AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 11ನೇ ತಾರೀಕಿನ ಸೋಮವಾರದಂದು ಭಾರತೀಯ ಬಾಹ್ಕಾಶ ಒಕ್ಕೂಟಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.

Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:Oct 09, 2021 | 10:16 PM

ಭಾರತೀಯ ಬಾಹ್ಯಾಕಾಶ ವಲಯದ ಧ್ವನಿಯಾಗುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಒಕ್ಕೂಟ (ISpA)ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 11ನೇ ತಾರೀಕಿನ ಸೋಮವಾರದಂದು ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (PMO) ಶನಿವಾರ ಹೇಳಿದೆ. ಈ ಸಂದರ್ಭದಲ್ಲಿ ಬಾಹ್ಯಾಕಾಶ ವಲಯದ ಪ್ರತಿನಿಧಿಗಳ ಜತೆಗೆ ಮೋದಿ ಸಂವಾದವನ್ನು ನಡೆಸಲಿದ್ದಾರೆ. ISpAನಿಂದ ನೀತಿ ನಿರೂಪಣೆ ಮತ್ತು ಸರ್ಕಾರ, ಅದರ ಏಜೆನ್ಸಿಗಳೂ ಸೇರಿದಂತೆ ಭಾರತೀಯ ಬಾಹ್ಯಾಕಾಶ ವ್ಯಾಪ್ತಿಯ ಎಲ್ಲ ಭಾಗೀದಾರರನ್ನು ಇದು ಒಳಗೊಳ್ಳುತ್ತದೆ. ಆತ್ಮನಿರ್ಭರ್ ಭಾರತ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಬಿಂಬಿಸುವಂತೆ, ISpA ಮೂಲಕ ಭಾರತವು ಸ್ವಾವಲಂಬಿಯನ್ನಾಗಲು, ತಾಂತ್ರಿಕವಾಗಿ ಮುನ್ನಡೆಯಲು ಮತ್ತು ಬಾಹ್ಯಾಕಾಶ ವಲಯಕ್ಕೆ ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಹೇಳಿದೆ.

ಬಾಹ್ಯಾಕಾಶ ಮತ್ತು ಉಪಗ್ರಹ ತಂತ್ರಜ್ಞಾನದಲ್ಲಿ ಮುಂದುವರಿದ ಸಾಮರ್ಥ್ಯ ಹೊಂದಿದ ಪ್ರಮುಖ ದೇಶೀಯ ಮತ್ತು ಜಾಗತಿಕ ಕಾರ್ಪೊರೇಷನ್​ನ ಪ್ರತಿನಿಧಿಗಳು ISpA ಪ್ರತಿನಿಧಿಸುತ್ತಾರೆ. ಸ್ಥಾಪಕ ಸದಸ್ಯರಾಗಿ ಲಾರ್ಸನ್ ಟೂಬ್ರೋ, ನೆಲ್ಕೋ (ಟಾಟಾ ಸಮೂಹ), ಒನ್ ವೆಬ್, ಭಾರ್ತಿ ಏರ್​ಟೆಲ್, ಮ್ಯಾಪ್​ಮೈಇಂಡಿಯಾ, ವಲ್​ಚಂದ್​ನಗರ್​ ಇಂಡಸ್ಟ್ರೀಸ್ ಮತ್ತು ಅನಂತ್ ಟೆಕ್ನಾಲಜಿ ಲಿಮಿಟೆಡ್ ಇದ್ದಾರೆ.

ಇತರ ಪ್ರಮುಖ ಸದಸ್ಯರಾಗಿ ಗೋದ್ರೆಜ್, Hughes India, ಅಝಿಸ್ಟಾ- BST ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಬಿಇಎಲ್, ಸೆಂಟ್ರಮ್ ಎಲೆಕ್ಟ್ರಾನಿಕ್ಸ್ ಅಂಡ್ ಮ್ಯಾಕ್ಸರ್ ಇಂಡಿಯಾ ಕೂಡ ಈ ಗುಂಪಿನಲ್ಲಿ ಇರಲಿವೆ ಎಂದು ಪ್ರಧಾನಮಂತ್ರಿ ಕಾರ್ಯಾಲವು ತಿಳಿಸಿದೆ.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 10:14 pm, Sat, 9 October 21

ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ