AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಾನ್ ಇಂಡಿಯಾ 2024ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಮೂರು ದಿನದ ಸಮಾವೇಶದಲ್ಲಿ ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜರ ಸಮಾಗಮ

PM Narendra Modi inaugurates Semicon India 2024: ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಪುಷ್ಟಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಆಯೋಜಿಸಿದೆ. ಸೆ. 11, ಇಂದು ಪ್ರಧಾನಿ ಮೋದಿ ಈ ಮೂರು ದಿನಗಳ ಕಾನ್ಫೆರೆನ್ಸ್​ಗೆ ಚಾಲನೆ ನೀಡಿದ್ದಾರೆ. ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸೆಮಿಕಾನ್ ಇಂಡಿಯಾ 2024ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಮೂರು ದಿನದ ಸಮಾವೇಶದಲ್ಲಿ ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜರ ಸಮಾಗಮ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 11, 2024 | 11:42 AM

Share

ನವದೆಹಲಿ, ಸೆಪ್ಟೆಂಬರ್ 11: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 13ರವರೆಗೆ ಮೂರು ದಿನಗಳ ಕಾಲ ನಡೆಯುವ ಸೆಮಿಕಾನ್ ಇಂಡಿಯಾ ಸಮಾವೇಶದಲ್ಲಿ ಸೆಮಿಕಂಡಕ್ಟರ್ ಭವಿಷ್ಯ ರೂಪಿಸುವುದು ಈ ಬಾರಿಯ ಥೀಮ್ ಆಗಿದೆ. ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಅಭಿವೃದ್ಧಿಪಡಿಸಬಲ್ಲಂತಹ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಚುರಪಡಿಸಲಾಗುತ್ತದೆ.

ಇದನ್ನೂ ಓದಿ: ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ

ಈ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ. 150ಕ್ಕೂ ಹೆಚ್ಚು ತಜ್ಞರು ಮಾತನಾಡಲಿದ್ದಾರೆ. ಬಹುತೇಕ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ನಿರ್ಮಿಸಲು ಆಸಕ್ತಿ ತೋರಿವೆ. ಚಿಪ್ ತಯಾರಿಕೆಗೆ ಪೂರಕವಾದ ಇತರ ಉದ್ದಿಮೆಗಳೂ ಕೂಡ ಭಾರತದಲ್ಲೇ ನೆಲೆಗೊಳ್ಳಲಿವೆ. ಆ ನಿಟ್ಟಿನಲ್ಲಿ ಸರ್ಕಾರ ಸೆಮಿಕಂಡಕ್ಟರ್ ನೀತಿಗಳನ್ನು ರೂಪಿಸುತ್ತಿದೆ. ಈ ಸಮಾವೇಶದಲ್ಲೂ ಈ ನೀತಿಗಳು ಅನಾವರಣಗೊಳ್ಳಬಹುದು.

ನಿನ್ನೆ ಮಂಗಳವಾರ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಸ್ತೃತ ಸೆಮಿಕಂಡಕ್ಟರ್ ಸರಬರಾಜು ಸರಪಳಿಯಲ್ಲಿ ಭಾರತ ಪ್ರಮುಖ ಭಾಗಿದಾರ ದೇಶವಾಗುವ ಸಾಮರ್ಥ್ಯ ಹೊಂದಿದೆ. ಸರ್ಕಾರದ ನೀತಿಯಲ್ಲಿ ಸ್ಥಿರತೆ ಇರಲಿದೆ ಎಂದು ವಾಗ್ದಾನ ನೀಡಿದ್ದಾರೆ.

ಇದನ್ನೂ ಓದಿ: Video- ದೇಶ ವಿದೇಶಗಳ ಸೆಮಿಕಂಡಕ್ಟರ್ ಉದ್ಯಮ ದಿಗ್ಗಜರಿಂದ ಪ್ರಧಾನಿ ಮೋದಿಗೆ ಪ್ರಶಂಸೆ

ಇದೇ ವೇಳೆ ಪ್ರಮುಖ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು ಮಾತನಾಡುತ್ತಾ, ಭಾರತ ಸರ್ಕಾರದ ನೀತಿಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ