AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Rozgar Mela: ಪಿಎಂ ಉದ್ಯೋಗ ಮೇಳ; ಏನಿದು ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಪಿಎಂ ರೋಜ್​ಗಾರ್ ಮೇಳ ಎಷ್ಟು ದಿನಗಳ ವರೆಗೆ ನಡೆಯಲಿದೆ? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೇ? ಈ ಪ್ರಶ್ನೆಗಳ ಕುರಿತು ಇಲ್ಲಿದೆ ಮಾಹಿತಿ.

PM Rozgar Mela: ಪಿಎಂ ಉದ್ಯೋಗ ಮೇಳ; ಏನಿದು ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 22, 2022 | 12:40 PM

Share

10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ (Rozgar Mela) ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಸುಮಾರು 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನೂ ಅವರು ಈ ಕಾರ್ಯಕ್ರಮದಲ್ಲಿ ವಿತರಣೆ ಮಾಡಿದ್ದಾರೆ. ಈ ಉದ್ಯೋಗ ಮೇಳ ಎಷ್ಟು ದಿನಗಳ ವರೆಗೆ ನಡೆಯಲಿದೆ? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೇ? ಈ ಪ್ರಶ್ನೆಗಳ ಕುರಿತು ಇಲ್ಲಿದೆ ಮಾಹಿತಿ.

ಏನಿದು ಯೋಜನೆ?

ಯುವಕರಿಗೆ ಉದ್ಯೋಗ ಕಲ್ಪಿಸುವುದಕ್ಕಾಗಿ ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮವು ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಮಂದಿಗೆ ಉದ್ಯೋಗ ನೀಡುವ ಗುರಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ
Image
SBI FD Rates: ಎಸ್​ಬಿಐಯಿಂದ ದೀಪಾವಳಿ ಕೊಡುಗೆ, ಎಫ್​ಡಿ ಬಡ್ಡಿ ದರ ಹೆಚ್ಚಳ
Image
ದೀಪಾವಳಿ ಹಬ್ಬದ ವೇಳೆ ಏರಿಕೆಯಾಗುತ್ತಾ ಪೆಟ್ರೋಲ್ ಬೆಲೆ?; ಇಂದಿನ ಡೀಸೆಲ್ ದರ
Image
EPFO Clarification: ವೇತನ ರಹಿತ ರಜೆಯಲ್ಲಿದ್ದಾಗ ಮೃತಪಟ್ಟರೂ ಡೆತ್ ಬೆನಿಫಿಟ್​ ಪಡೆಯಬಹುದು; ಇಪಿಎಫ್​ಒ

ಇದನ್ನೂ ಓದಿ: Rozgar Mela: 10 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವ ರೋಜ್​ಗಾರ್ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ

ಯುವಕರಿಗೆ ಉದ್ಯೋಗ ನೀಡುವುದರ ಜತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ಮತ್ತು ನಿರ್ದೇಶನದ ಮೇರೆಗೆ ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ (ಪಿಎಂಒ) ಇತ್ತೀಚೆಗೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಎಲ್ಲೆಲ್ಲ ಉದ್ಯೋಗಾವಕಾಶ?

ಪಿಎಂಒ ನೀಡಿರುವ ಮಾಹಿತಿ ಪ್ರಕಾರ, ಕೇಂದ್ರದ 38 ಸಚಿವಾಲಯ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಯಲಿದೆ. ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ.

ಯಾವ ಗ್ರೂಪ್​ನ ಎಷ್ಟು ಹುದ್ದೆ ಖಾಲಿ ಇವೆ?

ಗ್ರೂಪ್ ಎ ಶ್ರೇಣಿಯ 23,876, ಗ್ರೂಪ್ ಬಿ ಶ್ರೇಣಿಯ 25,836 ಹಾಗೂ ಗ್ರೂಪ್ ಸಿ ಶ್ರೇಣಿಯ 7.6 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ‘ಸಿಸಿಐಎಂ ಇಂಡಿಯಾ’ ತಾಣವು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ರಕ್ಷಣೆ, ರೈಲ್ವೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಗೆ 10,000 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. 2023ರ ಅಂತ್ಯದ ಒಳಗಾಗಿ ಎಲ್ಲ ನೇಮಕಾತಿಗಳನ್ನು ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

  • ಭಾರತದ ಪ್ರಜೆಯಾಗಿರಬೇಕು
  • 18-29 ವರ್ಷ ವಯಸ್ಸಿನವರಾಗಿರಬೇಕು
  • ಪದವಿ, 10ನೇ ತರಗತಿ ಹಾಗೂ 12ನೇ ತರಗತಿ ಶಿಕ್ಷಣ ಪಡೆದಿರಬೇಕು.
  • ಲಿಖಿತ ಪರೀಕ್ಷೆ ಮತ್ತು ಸಾಮಾನ್ಯ ಮೌಖಿಕ ಸಂದರ್ಶನದಲ್ಲಿ ತೇರ್ಗೆಯಾಗಿರಬೇಕು.
  • ಅರ್ಜಿದಾರರು ಯಾವುದೇ ಘೋರ ಅಪರಾಧ ಅಥವಾ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಬಾರದು.

ಹೀಗೆ ಅರ್ಜಿ ಸಲ್ಲಿಸಬಹುದು?

  1. psc.gov,in, ssc.nic.in ಹಾಗೂ ಇತರ ಅಧಿಕೃತ ನೇಮಕಾತಿ ತಾಣಗಳಿಗೆ ಭೇಟಿ ನೀಡಿ.
  2. PM Rozgar Mela 2022 Online Registration ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
  3. ಎಲ್ಲ ವೈಯಕ್ತಿಕ ವಿವರಗಳನ್ನು ದಾಖಲಿಸಿ.
  4. ಬಳಿಕ ಸಬ್​ಮಿಟ್ ಬಟನ್ ಕ್ಲಿಕ್ ಮಾಡಿ
  5. ಇಷ್ಟು ಮಾಡಿದರೆ ಪಿಎಂ ರೋಜ್​ಗಾರ್ ಮೇಳದಲ್ಲಿ ನೀವು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಂತಾಗಲಿದೆ.
  6. ಅಭ್ಯರ್ಥಿಗಳು ಮೂಲ DMC ಗಳ ಸ್ಕ್ಯಾನ್ ಮಾಡಿದ ಪ್ರತಿಗಳು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟಿಂಗ್ ಕಾರ್ಡ್‌ನಂತಹ ಐಡಿ ಜೊತೆಗೆ ಹಿಂದಿನ ಕೆಲಸದ ಅನುಭವ ಪ್ರಮಾಣಪತ್ರವನ್ನೂ ಲಗತ್ತಿಸಬೇಕು. ಅಭ್ಯರ್ಥಿಗಳು ಲಗತ್ತಿಸಿದ ಎಲ್ಲಾ ದಾಖಲೆಗಳು ಸ್ಪಷ್ಟ ಮತ್ತು ಮಾನ್ಯವಾಗಿರಬೇಕು.

ಯಾವಾಗ ಅರ್ಜಿ ಸಲ್ಲಿಸಬಹುದು?

ಪಿಎಂ ರೋಜ್​ಗಾರ್ ಯೋಜನೆಯಡಿ 2022ರ ಅಕ್ಟೋಬರ್ 22ರಿಂದ ಅರ್ಜಿ ಸಲ್ಲಿಸಬಹುದು. 2023ರ ಕೊನೆಯವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Sat, 22 October 22

Follow Us
TV9 Web
TV9 Web

TV9 Kannada

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ