AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

PM Narendra Modi Address in Lok Sabha: ಪಶ್ಚಿಮ ಏಷ್ಯಾದಲ್ಲಿ ಇರುವ ಪರಿಸ್ಥಿತಿ ಆತಂಕ ಮೂಡಿಸುವಂತಿದೆ. ಜಾಗತಿಕವಾಗಿ ಇದರ ಪರಿಣಾಮ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಪರಿಸ್ಥಿತಿ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಜನರಿಗೆ ತೊಂದರೆ ಆಗದೇ ಇರುವಂತೆ ನೋಡಿಕೊಳ್ಳುವುದು ಸರ್ಕಾರಕ್ಕೆ ಆದ್ಯತೆ ಆಗಿದೆ ಎಂದು ಅವರು ಹೇಳಿದ್ದಾರೆ.

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 23, 2026 | 2:41 PM

Share

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್​ಗೆ (Hormuz Strait) ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ ಬೇಕಾದ ತೈಲ ಮತ್ತು ಅನಿಲ ಪೂರೈಕೆಯ ಮೂಲವೂ ಇಲ್ಲಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಭಾರತಕ್ಕೆ ಬೇಕಾದ ಶೇ. 60ರಷ್ಟು ಎಲ್​ಪಿಜಿ ಅನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶದಲ್ಲೇ ಎಲ್​ಪಿಜಿ ಉತ್ಪಾದನೆ ಹೆಚ್ಚಿಸಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.

‘ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಕಠಿಣವಾಗಿದೆ. ಕಚ್ಛಾ ತೈಲ ಮತ್ತು ರಸಗೊಬ್ಬರ ಪೂರೈಕೆ ಮೇಲೆ ಪರಿಣಾಮ ಬಿದ್ದಿದೆ. ಸರ್ಕಾರವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಹೆಚ್ಚಿನ ವ್ಯತ್ಯಯ ಆಗದಂತೆ ಎಚ್ಚರ ವಹಿಸುತ್ತಿದೆ. ಜನರು ಅನುಭವಿಸುತ್ತಿರುವ ಕಷ್ಟವನ್ನು ಕಡಿಮೆ ಮಾಡುವುದು ಸರ್ಕಾರದ ಆದ್ಯತೆಯಾಗಿದೆ’ ಎಂದು ಮೋದಿ ವಿವರಿಸಿದ್ದಾರೆ.

ಇದನ್ನೂ ಓದಿ: ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

ಸರ್ಕಾರ ಇಂಧನಕ್ಕಾಗಿ ಕೆಲ ದೇಶಗಳ ಮೇಲೆ ಅವಲಂಬಿತವಾಗಿಲ್ಲ. ಇವತ್ತು 41 ದೇಶಗಳಿಂದ ಭಾರತವು ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ಪ್ರಧಾನಿಗಳು ಹೇಳಿದ್ದಾರೆ.

ಯುದ್ಧದಿಂದಾಗಿ ಭಾರತ ಮಾತ್ರವಲ್ಲ, ಜಾಗತಿಕವಾಗಿಯೂ ತೈಲ ಹಾಗೂ ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಇದು ಎಲ್ಲಾ ದೇಶಗಳಿಗೂ ಸವಾಲಿನ ಸ್ಥಿತಿ ತಂದಿದೆ. ಇರಾನ್ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದಾರೆ. ಬಿಕ್ಕಟ್ಟು ಉದ್ಭವಗೊಂಡ ಬಳಿಕ ಮೊದಲ ಬಾರಿಗೆ ಪ್ರಧಾನಿಗಳು ಸಂಸತ್​ನಲ್ಲಿ ಆ ಬಗ್ಗೆ ಮಾತನಾಡಿರುವುದು.

ದೇಶದ ಜನರನ್ನು ಉದ್ದೇಶಿಸಿ ಮೋದಿ ಅವರು ಈ ಮೊದಲು ಮಾತನಾಡದೇ ಹೋದರೂ ತೈಲ ಮತ್ತು ಅನಿಲ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತೈಲ ಮತ್ತು ಗ್ಯಾಸ್ ಪೂರೈಕೆಗೆ ಇರಾನ್ ಜೊತೆಗೂ ಮಾತನಾಡುತ್ತಿದ್ದಾರೆ. ಇತರ ಪರ್ಯಾಯ ಮಾರುಕಟ್ಟೆಗಳನ್ನೂ ಮುಟ್ಟುತ್ತಿದ್ದಾರೆ.

ಇದನ್ನೂ ಓದಿ: ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು 18 ಕೋಟಿ ರೂ. ಟೋಲ್ ಕಟ್ಬೇಕಾ?

ಈ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಪ್ರಧಾನಿಯವರು ಸಚಿವರು ಹಾಗೂ ಕಾರ್ಯದರ್ಶಿಗಳ ಒಂದು ತಂಡವನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ಎಲ್​ಪಿಜಿ ಲಭ್ಯತೆ ಹೆಚ್ಚಿಸಲು ವಿವಿಧ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Mon, 23 March 26

Follow Us
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ