AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮ ಉದ್ಘಾಟನೆ; ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳ ಸಮಾಗಮ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 17ರಂದು ದೇಶ ವಿದೇಶಗಳ ಸೆಮಿಕಂಡಕ್ಟರ್ ಕ್ಷೇತ್ರದ ದಿಗ್ಗಜರು ಮೇಳೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 19ರವರೆಗೆ ಕಾರ್ಯಕ್ರಮ ನಡೆಯುತ್ತಿದ್ದು, ಮೈಕ್ರಾನ್, ಎಎಸ್​ಎಂಎಲ್, ಅಪ್ಲೈಡ್ ಮೆಟೀರಿಯಲ್ಸ್ ಮೊದಲಾದ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮ ಉದ್ಘಾಟನೆ; ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳ ಸಮಾಗಮ
ಸೆಮಿಕಾನ್ ಇಂಡಿಯಾ 2026 ಉದ್ಘಾಟಿಸಿದ ಪಿಎಂ ಮೋದಿImage Credit source: Youtube
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 17, 2026 | 11:32 AM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್​ನಲ್ಲಿ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಸೆಮಿ ಸಂಘಟನೆಗಳು ಆಯೋಜಿಸಿರುವ ಈ ಕಾರ್ಯಕ್ರಮ ಇವತ್ತಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಸೆಪ್ಟೆಂಬರ್ 19ಕ್ಕೆ ಸಮಾರೋಪಗೊಳ್ಳಲಿದೆ. ‘ಸಿಲಿಕಾನ್ ಟು ಸಿಸ್ಟಮ್ಸ್: ಬ್ಯುಲ್ಡಿಂಗ್ ದಿ ಇಕೋಸಿಸ್ಟಂ’ ಥೀಮ್ ಹೊಂದಿರುವ ಈ ಬಾರಿಯ ಸೆಮಿಕಾನ್ ಇಂಡಿಯಾ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳು ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಬಳಿಕ ಪ್ರಧಾನಿಗಳು ಪ್ರದರ್ಶಕರು ಹಾಗೂ ಭಾಗಿದಾರರೊಂದಿಗೆ ಸಂವಾದ ನಡೆಸಿದರು. ಸೆಪ್ಟೆಂಬರ್ 17ರಿಂದ 19ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ 52 ದೇಶಗಳಿಂದ ಪ್ರತಿನಿಧಿಗಳು ಬಂದಿದ್ದಾರೆ. 600ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ. 400ಕ್ಕೂ ಹೆಚ್ಚು ಎಕ್ಸಿಕ್ಯೂಟಿವ್​ಗಳು, 150ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸುತ್ತಿದ್ದಾರೆ.

ಕಾರ್ಯಕ್ರಮದ ಲೈವ್

ಯಶೋಭೂಮಿಯಲ್ಲಿ ಜಪಾನ್, ಸೌತ್ ಕೊರಿಯಾ, ಮಲೇಷ್ಯಾ, ನೆದರ್​ಲ್ಯಾಂಡ್ಸ್, ಸಿಂಗಾಪುರ್ ಮತ್ತು ಸ್ವೀಡನ್ ದೇಶಗಳಿಗೆ ಪೆವಿಲಿಯನ್​ಗಳನ್ನು ನಿರ್ಮಿಸಲಾಗಿದೆ. 12 ರಾಜ್ಯಗಳ ಬೂತ್​ಗಳು, ಒಂದು ಸ್ಟಾರ್ಟಪ್ ಪೆವಿಲಿಯನ್, ವರ್ಕ್​ಫೋರ್ಸ್ ಡೆವಲಪ್ಮೆಂಟ್ ಪೆವಿಲಿಯನ್ ಇವೆ. ಈ ಮೂರು ದಿನಗಳ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಅಮೆರಿಕದ ಶೇ.100 ಸುಂಕ ಬೆದರಿಕೆಗೆ ಭಾರತದ ಖಡಕ್ ಪ್ರತ್ಯುತ್ತರ: 140 ಕೋಟಿ ಜನರ ಇಂಧನ ಭದ್ರತೆ ನಮಗೆ ಮೊದಲ ಆದ್ಯತೆ

ಇವತ್ತು ಉದ್ಘಾಟನಾ ದಿನದಂದು ಸೆಮಿಕಂಡಕ್ಟರ್ ಉದ್ಯಮದ ಮುಂದಾಳುಗಳು ಭಾಷಣ ಮಾಡಿದರು. ಮೈಕ್ರಾನ್ ಎಲೆಕ್ಟ್ರಾನಿಕ್ಸ್, ಟಾಟಾ ಟೆಕ್ನಾಲಜೀಸ್, ಅಪ್ಲೈಡ್ ಮೆಟೀರಿಯಲ್ಸ್, ಎಎಸ್​ಎಂಎಲ್, ಟೋಕಿಯೋ ಎಲೆಕ್ಟ್ರಾನ್, ಜಬಿಲ್, ರಾಬಿಡಸ್, ಲಾಮ್ ರಿಸರ್ಚ್, ಅಡ್ವಾಂಟೆಸ್ಟ್ ಇತ್ಯಾದಿ ದಿಗ್ಗಜ ಸಂಸ್ಥೆಗಳ ಸಿಇಒಗಳು ಭಾರತದ ಸೆಮಿಕಂಡಕ್ಟರ್ ಬೆಳವಣಿಗೆಯಲ್ಲಿ ಭಾಗವಾಗಲು ಇಚ್ಛೆ ತೋರ್ಪಡಿಸಿದ್ದಾರೆ. ಭಾರತದ ಶಕ್ತಿ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Thu, 17 September 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು