Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್

ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5). ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ M5 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್
POCO M5
Edited By:

Updated on: Oct 08, 2026 | 2:18 PM

ಭಾರತದಲ್ಲಿ ಪೋಕೋ (Poco) ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವುದು ಕಡಿಮೆ ಆಗುತ್ತಿದೆ. ಇಂದು ಮಾರುಕಟ್ಟೆಯಲ್ಲಿ ಅನೇಕ ಮೊಬೈಲ್ ಬ್ರ್ಯಾಂಡ್​ಗಳು ಹುಟ್ಟುಕೊಂಡಿರುವ ಕಾರಣ ಸಾಮಾನ್ಯ ಫೀಚರ್​ಗಳಿರುವ ಫೋನ್​ಗಳಿಗೆ ಬೇಡಿಕೆ ಇಲ್ಲ. ಇದೇ ಕಾರಣ ಪೋಕೋ ಸಂಸ್ಥೆ ಕೆಲ ತಿಂಗಳುಗಳ ಕಾಲ ಕಾದು ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5). ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ M5 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

  1. ಪೋಕೋ M5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,499ರೂ. ಮತ್ತು 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 14,499 ರೂ. ನಿಗದಿ ಮಾಡಲಾಗಿದೆ.
  2. ಇದು ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪೋಕೋ M5 ಇದೇ ಸೆಪ್ಟೆಂಬರ್ 13 ರಿಂದ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ
  3. ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1080*2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಈ ಫೋನಿ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ.
  4. ಮೀಡಿಯಾಟೆಕ್ ಹೀಲಿಯೊ G99 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
  5. ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ
  6. ಪೋಕೋ M5ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.
  7. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

Published On - 7:19 am, Tue, 6 September 22

TV9 Web

TV9 Kannada

Read More
Loading...
Unable to load recommendations.
Follow Us