AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

Premium petrol rate rise by over Rs 2: ಪ್ರೀಮಿಯಮ್ ಮಟ್ಟದ ಪೆಟ್ರೋಲ್​ನ ಬೆಲೆಯಲ್ಲಿ ಏರಿಕೆ ಆಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಈ ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಏರಿಕೆ ಮಾಡಿವೆ. ಆದರೆ, ಮಾಮೂಲಿಯ ಪೆಟ್ರೋಲ್ ಬೆಲೆಯಲ್ಲಿ ಯಾವ ಹೆಚ್ಚಳ ಮಾಡಲಾಗಿಲ್ಲ.

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ
ಪೆಟ್ರೋಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 20, 2026 | 4:06 PM

Share

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು (Premium Petrol Price) ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಡೀಸಲ್ ಬೆಲೆಯಲ್ಲೂ ಏರಿಕೆ ಆಗಿಲ್ಲ.

ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ ಮಾಮೂಲಿಯ ಪೆಟ್ರೋಲ್​ಗಿಂತ ತುಸು ಹೆಚ್ಚಿನದ್ದಿರುತ್ತದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್, ಎಚ್​ಪಿಸಿಎಲ್ ಈ ಬೆಲೆ ಏರಿಕೆ ಮಾಡಿವೆ.

ಇದನ್ನೂ ಓದಿ: ಶುಕ್ರವಾರ ಗರಿಗೆದರಿದ ಷೇರು ಬಜಾರು; ನಿನ್ನೆ ನೆಲಕಚ್ಚಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಂಡಿದ್ದು ಯಾಕೆ?

ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.96 ರೂ ಇದೆ. ಡೀಸಲ್ ಬೆಲೆ 90.99 ರೂ ಇದೆ. ಈ ಬೆಲೆಗಳಲ್ಲಿ ಬದಲಾವಣೆ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್​ನ ಬೆಲೆ 2.09ರೂನಿಂದ 2.35 ರೂವರೆಗೆ ಏರಿಕೆ ಆಗಿದೆ. ಐಒಸಿಎಲ್​ನ ಎಕ್ಸ್​ಪಿ95, ಎಚ್​ಪಿಸಿಎಲ್​ನ ಪವರ್ ಹಾಗು ಬಿಪಿಸಿಎಲ್​ನ ಸ್ಪೀಡ್ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ ಆಗಿದೆ.

ತೈಲ ಬೆಲೆ ಏರಿಕೆಯಿಂದ ನಷ್ಟ ಕಾಣುತ್ತಿರುವ ಒಎಂಸಿಗಳು

ಇರಾನ್ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಬೆಲೆಗಳು ಬ್ಯಾರಲ್​ಗೆ 65 ಡಾಲರ್ ಇದ್ದದ್ದು 100 ಡಾಲರ್ ಗಡಿ ದಾಟಿವೆ. ಕಚ್ಛಾ ತೈಲ ಬೆಲೆ ಏರಿಕೆಯಾದರೆ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಆಗಬೇಕಿತ್ತು. ಆದರೆ, ಸರ್ಕಾರವು ಜನಸಾಮಾನ್ಯರು ಮತ್ತು ಉದ್ಯಮಗಳಿಗೆ ಹೊರೆಯಾಗದಿರಲಿ ಎಂದು ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡದಿರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ ನಿಬಂಧನೆ ಹಾಕಿದೆ.

ಇದರ ಹೊರೆ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳ ಮೇಲೆ ಬಿದ್ದಿದೆ. ಕಚ್ಛಾ ತೈಲ ಬೆಲೆಯಲ್ಲಿ 10 ಡಾಲರ್ ಏರಿಕೆಯಾದಂತೆ ಪೆಟ್ರೋಲ್ ಲಾಭದಲ್ಲಿ 6.3 ರೂ ಕುಸಿತ ಆಗುತ್ತದೆ ಎನ್ನುವ ಲೆಕ್ಕಾಚಾರ ಇದೆ.

ಇದನ್ನೂ ಓದಿ: ಇರಾನ್ ಹೊಸ ವರಸೆ; ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಕ್ಕೆ ಆಲೋಚನೆ

ಜಾಗತಿಕವಾಗಿ ಬಹಳಷ್ಟು ದೇಶಗಳು ಪೆಟ್ರೋಲ್, ಡೀಸಲ್ ಬೆಲೆಗಳನ್ನು ಏರಿಸಿವೆ. ಭಾರತ ಸೇರಿ ಕೆಲ ದೇಶಗಳು ಮಾತ್ರ ದರ ಏರಿಸಿಲ್ಲ. ಅಮೆರಿಕವು ಪೆಟ್ರೋಲಿಯಂ ಸ್ವಾವಲಂಬನೆ ಹೊಂದಿದ್ದರೂ ಅಲ್ಲಿ ಪೆಟ್ರೋಲ್ ಬೆಲೆ ಶೇ. 20ಕ್ಕಿಂತ ಹೆಚ್ಚಾಗಿದೆ. ಚೀನಾದಲ್ಲಿ ಅತ್ಯಧಿಕ ಏರಿಕೆ ಆಗಿದೆ. ಬ್ರಿಟನ್, ಪಾಕಿಸ್ತಾನ್, ಶ್ರೀಲಂಕಾ ಇತ್ಯಾದಿ ದೇಶಗಳಲ್ಲೂ ಗಣನೀಯವಾಗಿ ಪೆಟ್ರೋಲ್ ಬೆಲೆ ಏರಿಕೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Fri, 20 March 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್