AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ. 8ರ ಆರ್ಥಿಕ ಬೆಳವಣಿಗೆ ದರದ ಹೊಸ್ತಿಲಲ್ಲಿ ಭಾರತ: ಪಿಎಂ ಮುಖ್ಯ ಕಾರ್ಯದರ್ಶಿ ಶಕ್ತಿಕಾಂತ ದಾಸ್

ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಭಾರತದ ಜಿಡಿಪಿ ಬೆಳವಣಿಗೆಯ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೃಢವಾದ ಆರ್ಥಿಕ ಬುನಾದಿ ಮತ್ತು ದೇಶೀಯ ಬೇಡಿಕೆಯಿಂದ ಭಾರತ ಶೇ. 8 ರಷ್ಟು ಆರ್ಥಿಕ ದರವನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಹೇಳಿದ್ದಾರೆ. ಮುಂದುವರಿದ ದೇಶಗಳು ಮಂದಗತಿಯಲ್ಲಿ ಆರ್ಥಿಕ ಬೆಳವಣಿಗೆ ಹೊಂದುತ್ತಿವೆ. ಆದರೆ, ಭಾರತ ವಿಶ್ವದಲ್ಲೇ ವೇಗದ ಆರ್ಥಿಕತೆ ಎನಿಸಿದೆ ಎಂದಿದ್ದಾರೆ.

ಶೇ. 8ರ ಆರ್ಥಿಕ ಬೆಳವಣಿಗೆ ದರದ ಹೊಸ್ತಿಲಲ್ಲಿ ಭಾರತ: ಪಿಎಂ ಮುಖ್ಯ ಕಾರ್ಯದರ್ಶಿ ಶಕ್ತಿಕಾಂತ ದಾಸ್
ಶಕ್ತಿಕಾಂತ ದಾಸ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 06, 2026 | 6:37 PM

Share

ನವದೆಹಲಿ, ಅಕ್ಟೋಬರ್ 6: ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರು ದೇಶದ ಆರ್ಥಿಕ ಬೆಳೆವಣಿಗೆಯ ಕುರಿತು ಪ್ರಮುಖ ಮತ್ತು ಸಕಾರಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜಾಗತಿಕ ಸವಾಲುಗಳು ಮತ್ತು ಆರ್ಥಿಕ ಮಂದಗತಿಯ ನಡುವೆಯೂ ಭಾರತವು ಶೇ. 8 ರಷ್ಟು ಸಮೀಪದ ವಾರ್ಷಿಕ ಜಿಡಿಪಿ (GDP) ಪ್ರಗತಿ ದರವನ್ನು ಸಾಧಿಸಿದೆ ಎಂದು ಪ್ರಧಾನಮಂತ್ರಿಗಳ ಮುಖ್ಯ ಕಾರ್ಯದರ್ಶಿಯೂ ಆದ ಅವರು ಪ್ರತಿಪಾದಿಸಿದ್ದಾರೆ. ಕೌಟಿಲ್ಯ ಎಕನಾಮಿಕ್ ಕಾಂಕ್ಲೇವ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಶಕ್ತಿಕಾಂತ ದಾಸ್ ಅವರ ಪ್ರಕಾರ, ಭಾರತದ ಆರ್ಥಿಕತೆಯು ಕೇವಲ ಜಾಗತಿಕ ಪರಿಸ್ಥಿತಿಯನ್ನು ನೆಚ್ಚಿಕೊಂಡಿಲ್ಲ. ದೇಶೀಯವಾಗಿ ದೃಢವಾಗಿರುವ ಉತ್ಪಾದನಾ ವಲಯ, ಬಲವಾದ ಸೇವಾ ವಲಯ (Services Sector) ಮತ್ತು ಸರ್ಕಾರವು ಮೂಲಸೌಕರ್ಯ (Infrastructure) ಅಭಿವೃದ್ಧಿಗೆ ನೀಡುತ್ತಿರುವ ಬಂಡವಾಳ ಹೂಡಿಕೆಯು ಭಾರತದ ಈ ವಿಸ್ತೃತ ಪ್ರಗತಿಗೆ ಪ್ರಮುಖ ಚಾಲನಾ ಶಕ್ತಿಯಾಗಿದೆ.

ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಎಂಡಿಆರ್; ಶೇಕಡವಾರು ಶುಲ್ಕ, ಫ್ಲ್ಯಾಟ್ ಶುಲ್ಕ; ಸಣ್ಣ ವರ್ತಕರೆಂದರೆ ಯಾರು? ಹಲವು ಅನುಮಾನಗಳಿಗೆ ಉತ್ತರ

ಜಾಗತಿಕ ಆರ್ಥಿಕ ಸವಾಲುಗಳ ನಡುವೆಯೂ ಸ್ಥಿರತೆ

ವಿಶ್ವದ ಪ್ರಮುಖ ಶ್ರೀಮಂತ ದೇಶಗಳು ಹಣದುಬ್ಬರ ಮತ್ತು ಆರ್ಥಿಕ ಮಂದಗತಿಯ ಸವಾಲುಗಳನ್ನು ಎದುರಿಸುತ್ತಿರುವಾಗ, ಭಾರತವು ನಿಯಂತ್ರಿತ ಹಣದುಬ್ಬರ ಹಾಗೂ ದೃಢವಾದ ಬ್ಯಾಂಕಿಂಗ್ ರಂಗದ ಬಲದಿಂದ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಆರ್​ಬಿಐನ ಹಿಂದಿನ ಗವರ್ನರ್ ಆಗಿದ್ದ ಅವರು ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಹೂಡಿಕೆಯಲ್ಲಿ ಚೇತರಿಕೆ

ಖಾಸಗಿ ವಲಯದ ಕಂಪನಿಗಳು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮುಂದೆ ಬರುತ್ತಿರುವುದು ಮಾರುಕಟ್ಟೆಯಲ್ಲಿ ಹೆಚ್ಛಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ದೇಶೀಯ ಬೇಡಿಕೆಯನ್ನು (Domestic Demand) ಜೀವಂತವಾಗಿಡಲು ನೆರವಾಗಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಉತ್ಪಾದನಾ ಮೌಲ್ಯದಲ್ಲಿ ಭಾರತ ಮೇಲೇರಬೇಕು; ಅಸೆಂಬ್ಲಿಂಗ್​ಗೆ ಸೀಮಿತವಾಗದೆ ಎಂಡ್ ಟು ಎಂಡ್ ಮ್ಯಾನುಫ್ಯಾಕ್ಚರಿಂಗ್ ಹೆಚ್ಚಿಸಬೇಕು: ಚಂದ್ರಶೇಖರನ್

ಮಾರುಕಟ್ಟೆಯಲ್ಲಿ ರೀಟೇಲ್ ಹಣದುಬ್ಬರವನ್ನು ಶೇ. 4 ರ ನಿಗದಿತ ಮಿತಿಯೊಳಗೆ ತರುವುದು ಮತ್ತು ಅದೇ ಸಮಯದಲ್ಲಿ ಆರ್ಥಿಕ ಪ್ರಗತಿಯ ವೇಗವನ್ನು (Economic Growth Momentum) ತಗ್ಗಿಸದಂತೆ ಸಮತೋಲನ ಕಾಯ್ದುಕೊಳ್ಳುವುದು ಆರ್‌ಬಿಐನ ಮುಖ್ಯ ಆದ್ಯತೆಯಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಶಕ್ತಿಕಾಂತ್ ದಾಸ್ ಅವರ ಪ್ರಕಾರ, ಭಾರತದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು (Macroeconomic Fundamentals) ಅತ್ಯಂತ ಸುಭದ್ರವಾಗಿದ್ದು, ಮುಂದಿನ ದಶಕದಲ್ಲಿ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲು ಈ ಶೇ. 8 ರ ಬೆಳವಣಿಗೆಯ ದರವು ನಿರ್ಣಾಯಕವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Tue, 6 October 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ