AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Privatise all PSBs: ಎಸ್​ಬಿಐ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಶಿಫಾರಸು

‘ಕೇಂದ್ರ ಸರ್ಕಾರವು ಈಗಾಗಲೇ ಎರಡು ಬ್ಯಾಂಕ್​ಗಳ ಖಾಸಗೀಕರಣಕ್ಕೆ ಒಲವು ತೋರಿದೆ’ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ.

Privatise all PSBs: ಎಸ್​ಬಿಐ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಶಿಫಾರಸು
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 13, 2022 | 11:19 AM

Share

ಮುಂಬೈ: ಕೇಂದ್ರ ಸರ್ಕಾರವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India – SBI) ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳನ್ನು (Public Sector Banks – PSBs) ಖಾಸಗೀಕರಣ ಮಾಡಬೇಕು ಎಂದು ರಾಷ್ಟ್ರೀಯ ಆನ್ವಯಿಕ ಅರ್ಥಶಾಸ್ತ್ರ ಸಂಶೋಧನಾ ಮಂಡಳಿಯ (National Council of Applied Economic Research – NCAER) ಪ್ರಧಾನ ನಿರ್ದೇಶಕ ಮತ್ತು ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ಪೂನಮ್ ಗುಪ್ತ ಹಾಗೂ ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಹಾಗೂ ಕೊಲಂಬಿಯಾ ವಿವಿ ಪ್ರಾಧ್ಯಾಪಕ ಅರವಿಂದ್ ಪನಗರಿಯಾ ಶಿಫಾರಸು ಮಾಡಿದ್ದಾರೆ.

‘ಸಾರ್ವಜನಿಕ ಸ್ವಾಮ್ಯದ ಎಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಆದರೆ ಭಾರತದ ಆರ್ಥಿಕತೆಯ ವಿಶೇಷ ಅಗತ್ಯಗಳು ಮತ್ತು ರಾಜಕೀಯ ಸಿದ್ಧಾಂತಗಳ ಹಿನ್ನೆಲೆಯಲ್ಲಿ ಸರ್ಕಾರವು ಒಂದಾದರೂ ಬ್ಯಾಂಕ್ ತನ್ನ ಸುಪರ್ದಿಯಲ್ಲಿ ಇರಬೇಕೆಂದು ಬಯಸುವುದು ಸಹಜವಾಗಿದೆ. ತನ್ನ ಗಾತ್ರ, ಕಾರ್ಯಕ್ಷಮತೆಯ ದೃಷ್ಟಿಯಿಂದ ಗಮನಾರ್ಹ ಎನಿಸಿರುವ ಎಸ್​ಬಿಐ ಒಂದನ್ನು ಸರ್ಕಾರ ಸದ್ಯದ ಮಟ್ಟಿಗೆ ತನ್ನ ಮಾಲೀಕತ್ವದಲ್ಲಿ ಉಳಿಸಿಕೊಂಡು, ಉಳಿದೆಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಬೇಕು ಎಂದು ನಾವು ಪ್ರಸ್ತಾಪಿಸುತ್ತೇವೆ’ ಎಂದು ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿಗೆ ‘ಭಾರತದ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣ ಏಕೆ, ಹೇಗೆ ಮತ್ತು ಎಷ್ಟರಮಟ್ಟಿಗೆ’ (Privatization of Public Sector Banks in India Why, How and How Far) ಎಂದು ಶೀರ್ಷಿಕೆ ಕೊಡಲಾಗಿದೆ.

‘ಬ್ಯಾಂಕ್​ಗಳ ಖಾಸಗೀಕರಣ ಪ್ರಕ್ರಿಯೆಯನ್ನು ಸರ್ಕಾರವು ಎರಡು ಪ್ರಬಲ ಬ್ಯಾಂಕ್​ಗಳ ಮೂಲಕ ಆರಂಭಿಸಬೇಕು. ಪ್ರಸ್ತುತ ಭಾರತದಲ್ಲಿ 11 ಸರ್ಕಾರಿ ಬ್ಯಾಂಕ್​ಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲವನ್ನೂ ಖಾಸಗೀಕರಣ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಆದರೆ ಖಾಸಗೀಕರಣ ಪ್ರಕ್ರಿಯೆಗೆ ಆಯ್ಕೆ ಮಾಡಿಕೊಳ್ಳುವ ಮೊದಲ ಎರಡು ಬ್ಯಾಂಕ್​ಗಳಿಗೆ ಉದ್ಯಮಿಗಳಿಂದ ಸಿಗುವ ಸ್ಪಂದನೆಯು ಮುಂದಿನ ದಿನಗಳಲ್ಲಿ ಇತರ ಬ್ಯಾಂಕ್​ಗಳ ಖಾಸಗೀಕರಣ ಪ್ರಕ್ರಿಯೆಯ ಭವಿಷ್ಯ ನಿರ್ಣಯಿಸುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕಳೆದ ಐದು ವರ್ಷಗಳ ಲೆಕ್ಕಾಚಾರದಲ್ಲಿ ಅತಿಹೆಚ್ಚು ಲಾಭ ಗಳಿಸಿರುವ, ಉತ್ತಮ ಗುಣಮಟ್ಟದ ಆಸ್ತಿ, ಷೇರುಮೌಲ್ಯ ಹೊಂದಿರುವ ಹಾಗೂ ಅತಿಕಡಿಮೆ ಎನ್​ಪಿಎ (ವಸೂಲಾಗದ ಸಾಲ) ಪ್ರಮಾಣ ಹೊಂದಿರುವ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣ ಪ್ರಕ್ರಿಯೆಗೆ ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

‘ಕೇಂದ್ರ ಸರ್ಕಾರವು ಈಗಾಗಲೇ ಎರಡು ಬ್ಯಾಂಕ್​ಗಳ ಖಾಸಗೀಕರಣಕ್ಕೆ ಒಲವು ತೋರಿದೆ’ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯನ್ ಎಕ್ಸ್​ಪ್ರೆಸ್’ ಜಾಲತಾಣವು ವರದಿ ಮಾಡಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?