AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMAY-G: ಪಿಎಂ ಗ್ರಾಮೀಣ ವಸತಿ ಯೋಜನೆ: 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ

PM Awas Yojana Grameen: ಪ್ರಧಾನಿ ನರೇಂದ್ರ ಮೋದಿ ಪಿಎಂ ಆವಾಸ್ ಗ್ರಾಮೀಣ ಯೋಜನೆಯ (ಪಿಎಂಎವೈ- ಜಿ) 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ಪ್ರಧಾನಿಗಳು ಪಿಎಂ ಜನಮಾನ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಪಿಎಂ ಜನಮಾನ್ ಯೋಜನೆ ಬಹಳ ದುರ್ಬಲ ಸ್ಥಿತಿಯಲ್ಲಿರುವ ಬುಡಕಟ್ಟು ಜನರ ಶ್ರೇಯೋಭಿವೃದ್ಧಿಗೆ ರೂಪಿಸಿದ ಸ್ಕೀಮ್.

PMAY-G: ಪಿಎಂ ಗ್ರಾಮೀಣ ವಸತಿ ಯೋಜನೆ: 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2024 | 10:23 AM

Share

ನವದೆಹಲಿ, ಜನವರಿ 16: ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಆವಾಸ್ ಗ್ರಾಮೀಣ ಯೋಜನೆಯ (PMAY- G) ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಣ ಬಿಡುಗಡೆಗೆ ಪ್ರಧಾನಿಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಪಿಎಂ ಜನಮಾನ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಏನಿದು ಪಿಎಂ ಜನಮಾನ್ ಯೋಜನೆ?

ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್ ಯೋಜನೆ (PM JANMAN – Pradhan Mantri Janjati Adivasi Nyaya Maha Abhiyan) ಇದು. ಬಹಳ ದುರ್ಬಲ ಸ್ಥಿತಿಯಲ್ಲಿರುವ ಬುಡಕಟ್ಟು ಜನರ ಶ್ರೇಯೋಭಿವೃದ್ಧಿಗೆ ರೂಪಿಸಿದ ಸ್ಕೀಮ್ ಇದು. ಎರಡು ತಿಂಗಳ ಹಿಂದೆ 2023ರ ನವೆಂಬರ್ 15ರಂದು ಬುಡಕಟ್ಟು ಆತ್ಮಾಭಿಮಾನ ದಿನದಂದು (ಟ್ರೈಬಲ್ ಪ್ರೈಡ್ ಡೇ) ಪಿಎಂ ಜನಮಾನ್ ಯೋಜನೆಯನ್ನು ಆರಂಭಿಸಲಾಗಿತ್ತು. 24,000 ಕೋಟಿ ರೂನಷ್ಟು ಆರಂಭಿಕ ಬಜೆಟ್ ಅನ್ನು ಈ ಸ್ಕೀಮ್​ಗಾಗಿ ತೆಗೆದಿರಿಸಲಾಗಿದೆ.

ಬುಡಕಟ್ಟು ಸಮುದಾಯದವರ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಈ ಸ್ಕೀಮ್ ರೂಪಿಸಲಾಗಿದೆ. ಬಹಳ ಸೂಕ್ಷ್ಮ ಅಥವಾ ಅಸಹಾಯಕ ಪರಿಸ್ಥಿತಿಯಲ್ಲಿರುವ ಬುಡಕಟ್ಟು ಸಮುದಾಯಗಳನ್ನು (PVTG- Particularly Vulnerable Tribal Groups ಗುರುತಿಸಿ ಅವರನ್ನು ಮಾತ್ರ ಈ ಸ್ಕೀಮ್​​ನಲ್ಲಿ ಒಳಗೊಳ್ಳಲಾಗಿದೆ. ವಸತಿ, ಕುಡಿಯುವ ನೀರು, ಶೌಚ, ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ಲಭ್ಯತೆ, ವಿದ್ಯುತ್, ರಸ್ತೆ, ಟೆಲಿಕಾಂ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಗುರಿ ಇದೆ.

ಇದನ್ನೂ ಓದಿ: Green FDs: ಎಸ್​ಬಿಐನಿಂದ ಹೊಸ ಸ್ಪೆಷನ್ ಎಫ್​ಡಿ ಸ್ಕೀಮ್ ಆರಂಭ; ಗ್ರೀನ್ ರುಪೀ ಟರ್ಮ್ ಡೆಪಾಸಿಟ್ ಯೋಜನೆ ಬಗ್ಗೆ ತಿಳಿಯಿರಿ

2011ರ ಸೆನ್ಸಸ್ ಪ್ರಕಾರ ಭಾರತದಲ್ಲಿ ಪರಿಶಿಷ್ಟ ಪಂಗಡದ (ಎಸ್​ಟಿ- ಶ್ಕೆಡ್ಯೂಲ್ಡ್ ಟ್ರೈಬ್) ಜನಸಂಖ್ಯೆ 10.45 ಕೋಟಿಯಷ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಸಮುದಾಯಗಳೂ ಸೇರಿದಂತೆ 19 ರಾಜ್ಯ ಹಾಗು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 75 ಸಮುದಾಯಗಳನ್ನು ಪಿವಿಟಿಜಿ ಎಂದು ವರ್ಗೀಕರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?