ಸಿಎಸ್​ಸಿ ಕೇಂದ್ರಕ್ಕೆ ಹೋಗಿಯೂ ನೊಂದಣಿ ಮಾಡಿಸಬಹುದು. ಅದಕ್ಕೆ ಆಧಾರ್ ಕಾರ್ಡ್, ನಿಮ್ಮ ಖಾತೆ, ಮೊಬೈಲ್ ನಂಬರ್ ಇತ್ಯಾದಿ ಒದಗಿಸಬೇಕಾಗುತ್ತದೆ.

ಕೆವೈಸಿ ತುಂಬಿದ್ದೀರಾ?

ಕಳೆದ ಬಾರಿಯ 12ನೇ ಕಂತಿನ ಹಣ ನಿಮ್ಮ ಕೈಸಿದ್ದು, ಈ ಬಾರಿ ಹಣ ಬಂದಿಲ್ಲವೆಂದರೆ ನೀವು ಇಕೆವೈಸಿ ತುಂಬದೇ ಇರುವುದು ಕಾರಣವಾಗಿರಬಹುದು. ಹಾಗಾದಲ್ಲಿ ನೀವು ಮತ್ತೊಮ್ಮೆ ಆನ್​ಲೈನ್​ನಲ್ಲೇ ಇಕೆವೈಸಿ ಅಪ್​ಡೇಟ್ ಮಾಡಬಹುದು. ಅಥವಾ ಸಿಎಸ್​ಸಿ ಕೇಂದ್ರಕ್ಕೆ ಹೋಗಿ ಕೆವೈಸಿ ಕೊಡಬಹುದು. ಹಾಗೆ ಮಾಡಿದಾಕ್ಷಣ ನಿಮಗೆ 13ನೇ ಕಂತಿನ ಹಣ ಸಿಗುವುದಿಲ್ಲ. ಮುಂದಿನ ಕಂತುಗಳು ಮಾತ್ರ ನಿಮಗೆ ಲಭ್ಯವಾಗಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ