AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಬರದಿದ್ದರೂ ಸರ್ಕಾರದ ಆರ್ಥಿಕ ನೀತಿ ನಿಲ್ಲುವುದಿಲ್ಲ: ರಘುರಾಮ್ ರಾಜನ್

Raghuram Rajan on continuation of policies: ಚುನಾವಣೆ ಬಳಿಕ ಒಂದು ವೇಳೆ ಎನ್​ಡಿಎ ಮೈತ್ರಿಕೂಟ ಸೋಲನುಭವಿಸಿಬಿಟ್ಟರೆ ಕಳೆದ 10 ವರ್ಷದಲ್ಲಿ ಸಾಧಿಸಿದ ಪ್ರಗತಿಗೆ ಹಿನ್ನಡೆ ಆಗಿ ಹೋಗುತ್ತಾ? ಸರ್ಕಾರದ ಹಲವು ನೀತಿಗಳನ್ನು ಹೊಸ ಸರ್ಕಾರ ರದ್ದು ಮಾಡುತ್ತಾ ಎನ್ನುವ ಭೀತಿ ಬಹಳ ಜನರಲ್ಲಿ ಇದೆ. ಆದರೆ ಇಂಥ ಸಾಧ್ಯತೆ ಇಲ್ಲ ಎಂದು ತಜ್ಞರು ಹೇಳುತ್ತಾರೆ. ಮಾಜಿ ಆರ್​ಬಿಐ ಗವರ್ನರ್ ರಘುರಾಮ್ ರಾಜನ್ ಪ್ರಕಾರ, ಯಾರೇ ಅಧಿಕಾರಕ್ಕೆ ಬಂದರೂ ಹಿಂದಿನ ಸರ್ಕಾರದ ಪ್ರಮುಖ ಆರ್ಥಿಕ ನೀತಿಗಳನ್ನು ಮುಂದುವರಿಸಿಕೊಂಡು ಹೋಗಬಹುದು.

ನರೇಂದ್ರ ಮೋದಿ ಬರದಿದ್ದರೂ ಸರ್ಕಾರದ ಆರ್ಥಿಕ ನೀತಿ ನಿಲ್ಲುವುದಿಲ್ಲ: ರಘುರಾಮ್ ರಾಜನ್
ರಘುರಾಮ್ ರಾಜನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2024 | 6:07 PM

Share

ನವದೆಹಲಿ, ಮೇ 28: ಲೋಕಸಭಾ ಚುನಾವಣೆಯ ಫಲಿತಾಂಶ (lok sabha election results) ಜೂನ್ 4ಕ್ಕೆ ಬರಲಿದ್ದು, ಮತದಾರನ ಒಲವು ಯಾರೆಡೆ ಎಂಬ ಕುತೂಹಲ ಇದೆ. ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಸಾಕಷ್ಟು ಹೊಸ ಆರ್ಥಿಕ ನೀತಿಗಳನ್ನು (economic policy) ತಂದಿದೆ. ಸಾಕಷ್ಟು ನೀತಿಗಳು ಫಲ ಕೊಟ್ಟಿವೆ. ಅಂತೆಯೇ ಮಾರುಕಟ್ಟೆ ಕೂಡ ಇವೇ ನೀತಿ ಮುಂದುವರಿಯಲಿ ಎಂದು ಬಯಸುತ್ತಿರುವಂತಿದೆ. ಚುನಾವಣೆಯಲ್ಲಿ ಎನ್​ಡಿಎಗೆ ಅಧಿಕಾರ ತಪ್ಪಿದರೆ ಮಾರುಕಟ್ಟೆ ನಕಾರಾತ್ಮಕವಾಗಿ ವರ್ತಿಸಬಹುದು ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಆರ್​ಬಿಐನ ಮಾಜಿ ಗವರ್ನರ್ ಹಾಗೂ ಕಾಂಗ್ರೆಸ್ ಪರ ರಾಜಕೀಯ ಒಲವು ಹೊಂದಿರುವ ಆರ್ಥಿಕ ತಜ್ಞ ರಘುರಾಮ್ ರಾಜನ್ ಅವರು ಮುಂದೆ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬರದೇ ಹೋದರೂ ಅದರ ಆರ್ಥಿಕ ನೀತಿಗಳು ನಿಲ್ಲುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬ್ಲೂಮ್​ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ರಘುರಾಮ್ ರಾಜನ್, ಸರ್ಕಾರದ ನೀತಿಯಲ್ಲಿ ಸಾಕಷ್ಟು ಮುಂದುವರಿಕೆಯ ಅಂಶವನ್ನು ಅಳವಡಿಸಲಾಗಿದೆ. ಯಾವ ಸರ್ಕಾರ ಬಂದರೂ ಹಿಂದಿನ ಒಳ್ಳೆಯ ಅಂಶಗಳನ್ನು ಮುಂದುವರಿಸಿಕೊಂಡು ಹೋಗಬಹುದು,’ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲಿ ಹೊಸ ಸರ್ಕಾರದಿಂದ ಬಜೆಟ್ ಮಂಡನೆ ಆಗುತ್ತದೆ. ಈಗಾಗಲೇ ಚಾಲ್ತಿಯಲ್ಲಿರುವ ಎಲ್ಲಾ ಒಳ್ಳೆಯ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬಹುದು. ಅಗತ್ಯವಿದ್ದಲ್ಲಿ ಬದಲಾವಣೆ ಮಾಡಬಹುದು ಎಂದು ಅಮೆರಿಕದಲ್ಲಿ ಯೂನಿವರ್ಸಿಟಿ ಪ್ರೊಫೆಸರ್ ಆಗಿರುವ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅಂಬಾನಿ ಅಡ್ಡೆಗೆ ಇಳಿಯುತ್ತಾರಾ ಅಡಾನಿ?; ಯುಪಿಐ, ಕ್ರೆಡಿಟ್ ಕಾರ್ಡ್, ಇಕಾಮರ್ಸ್ ಬಿಸಿನೆಸ್​ಗೆ ಇಳಿಯಲು ಸಜ್ಜು

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮಾಡಲಾದ ವೆಚ್ಚ ಅಗತ್ಯ ಇತ್ತು. ಮುಂಬರುವ ದಿನಗಳಲ್ಲಿ ಇನ್​ಫ್ರಾಸ್ಟ್ರಕ್ಚರ್​ನ ಗುಣಮಟ್ಟದತ್ತ ಗಮನ ಹರಿಸಬೇಕಾಗುತ್ತದೆ. ಸರ್ಕಾರದಿಂದ ಮಾಡಲಾಗುವ ಹೂಡಿಕೆ ಕೇವಲ ಪ್ರಮುಖ ಸಂಸ್ಥೆಗಳಿಗೆ ಮಾತ್ರವೇ ಲಾಭ ತರುವಂತಾಗಬಾರದು ಎಂದು ಅವರು ಹೇಳಿದ್ದಾರೆ.

ಒಂದು ಅಂದಾಜು ಪ್ರಕಾರ 2024ರಿಂದ 2026ರವರೆಗೆ ಎರಡು ವರ್ಷ ಅವಧಿಯಲ್ಲಿ ಹೊಸ ಇನ್​ಫ್ರಾಸ್ಟ್ರಕ್ಚರ್ ನಿರ್ಮಾಣಕ್ಕೆ ಭಾರತದಲ್ಲಿ ಬರೋಬ್ಬರಿ 44 ಲಕ್ಷ ಕೋಟಿ ರೂ ವೆಚ್ಚ ಮಾಡುವ ಸಾಧ್ಯತೆ ಇದೆ. ಇದರಿಂದ ಆರ್ಥಿಕತೆಗೆ ಶೇ. 9ರಷ್ಟು ಬೆಳವಣಿಗೆಯ ವೇಗ ಸಿಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..