AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKAY: ಸೆಪ್ಟೆಂಬರ್​ ನಂತರ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ಕೊನೆ? ಏನೆನ್ನುತ್ತದೆ ಹಣಕಾಸು ಸಚಿವಾಲಯ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾ ಸೆಪ್ಟೆಂಬರ್ ಹೊತ್ತಿಗೆ ಕೊನೆ ಆಗಬಹುದು. ಅದು ಏಕೆ, ಏನು, ಎತ್ತ ಎಂಬ ವಿವರಣೆ ಇಲ್ಲಿದೆ.

PMGKAY: ಸೆಪ್ಟೆಂಬರ್​ ನಂತರ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ಕೊನೆ? ಏನೆನ್ನುತ್ತದೆ ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 24, 2022 | 6:17 PM

Share

ಭಾರತ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಥವಾ ಉಚಿತ ಆಹಾರ ಧಾನ್ಯ ಯೋಜನೆಯನ್ನು 2022ರ ಮಾರ್ಚ್​ನಲ್ಲಿ ಆರು ತಿಂಗಳವರೆಗೆ ಸೆಪ್ಟೆಂಬರ್​ವರೆಗೆ ವಿಸ್ತರಿಸಿದೆ. ಈ ಯೋಜನೆಯು ಮೂಲತಃ ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ತಿಂಗಳಿಗೆ 5 ಕೇಜಿ ಉಚಿತ ಅಕ್ಕಿ ಅಥವಾ ಗೋಧಿ ಮತ್ತು 1 ಕೇಜಿ ಸಂಪೂರ್ಣ ಕಡಲೇಕಾಳು ಒದಗಿಸುತ್ತದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಬ್ಸಿಡಿ ಪಡಿತರಕ್ಕೆ ಹೆಚ್ಚುವರಿಯಾಗಿದೆ.

ಆದರೆ, ಹಣಕಾಸು ಸಚಿವಾಲಯವು ಭಾರತ ಸರ್ಕಾರಕ್ಕೆ ಇದು ಸಾಧ್ಯವಿಲ್ಲ ಎಂದಿದೆ. ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸರ್ಕಾರದ ಹಣಕಾಸಿನ ಸ್ಥಿತಿಯನ್ನು ಸ್ಥಿರಗೊಳಿಸಲು ಸೆಪ್ಟೆಂಬರ್‌ನಲ್ಲಿ ಯೋಜನೆಯನ್ನು ನಿಲ್ಲಿಸಲು ಅಥವಾ ಪ್ರಮುಖ ತೆರಿಗೆ ಕಡಿತಗಳನ್ನು ಮಾಡಲು ವೆಚ್ಚ ಇಲಾಖೆಯು ಸಚಿವಾಲಯವನ್ನು ಕೇಳಿದೆ. 2022ರ ಬಜೆಟ್ ಭಾಷಣದ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹಣಕಾಸು ವರ್ಷ 2023ರ ಆಹಾರ ಸಬ್ಸಿಡಿ ಬಿಲ್ ಅನ್ನು ಕಳೆದ ವರ್ಷ 2.86 ಲಕ್ಷ ಕೋಟಿಗಳಿಂದ 2.07 ಲಕ್ಷ ಕೋಟಿ ರೂಪಾಯಿಗಳಿಗೆ ಇಳಿಸಿದರು. ಸೆಪ್ಟೆಂಬರ್​ವರೆಗೆ ಭಾರತದ ಸಬ್ಸಿಡಿ ಬಿಲ್ 2.87 ಲಕ್ಷ ಕೋಟಿ ರೂಪಾಯಿಗಳನ್ನು ತಲುಪುವ ನಿರೀಕ್ಷೆಯಿದ್ದು, ಇದು ಬಜೆಟ್ ಅನ್ನು ಮೀರಿಸುತ್ತದೆ. ಇನ್ನೂ 6 ತಿಂಗಳು ಹೋದರೆ ಬಿಲ್ 3.7 ಲಕ್ಷ ಕೋಟಿಗೆ ಏರಬಹುದು ಎಂದು ಎಕನಾಮಿಕ್ ಟೈಮ್ಸ್ ಹೇಳಿದೆ.

ಗಂಭೀರ ಹಣಕಾಸಿನ ಪರಿಸ್ಥಿತಿ

ಮಾಧ್ಯಮದ ಪ್ರಕಾರ, ದೇಶದಲ್ಲಿ ಹಣದುಬ್ಬರವನ್ನು ತಗ್ಗಿಸಲು ಕೈಗೊಂಡಿರುವ ವಿವಿಧ ಕ್ರಮಗಳು ಸರ್ಕಾರದ ಹಣಕಾಸಿನ ನೀತಿಯ ಮೇಲೆ ಹೆಚ್ಚಿನ ಒತ್ತಡಕ್ಕೆ ಕಾರಣವಾಗಿವೆ. ಇದರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ, ರಸಗೊಬ್ಬರ ಸಬ್ಸಿಡಿ ಹೆಚ್ಚಳ, ಖಾದ್ಯ ತೈಲದ ಮೇಲಿನ ಕಸ್ಟಮ್ಸ್ ಸುಂಕ ಕಡಿತ ಮತ್ತು ಅಡುಗೆ ಅನಿಲದ ಮೇಲಿನ ಸಬ್ಸಿಡಿ ಸೇರಿವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಸುಮಾರು 1 ಸಾವಿರ ಕೋಟಿ ರೂಪಾಯಿ ಹೊರೆ ಇದೆ.

ಇದನ್ನೂ ಓದಿ: ಎಲ್​ಪಿಜಿ ಸಬ್ಸಿಡಿ ರದ್ದುಪಡಿಸಿದ ಕೇಂದ್ರ ಸರ್ಕಾರ: ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಮಾತ್ರ ಸಹಾಯಧನ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?