AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM SVANIdhi: ಸರ್ಕಾರದ ಪಿಎಂ ಸ್ವನಿಧಿ ಯೋಜನೆ ಬಗ್ಗೆ ಗೊತ್ತಿರಬೇಕಾದ ಸಂಗತಿಗಳಿವು

ಪಿಎಂ ಸ್ವನಿಧಿ ಯೋಜನೆ ಬಗ್ಗೆ ತಿಳಿದಿರಬೇಕಾದ ಸಂಗತಿಗಳು ಇಲ್ಲಿವೆ. ಯೋಜನೆ ಲಾಭವನ್ನು ಪಡೆಯುವುದಕ್ಕೆ ಏನೇನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

PM SVANIdhi: ಸರ್ಕಾರದ ಪಿಎಂ ಸ್ವನಿಧಿ ಯೋಜನೆ ಬಗ್ಗೆ ಗೊತ್ತಿರಬೇಕಾದ ಸಂಗತಿಗಳಿವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 20, 2021 | 4:58 PM

Share

PM SVANIdhi (ಸ್ವನಿಧಿ) ಅಥವಾ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಬೀದಿ ವ್ಯಾಪಾರಿಗಳಿಗೆ ವಿಶೇಷ ಕಿರು ಸಾಲ ಸೌಲಭ್ಯವಾಗಿದೆ. ಈ ಯೋಜನೆಯನ್ನು ಜೂನ್ 1, 2020ರಂದು ಪ್ರಾರಂಭಿಸಲಾಗಿದೆ. ಇದರ ಮೂಲಕ ಮಾರಾಟಗಾರರು ಯಾವುದೇ ಆಧಾರ ನೀಡುವ ಅಗತ್ಯ ಇಲ್ಲದೆ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚುವರಿಯಾಗಿ, ಅರ್ಜಿದಾರರು ಬಡ್ಡಿಯ ಮೇಲೆ ಸಬ್ಸಿಡಿಯನ್ನು ಪಡೆಯುತ್ತಾರೆ. ಈ ಯೋಜನೆಯು ಮಾರ್ಚ್ 31, 2022ರವರೆಗೆ ಮಾನ್ಯವಾಗಿರುತ್ತದೆ.

ಕೊವಿಡ್-19 ಬಿಕ್ಕಟ್ಟು ಮತ್ತು ನಿರ್ಬಂಧಗಳು ಬೀದಿ ವ್ಯಾಪಾರಿಗಳ ಮೇಲೆ ಪ್ರತಿಕೂಲ ಫಲಿತಾಂಶವನ್ನು ನೀಡಿವೆ. ಅನೇಕರು ತಮ್ಮ ಆದಾಯದ ಮೂಲವನ್ನು ಕಳೆದುಕೊಂಡಿದ್ದಾರೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಹಿಂದಿನ ಮುಖ್ಯ ಉದ್ದೇಶವೆಂದರೆ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವುದು. ಇದರಿಂದ ಅವರು ತಮ್ಮ ವ್ಯವಹಾರಗಳನ್ನು ಪುನರಾರಂಭಿಸಬಹುದು ಮತ್ತು ಕೊವಿಡ್​ ಪೂರ್ವ ಸಹಜ ಸ್ಥಿತಿಗೆ ಬರಬಹುದು. ಈ ಯೋಜನೆಯಡಿ ಈಗ ಬೀದಿ ವ್ಯಾಪಾರಿಗಳು ರೂ. 20,000 ವರೆಗೆ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್) ಸಾಲವನ್ನು ಪಡೆಯಬಹುದು. ಬಡ್ಡಿ ಸಬ್ಸಿಡಿಯು ಮಾರ್ಚ್ 31, 2022ರ ವರೆಗೆ ಮಾನ್ಯವಾಗಿರುತ್ತದೆ.

ಪ್ರಯೋಜನಗಳು ಬೀದಿ ವ್ಯಾಪಾರಿಗಳು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ರೂ. 20,000 ವರೆಗೆ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್) ಸಾಲವನ್ನು ಪಡೆಯುತ್ತಾರೆ. ಸಮಯೋಚಿತ ಅಥವಾ ಆರಂಭಿಕ ಮರುಪಾವತಿಯ ಮೇಲೆ, ಮಾರಾಟಗಾರರು ಹೆಚ್ಚುವರಿ ಮಿತಿಯೊಂದಿಗೆ ಮತ್ತೊಂದು ವರ್ಕಿಂಗ್ ಕ್ಯಾಪಿಟಲ್ ಸಾಲಕ್ಕೆ ಅರ್ಹರಾಗುತ್ತಾರೆ.

ಬಡ್ಡಿ ದರಗಳು ಬಡ್ಡಿದರಗಳು ಬ್ಯಾಂಕ್​ನಿಂದ ಬ್ಯಾಂಕ್​ಗೆ ಬದಲಾಗುತ್ತವೆ. ಬ್ಯಾಂಕ್​ಗಳ ದರಗಳು ಅವುಗಳ ಚಾಲ್ತಿಯಲ್ಲಿರುವ ಬಡ್ಡಿದರಗಳಂತೆಯೇ ಇರುತ್ತದೆ.

ಅವಧಿ ಪಿಎಂ ಸ್ವನಿಧಿ ಅಡಿಯಲ್ಲಿ ವರ್ಕಿಂಗ್ ಕ್ಯಾಪಿಟಲ್ ಸಾಲದ ಅವಧಿಯು ಒಂದು ವರ್ಷ. ಇದನ್ನು 12 ಇಎಂಐ ಆಯ್ಕೆಗಳೊಂದಿಗೆ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಬಹುದು. ಯಾವುದೇ ಪ್ರೀ-ಕ್ಲೋಷರ್ ಶುಲ್ಕವಿಲ್ಲ.

ಬಡ್ಡಿ ಸಹಾಯಧನ ಫಲಾನುಭವಿಗಳಿಗೆ ಶೇ 7ರ ಬಡ್ಡಿ ಸಹಾಯಧನ ಸಿಗುತ್ತದೆ. ಬಡ್ಡಿ ಸಬ್ಸಿಡಿ ಮೊತ್ತವನ್ನು ತ್ರೈಮಾಸಿಕವಾಗಿ ಸಾಲಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

ಅರ್ಹತೆಯ ಮಾನದಂಡಗಳು ಮಾರ್ಚ್ 24, 2020ರಂದು ಅಥವಾ ಅದಕ್ಕೂ ಮೊದಲು ಮಾರಾಟದಲ್ಲಿ ಸಕ್ರಿಯ ಆಗಿರುವ ಎಲ್ಲ ಬೀದಿ ವ್ಯಾಪಾರಿಗಳು ಈ ಯೋಜನೆಯಡಿಯಲ್ಲಿ ವರ್ಕಿಂಗ್ ಕ್ಯಾಪಿಟಲ್ ಸಾಲಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೇಗೆ ಅರ್ಜಿ ಸಲ್ಲಿಸಬೇಕು? ಬೀದಿ ವ್ಯಾಪಾರಿಗಳು PM Svanidhi ವೆಬ್‌ಸೈಟ್ pmsvanidhi.mohua.gov.inನಲ್ಲಿ ಈ ಸಾಲಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PMMVY Scheme: ಗರ್ಭಿಣಿ, ಬಾಣಂತಿಯರಿಗೆ ಸರ್ಕಾರದ ಆಸರೆ; ಮಾತೃ ವಂದನಾ ಯೋಜನೆಗೆ ನೋಂದಣಿ ಹೇಗೆ?

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ