AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Vishwakarma: ಪಿಎಂ ವಿಶ್ವಕರ್ಮ ಯೋಜನೆ ಉದ್ಘಾಟನೆ; ಕುಶಲಕರ್ಮಿಗಳಿಗೆಂದಿರುವ ಈ ಸ್ಕೀಮ್ ಪಡೆಯುವುದು ಹೇಗೆ?

Narendra Modi Birthday: ಪಿಎಂ ನರೇಂದ್ರ ಮೋದಿ ಅವರ ಜನ್ಮದಿನದಂದು ವಿಶ್ವಕರ್ಮ ಯೋಜನೆ ಅನಾವರಣಗೊಂಡಿದೆ. ಆರಂಭದಲ್ಲಿ 5 ಲಕ್ಷ ಕುಟುಂಬಗಳನ್ನು ಸ್ಕೀಮ್​ನಲ್ಲಿ ಒಳಗೊಳ್ಳಲಾಗುತ್ತದೆ. ಮುಂದಿನ ಐದು ವರ್ಷದಲ್ಲಿ ಇದರ ಸಂಖ್ಯೆ 30 ಲಕ್ಷಕ್ಕೆ ಏರಿಸುವ ಗುರಿ ಇದೆ. ಕಡಿಮೆ ಬಡ್ಡಿದರದಲ್ಲಿ ಸಾಲ, ಉಚಿತ ಕೌಶಲ್ಯ ತರಬೇತಿ, ಟೂಲ್ ಕಿಟ್ ಇತ್ಯಾದಿ ಮೂಲಕ ಫಲಾನುಭವಿಗಳಿಗೆ ಉತ್ತೇಜನ ನೀಡಲಾಗುತ್ತದೆ.

PM Vishwakarma: ಪಿಎಂ ವಿಶ್ವಕರ್ಮ ಯೋಜನೆ ಉದ್ಘಾಟನೆ; ಕುಶಲಕರ್ಮಿಗಳಿಗೆಂದಿರುವ ಈ ಸ್ಕೀಮ್ ಪಡೆಯುವುದು ಹೇಗೆ?
ಕುಶಲಕರ್ಮಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 17, 2023 | 3:06 PM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಾಗೂ ವಿಶ್ವಕರ್ಮ ಜಯಂತಿ ದಿನವಾದ ಇಂದು ಪಿಎಂ ವಿಶ್ವಕರ್ಮ ಯೋಜನೆ (PM Vishwakarma Scheme) ಆರಂಭವಾಗಿದೆ. ಸಾಂಪ್ರದಾಯಿಕ ಕುಶಲಕರ್ಮಿಗಳ ಅಭ್ಯುದಯಕ್ಕಾಗಿ ಇರುವ ಈ ಸ್ಕೀಮ್ ಬಗ್ಗೆ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಭಾಷಣದ ವೇಳೆಯೇ ಮೋದಿ ಪ್ರಸ್ತಾಪ ಮಾಡಿದ್ದರು. ಹೊಸದಾಗಿ ಇಂದೇ ಉದ್ಘಾಟನೆಗೊಂಡಿರುವ ಐಐಸಿಸಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ವಿಶ್ವಕರ್ಮ ಸ್ಕೀಮ್ ಅನ್ನು ಅನಾವರಣಗೊಳಿಸಿದರು. ಭಾರತದ ಸಾಂಪ್ರದಾಯಿಕ ಕಲೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ಆರಂಭದಲ್ಲಿ 18 ಕಲೆಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಸಾಂಪ್ರದಾಯಿಕ ಕಲೆಗಳನ್ನೂ ಈ ಸ್ಕೀಮ್​ನ ವ್ಯಾಪ್ತಿಗೆ ತರುವ ಸಾಧ್ಯತೆ ಇದೆ.

ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಒಳಗೊಂಡಿರುವ ಕುಶಲಕರ್ಮಿಗಳಿವರು

  1. ಮರಗೆಲಸ ಮಾಡುವವರು (ಕಾರ್ಪೆಂಟರ್)
  2. ದೋಣಿ ತಯಾರಕರು
  3. ಶಸ್ತ್ರಕಾರರು (ಮದ್ದುಗುಂಡು ತಯಾರಿಸುವವರು)
  4. ಕಮ್ಮಾರರು
  5. ಸುತ್ತಿಗೆ ಇತ್ಯಾದಿ ತಯಾರಿಸುವವರು
  6. ಬೀಗ ಮತ್ತು ಕೀಲಿ ತಯಾರಿಸುವವರು
  7. ಅಕ್ಕಸಾಲಿಗರು (ಚಿನ್ನದ ಕುಸುರಿ)
  8. ಕುಂಬಾರರು (ಮಡಿಕೆ ತಯಾರಿಸುವವರು)
  9. ಶಿಲ್ಪಿಗಳು, ಕಲ್ಲು ಒಡೆಯುವವರು
  10. ಚಮ್ಮಾರರು (ಪಾದರಕ್ಷೆ ತಯಾರಿಸುವವರು)
  11. ಮೇಸ್ತ್ರಿಗಳು
  12. ಬುಟ್ಟಿ ಹೆಣೆಯುವವರು
  13. ಬೊಂಬೆ ತಯಾರಿಸುವವರು
  14. ಕ್ಷೌರಿಕರು
  15. ಹೂಮಾಲೆ ತಯಾರಕರು
  16. ಅಗಸರು (ಬಟ್ಟೆ ಒಗೆಯುವವರು)
  17. ದರ್ಜಿಗಳು (ಟೈಲರ್)
  18. ಮೀನಿನ ಬಲೆ ತಯಾರಕರು

ಇದನ್ನೂ ಓದಿ: ನರೇಂದ್ರ ಮೋದಿ ಜನ್ಮದಿನ; ಒಂದು ವರ್ಷದಲ್ಲಿ ಭಾರತೀಯ ಷೇರುಮಾರುಕಟ್ಟೆ ಅಮೋಘ ಬೆಳವಣಿಗೆ; ಸೆನ್ಸೆಕ್ಸ್, ನಿಫ್ಟಿ ಸೇರಿ ಯಾವ್ಯಾವ ಸೂಚ್ಯಂಕಗಳು ಹೆಚ್ಚಿರುವುದೆಷ್ಟು? ಇಲ್ಲಿದೆ ಮಾಹಿತಿ

ಮೊದಲ ವರ್ಷದಲ್ಲಿ ಐದು ಲಕ್ಷ ಕುಟುಂಬಗಳಿಗೆ ಯೋಜನೆಯ ಲಾಭ

ಪಿಎಂ ವಿಶ್ವಕರ್ಮ ಯೋಜನೆಗೆಂದು ಕೇಂದ್ರ ಸರ್ಕಾರ 13,000 ಕೋಟಿ ರೂ ಮೀಸಲಿರಿಸಿದೆ. ಒಟ್ಟು 18 ಸಾಂಪ್ರದಾಯಿಕ ಕಲೆಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳು ಈ ಯೋಜನೆಯ ಲಾಭ ಪಡೆಯಬಹುದು. ಒಂದು ಅಂದಾಜು ಪ್ರಕಾರ ಮೊದಲ ವರ್ಷದಲ್ಲಿ 5 ಲಕ್ಷ ಕುಟುಂಬಗಳು ಫಲಾನುಭವಿಗಳ ಪಟ್ಟಿಯಲ್ಲಿರಲಿವೆ. ಮುಂದಿನ ಐದು ವರ್ಷದಲ್ಲಿ ಒಟ್ಟು ಫಲಾನುಭವಿ ಕುಟುಂಬಗಳ ಸಂಖ್ಯೆ 30 ಲಕ್ಷ ಮುಟ್ಟುವ ನಿರೀಕ್ಷೆ ಇದೆ.

ಪಿಎಂ ವಿಶ್ವಕರ್ಮ ಯೋಜನೆಯಿಂದ ಏನು ಲಾಭ?

  • ಪಟ್ಟಿ ಮಾಡಲಾಗಿರುವ ಸಾಂಪ್ರದಾಯಿಕ ಕಲೆಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳು ಯೋಜನೆಯ ಪೋರ್ಟಲ್​ನಲ್ಲಿ ನೊಂದಾಯಿಸಿಕೊಳ್ಳಬೇಕು. ಅದಾದ ಬಳಿಕ ಯೋಜನೆಯ ಪ್ರಮಾಣಪತ್ರ, ಐಡಿ ಕಾರ್ಡ್ ಸಿಗುತ್ತದೆ.
  • ಫಲಾನುಭವಿಗಳಿಗೆ 15,000 ರೂ ಮೊತ್ತದ ಟೂಲ್​ಕಿಟ್ ಸಿಗುತ್ತದೆ.
  • ನೊಂದಾಯಿಸಿಕೊಂಡವರಿಗೆ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಲು ಮೂಲ ತರಬೇತಿ ಮತ್ತು ಉನ್ನತ ಮಟ್ಟದ ತರಬೇತಿಯನ್ನು ಕೊಡಲಾಗುತ್ತದೆ. ಇವೆಲ್ಲವೂ ಉಚಿತವಾಗಿರುತ್ತದೆ.

ಇದನ್ನೂ ಓದಿ: ತೆರಿಗೆ ಉಳಿಸುವ ನರೇಂದ್ರ ಮೋದಿ ಟ್ರಿಕ್ಸ್; ಇನ್ಫ್ರಾ ಬಾಂಡ್​ಗಳಲ್ಲಿ ಹೂಡಿಕೆ ಮಾಡಿದ್ದ ಪ್ರಧಾನಿ; ಏನಿದು ಈ ಇನ್ಫ್ರಾಸ್ಟ್ರಕ್ಚರ್ ಬಾಂಡ್ಸ್?

  • ತರಬೇತಿಯಷ್ಟೇ ಅಲ್ಲದೇ 10,000 ರೂನಿಂದ 10 ಲಕ್ಷ ರೂವರೆಗೆ ಹಣಕಾಸು ನೆರವನ್ನೂ ನೀಡಲಾಗುತ್ತದೆ.
  • ಯೋಜನೆಯ ಮೊದಲ ಹಂತದಲ್ಲಿ ಕುಶಲಕರ್ಮಿಗಳಿಗೆ ಶೇ. 5ರ ಬಡ್ಡಿದರದಲ್ಲಿ 1 ಲಕ್ಷ ರೂವರೆಗೂ ಸಾಲ ನೀಡಲಾಗುತ್ತದೆ. ಮುಂದಿನ ಹಂತದಲ್ಲಿ ಅದೇ ಬಡ್ಡಿದರದಲ್ಲಿ 2 ಲಕ್ಷ ರೂವರೆಗೆ ಸಾಲ ಕೊಡಲಾಗುತ್ತದೆ.

ವಿಶ್ವಕರ್ಮ ಯೋಜನೆಯಿಂದ ಉದ್ಯೋಗಸೃಷ್ಟಿಗೆ ಸಹಾಯಕವಾಗುವ ನಿರೀಕ್ಷೆ

ಭಾರತದಲ್ಲಿ ಮುಂದಿನ ಐದು ವರ್ಷದಲ್ಲಿ 30 ಲಕ್ಷ ಕುಶಲಕರ್ಮಿ ಕುಟುಂಬಗಳನ್ನು ತಲುಪುವ ಗುರಿ ಈ ಯೋಜನೆಯದ್ದು. ಪ್ರತೀ ವರ್ಷ 15,000 ಮಂದಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಕುಶಲಕರ್ಮಿಗಳ ಬದುಕು ಹಸನಾಗಿಸುವುದಲ್ಲದೇ, ಭಾರತದ ಸಾಂಪ್ರದಾಯಿಕ ಕಲಾ ಶ್ರೀಮಂತಿಕೆ ಇನ್ನಷ್ಟು ಉಜ್ವಲಗೊಳ್ಳಲು ಹಾಗೂ ಜಾಗತಿಕ ಮಾರುಕಟ್ಟೆಯ ಅಗತ್ಯಗಳಿಗೆ ಸ್ಪಂದಿಸಲು ಇದು ನೆರವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ