Global Investors Summit: ಉತ್ತರಾಖಂಡದಲ್ಲಿ ಇಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ, ಪ್ರಧಾನಿ ಮೋದಿ ಉದ್ಘಾಟನೆ

ಇಂದು ಉತ್ತರಾಖಂಡ(Uttarakhand)ದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ(Global Investors Summit) ನಡೆಯಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಶೃಂಗಸಭೆಯ ಗುರಿಯಾಗಿದೆ. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

Global Investors Summit: ಉತ್ತರಾಖಂಡದಲ್ಲಿ ಇಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ, ಪ್ರಧಾನಿ ಮೋದಿ ಉದ್ಘಾಟನೆ
ನರೇಂದ್ರ ಮೋದಿImage Credit source: ABP Live
Follow us
ನಯನಾ ರಾಜೀವ್
|

Updated on: Dec 08, 2023 | 8:36 AM

ಇಂದು ಉತ್ತರಾಖಂಡ(Uttarakhand)ದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ(Global Investors Summit) ನಡೆಯಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಶೃಂಗಸಭೆಯ ಗುರಿಯಾಗಿದೆ. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ.

ಎರಡು ದಿನಗಳ ಶೃಂಗಸಭೆಯು ಡಿಸೆಂಬರ್ 8 ಮತ್ತು 9 ರಂದು ಶಾಂತಿಯಿಂದ ಸಮೃದ್ಧಿಯೆಡೆಗೆ ಎಂಬ ವಿಷಯದೊಂದಿಗೆ ನಡೆಯಲಿದೆ. ಪ್ರಪಂಚದಾದ್ಯಂತದ ಸಾವಿರಾರು ಹೂಡಿಕೆದಾರರು ಮತ್ತು ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು, ವಿವಿಧ ದೇಶಗಳ ರಾಯಭಾರಿಗಳು ಹಾಗೂ ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಉತ್ತರಾಖಂಡದ ಜಾನಪದ ಕಲಾವಿದರು ಸುಮಾರು ಒಂದು ಕಿಲೋಮೀಟರ್ ವರೆಗೆ 1,000 ಜನರ ಮಾನವ ಸರಪಳಿಯ ನಡುವೆ ಸಾಂಸ್ಕೃತಿಕ ಪ್ರಸ್ತುತಿಗಳ ಮೂಲಕ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ದೇಶದ ದೊಡ್ಡ ಕೈಗಾರಿಕೋದ್ಯಮಿಗಳಾದ ಮುಕೇಶ್ ಅಂಬಾನಿ, ಗೌತಮ್ ಅದಾನಿ, ಸಂಜೀವ್ ಪುರಿ, ಸಜ್ಜನ್ ಜಿಂದಾಲ್, ಬಾಬಾ ರಾಮ್‌ದೇವ್, ಬನ್ಮಾಲಿ ಅಗರ್ವಾಲ್ ಮತ್ತು ಚರಂಜಿತ್ ಬ್ಯಾನರ್ಜಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಶಕ್ತ್ ಉತ್ತರಾಖಂಡ ಪುಸ್ತಕ ಬಿಡುಗಡೆ ಮತ್ತು ಹೌಸ್ ಆಫ್ ಹಿಮಾಲಯಸ್ ಬ್ರಾಂಡ್ ಅನ್ನು ಬಿಡುಗಡೆ ಮಾಡಲಾಗುವುದು.

ಮತ್ತಷ್ಟು ಓದಿ: ಕೊಪ್ಪಳ, ಉಡುಪಿ ಜೆಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ

ಶೃಂಗಸಭೆಗೆ ಬರುವ ಕೈಗಾರಿಕೋದ್ಯಮಿಗಳಿಗೆ ಅಲ್ಟ್ರಾಲಕ್ಸುರಿ ಕಾರುಗಳ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ವಿವಿಧ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಮಾರ್ಗಸೂಚಿಗಳನ್ನು ನೀಡಿದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್