Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ

ಮೆಕ್​ಡೊನಾಲ್ಡ್ ಇಂಡಿಯಾದ (ಪಶ್ಚಿಮ ಮತ್ತು ದಕ್ಷಿಣ) ಬ್ರ್ಯಾಂಡ್ ಅಂಬಾಸಡರ್ ಆಗಿ ಕನ್ನಡತಿ- ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಲಾಗಿದೆ ಎಂದು ಶುಕ್ರವಾರ ಘೋಷಣೆ ಮಾಡಲಾಗಿದೆ.

Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ (ಸಂಗ್ರಹ ಚಿತ್ರ)
Follow us
Srinivas Mata
|

Updated on: Apr 16, 2021 | 8:19 PM

ಮೆಕ್​ಡೊನಾಲ್ಡ್ ಇಂಡಿಯಾ (ಪಶ್ಚಿಮ ಮತ್ತು ದಕ್ಷಿಣ) ಶುಕ್ರವಾರ ಹೇಳಿರುವ ಪ್ರಕಾರ, ನಟಿ ರಶ್ಮಿಕಾ ಮಂದಣ್ಣ ಅವರನ್ನು ತನ್ನ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕ ಮಾಡಿದೆ. ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಮೆಕ್​ಡೊನಾಲ್ಡ್ ರೆಸ್ಟುರಾಂಟ್​ಗಳನ್ನು ಪೂರ್ಣ ಪ್ರಮಾಣದಲ್ಲಿ ಮಾಲೀಕತ್ವ ಇರುವ ವೆಸ್ಟ್​ಲೈಫ್ ಡೆವ್​ಲಪ್​ಮೆಂಟ್ ಲಿಮಿಟೆಡ್ ಮೂಲಕ ಅದು ನಿರ್ವಹಣೆ ಮಾಡುತ್ತದೆ. ರಶ್ಮಿಕಾ ಮಂದಣ್ಣ ಅವರು ಈ ಬ್ರ್ಯಾಂಡ್​ನ ಪ್ರಮುಖ ಅಭಿಯಾನಗಳಲ್ಲಿ ಭಾಗಿ ಆಗಲಿದ್ದಾರೆ. ಪ್ರಮುಖ ಮಾರುಕಟ್ಟೆಯಲ್ಲಿ ಮತ್ತೆ ಬ್ರ್ಯಾಂಡ್ ನಾಯಕತ್ವಕ್ಕೆ ಪ್ರಯತ್ನಿಸುತ್ತಿರುವ ಮೆಕ್​ಡೊನಾಲ್ಡ್​ಗೆ ಇದು ಪ್ರಮುಖವಾದ ಒಪ್ಪಂದ ಆಗಲಿದೆ ಎಂದು ತಿಳಿಸಲಾಗಿದೆ.

“ಈ ಒಪ್ಪಂದದೊಂದಿಗೆ ನಮ್ಮ ಪ್ರಮುಖ ಮಾರುಕಟ್ಟೆಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುವಜನರೊಂದಿಗಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸಲು ಗುರಿ ಇರಿಸಿಕೊಂಡಿದ್ದೇವೆ,” ಎಂದು ಮೆಕ್​ಡೊನಾಲ್ಡ್ ಇಂಡಿಯಾದ (ಪಶ್ಚಿಮ ಮತ್ತು ದಕ್ಷಿಣ) ಮಾರುಕಟ್ಟೆ ಮತ್ತು ಸಂವಹನದ ನಿರ್ದೇಶಕ ಆರ್.ಪಿ. ಅರವಿಂದ್ ತಿಳಿಸಿದ್ದಾರೆ.

25 ವರ್ಷ ವಯಸ್ಸಿನ ರಶ್ಮಿಕಾ ಮಂದಣ್ಣ ಅವರ ಮೊದಲ ಸಿನಿಮಾ ಕನ್ನಡದ ಕಿರಿಕ್ ಪಾರ್ಟಿ. ಆ ನಂತರ ದಕ್ಷಿಣ ಭಾರತದ ಇತರ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಚಲೋ, ಸರಿಲೇರು ನೀಕೆವ್ವರು, ಗೀತಗೋವಿಂದಂ ಮತ್ತು ಡಿಯರ್ ಕಾಮ್ರೆಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಅಭಿನಯಿಸಿದ್ದು, ದಕ್ಷಿಣ ಭಾರತದಲ್ಲಿ ಮನೆ ಮಾತಾಗಿದ್ದಾರೆ.

ಇನ್ನೇನು ಅಲ್ಲು ಅರ್ಜುನ್ ಜತೆಗೆ ಅಭಿನಯಿಸಿರುವ ಪುಷ್ಪ ಸಿನಿಮಾ ಬಿಡುಗಡೆ ಕಾಣಬೇಕಿದೆ. ಅದೇ ರೀತಿ ಒಂದರ ಹಿಂದೆ ಒಂದರಂತೆ ಎರಡು ಹಿಂದಿ ಚಿತ್ರಗಳಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಇನ್ನು ರಶ್ಮಿಕಾಗೆ ಇನ್​ಸ್ಟಾಗ್ರಾಮ್​ನಲ್ಲಿ 1.5 ಕೋಟಿಗೂ ಹೆಚ್ಚು ಫಾಲೋವರ್ಸ್ ಮತ್ತು ಟ್ವಿಟ್ಟರ್​ನಲ್ಲಿ 26 ಲಕ್ಷ ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ: ನಟಿ ರಶ್ಮಿಕಾ ಬಹಳಷ್ಟು ಜಾಹೀರಾತು ಬ್ರಾಂಡ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್