AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ; ಟೆಲಿಕಾಂ ಕ್ಷೇತ್ರದ ಅಭಿವೃದ್ಧಿ ಶ್ಲಾಘಿಸಿದ ಪ್ರಧಾನಿ ಮೋದಿ

ನವದೆಹಲಿಯ ಯಶೋಭೂಮಿಯಲ್ಲಿ 10ನೇ ಆವೃತ್ತಿಯ 'ಇಂಡಿಯಾ ಮೊಬೈಲ್ ಕಾಂಗ್ರೆಸ್ 2026' ಪ್ರದರ್ಶನವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಅಕ್ಟೋಬರ್ 10ರವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಟೆಲಿಕಾಂ ಕ್ಷೇತ್ರದ ಹಲವು ಸ್ಟಾರ್ಟಪ್​ಗಳು ಪಾಲ್ಗೊಳ್ಳುತ್ತಿವೆ. ಸೃಷ್ಟಿ, ಸಂವರ್ಧನೆ, ಸಶಕ್ತ ಮತ್ತು ಸುರಕ್ಷಾ ಎನ್ನುವ ನಾಲ್ಕು ಸ್ತಂಭಗಳ ಮೇಲೆ ಈ ಮೇಳ ನಡೆಯುತ್ತಿದೆ.

ದೆಹಲಿಯಲ್ಲಿ 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ; ಟೆಲಿಕಾಂ ಕ್ಷೇತ್ರದ ಅಭಿವೃದ್ಧಿ ಶ್ಲಾಘಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: Narendra Modi's Youtube
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 08, 2026 | 12:33 PM

Share

ನವದೆಹಲಿ, ಅಕ್ಟೋಬರ್ 8: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮಾವೇಶಕ್ಕೆ ಇಂದು ಚಾಲನೆ ನೀಡಿದ್ದಾರೆ. ದೆಹಲಿಯ ‘ಯಶೋಭೂಮಿ’ ಕಾಂಪ್ಲೆಕ್ಸ್​ನಲ್ಲಿ ಆರಂಭಗೊಂಡ ಈ 10ನೇ ಆವೃತ್ತಿಯ ಪ್ರದರ್ಶನವು ಏಷ್ಯಾದ ಅತಿದೊಡ್ಡ ಟೆಲಿಕಾಂ ಮತ್ತು ತಂತ್ರಜ್ಞಾನ ಮೇಳವೆನಿಸಿದೆ. ಅಕ್ಟೋಬರ್ 10ರವರೆಗೂ ಮೊಬೈಲ್ ಕಾಂಗ್ರೆಸ್ ನಡೆಯಲಿದ್ದು, ಈ ಆವೃತ್ತಿಯಲ್ಲಿ ಅಸೀಮ ವಿಸ್ತರಣೆ (Scale Without Boundaries) ಎನ್ನುವ ಥೀಮ್​ನಲ್ಲಿ ನಡೆಸಲಾಗುತ್ತಿದೆ. ಈ ಸಮಾವೇಶ ಉದ್ಘಾಟಿಸಿದ ಪ್ರಧಾನಿಗಳು, ಭಾರತದಲ್ಲಿ 5G ತಂತ್ರಜ್ಞಾನವು ದೇಶದ ಪ್ರತಿಯೊಂದು ಜಿಲ್ಲೆಗೂ ಯಶಸ್ವಿಯಾಗಿ ತಲುಪಿರುವುದನ್ನು ಮತ್ತು ಲಕ್ಷಾಂತರ ಬೇಸ್ ಸ್ಟೇಷನ್‌ಗಳು ಸ್ಥಾಪನೆಯಾಗಿರುವುದನ್ನು ಉಲ್ಲೇಖಿಸಿ, ದೇಶದ ಅದ್ಭುತ ಡಿಜಿಟಲ್ ಪ್ರಗತಿಯನ್ನು ಶ್ಲಾಘಿಸಿದರು.

ಡಿಜಿಟಲ್ ಕನೆಕ್ಟಿವಿಟಿ ಮತ್ತು ಮೊಬೈಲ್ ಫೋನ್​ಗಳನ್ನು ಬಳಸಿ ಸರ್ಕಾರಿ ಸೇವೆಗಳನ್ನು ಜನರಿಗೆ ಸುವ್ಯವಸ್ಥಿತವಾಗಿ ತಲುಪಿಸುತ್ತಿರುವುದನ್ನು ಮೋದಿ ಈ ಸಂದರ್ಭದಲ್ಲಿ ವಿವರಿಸಿದರು. ಡಿಬಿಟಿ ಸಿಸ್ಟಂ ಮೂಲಕ 50 ಲಕ್ಷ ಕೋಟಿ ರೂ ಹಣವನ್ನು ಫಲಾನುಭವಿಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಣ ಸೋರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗಿದ್ದು, 5 ಲಕ್ಷ ಕೋಟಿ ರೂ ಹಣ ಉಳಿತಾಯವಾಗಿದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಸಣ್ಣ ಪ್ರಮಾಣದ ಯುಪಿಐ ಶುಲ್ಕದಿಂದ ದೊಡ್ಡ ಪರಿಣಾಮ ಆಗುವುದಿಲ್ಲ: ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅಭಿಪ್ರಾಯ

ಸೃಷ್ಟಿ (ಭವಿಷ್ಯದ ನಿರ್ಮಾಣ), ಸಂವರ್ಧನ (ಬೆಳವಣಿಗೆಗೆ ಶಕ್ತಿ), ಸಶಕ್ತ (ಅವಕಾಶಗಳ ವಿಸ್ತರಣೆ), ಮತ್ತು ಸುರಕ್ಷಾ (ವಿಶ್ವಾಸದ ಬಲವರ್ಧನೆ) ಎಂಬ ನಾಲ್ಕು ಮುಖ್ಯ ಸ್ತಂಭಗಳ ಮೇಲೆ ನಿಂತಿರುವ ಈ ಬಾರಿಯ ಮೇಳದಲ್ಲಿ 5G, 6G, ಕೃತಕ ಬುದ್ಧಿಮತ್ತೆ (AI), ಸೈಬರ್ ಭದ್ರತೆ ಮತ್ತು ಉಪಗ್ರಹ ಸಂಪರ್ಕದ ಜೊತೆಗೆ ಸ್ಮಾರ್ಟ್ ಮೊಬಿಲಿಟಿ (Smart Mobility), ಸ್ಟೇಡಿಯಂ ಅನುಭವಗಳು, ಕೈಗಾರಿಕಾ ರೋಬೋಟಿಕ್ಸ್ ಮತ್ತು ಸಾರಿಗೆ ತಂತ್ರಜ್ಞಾನ (Transport Technology) ದಂತಹ ಹೊಸ ಕ್ಷೇತ್ರಗಳ ಮೇಲೆಯೂ ಹೆಚ್ಚಿನ ಗಮನಹರಿಸಲಾಗಿದೆ.

ಈ ಬೃಹತ್ ತಂತ್ರಜ್ಞಾನ ಸಮಾವೇಶದಲ್ಲಿ 100ಕ್ಕೂ ಹೆಚ್ಚು ದೇಶಗಳಿಂದ 1.5 ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಪ್ರದರ್ಶಕರು, 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಹಾಗೂ 900ಕ್ಕೂ ಹೆಚ್ಚು ತಂತ್ರಜ್ಞಾನ ತಜ್ಞರು ಭಾಗವಹಿಸುತ್ತಿದ್ದಾರೆ. 2,000ಕ್ಕೂ ಹೆಚ್ಚು ತಂತ್ರಜ್ಞಾನ ಮಾದರಿಗಳು (Use Cases) ಹಾಗೂ 120ಕ್ಕೂ ಹೆಚ್ಚು ಗೋಷ್ಠಿಗಳು ಇಲ್ಲಿ ನಡೆಯಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Thu, 8 October 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!