AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಇದ್ರೆ ಸಾಕು ರೇಷನ್ ಕಾರ್ಡ್‌ ಇ-ಕೆವೈಸಿ ಸ್ಥಿತಿ ಪರಿಶೀಲಿಸ್ಬಹುದು

ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಲು, ಕರ್ನಾಟಕ ಸರ್ಕಾರದ ಅಧಿಕೃತ ಆಹಾರ ಇಲಾಖೆ ಆಹಾರ ಕರ್ನಾಟಕ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದರೆ ಕುಟುಂಬದ ಸದಸ್ಯರ ಆಧಾರ್ ಲಿಂಕ್ ಸ್ಥಿತಿ ಸೇರಿದಂತೆ ಎಲ್ಲಾ ಮಾಹಿತಿ ದೊರೆಯುತ್ತದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ಮೊಬೈಲ್ ಇದ್ರೆ ಸಾಕು ರೇಷನ್ ಕಾರ್ಡ್‌ ಇ-ಕೆವೈಸಿ ಸ್ಥಿತಿ ಪರಿಶೀಲಿಸ್ಬಹುದು
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on:Aug 03, 2026 | 7:40 PM

Share

ಮುಖ್ಯಾಂಶಗಳು

  • ರೇಷನ್ ಕಾರ್ಡ್ ಇ-ಕೆವೈಸಿಯೂ ಮಾಡಿಸುವುದು ಕಡ್ಡಾಯ
  • ಪಡಿತರ ಚೀಟಿದಾರರ ಗುರುತನ್ನು ಆಧಾರ್ ಮೂಲಕ ದೃಢೀಕರಿಸುವ ಪ್ರಕ್ರಿಯೆಯಾಗಿದೆ
  • ರೇಷನ್ ಕಾರ್ಡ್ ಇ-ಕೆವೈಸಿ ಸ್ಥಿತಿಯನ್ನು ಆನ್ಲೈನ್ ಅಥವಾ ಆಫ್ ಲೈನ್‌ನಲ್ಲಿ ಪರಿಶೀಲಿಸಲು ಸಾಧ್ಯ

ರೇಷನ್ ಕಾರ್ಡ್ ಇ-ಕೆವೈಸಿಯೂ (Ration Card E-KYC) ಪಡಿತರ ಚೀಟಿದಾರರ ಗುರುತನ್ನು ಆಧಾರ್  ಕಾರ್ಡ್‌ ಮೂಲಕ ದೃಢೀಕರಿಸುವ ಪ್ರಕ್ರಿಯೆಯಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು, ನಕಲಿ ಕಾರ್ಡ್‌ಗಳನ್ನು ತಪ್ಪಿಸಲು ಹಾಗೂ ಅರ್ಹರಿಗೆ ನೇರವಾಗಿ ಸಬ್ಸಿಡಿ ತಲುಪಿಸಲು ರೇಷನ್ ಕಾರ್ಡ್ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆದರೆ ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಆಗಿದೆಯೇ ಎಂದು ನೀವು ಮೊಬೈಲ್‌ನಲ್ಲಿ ಪರಿಶೀಲಿಸಬಹುದು.

ಆನ್ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಹಂತ 1: ನೀವು ಅಧಿಕೃತ ಆಹಾರ ಕರ್ನಾಟಕ ವೆಬ್‌ಸೈಟ್ ಗೆ ಭೇಟಿ ನೀಡಿ.

ಹಂತ 2: ಆಹಾರ ಕರ್ನಾಟಕ ಇ-ಸರ್ವಿಸಸ್ ಪೋರ್ಟಲ್ ತೆರೆಯಿರಿ.

ಹಂತ 3: ಇ-ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಸ್ಥಿತಿ ವಿಭಾಗಕ್ಕೆ ಹೋಗಿ.

ಹಂತ 4: ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನಮೂದಿಸಿ.

ಹಂತ 5: ಸ್ಕ್ರೀನ್ ಮೇಲೆ ಕುಟುಂಬದ ಸದಸ್ಯರ ಪಟ್ಟಿ ಹಾಗೂ ಸದಸ್ಯರ ವಿವರಗಳಲ್ಲಿ ಆಧಾರ್ ಲಿಂಕ್ ಹಾಗೂ ಇ-ಕೆವೈಸಿ ಸ್ಥಿತಿ ಕಾಣಿಸುತ್ತದೆ.

ಆಫ್‌ಲೈನ್ ಮೂಲಕ ರೇಷನ್ ಕಾರ್ಡ್ ಇ-ಕೆವೈಸಿ ಸ್ಥಿತಿ ಹೀಗೆ ಪರಿಶೀಲಿಸಿ

ಹಂತ 1: ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ.

ಹಂತ 2: ಅಂಗಡಿದಾರರ ಬಳಿ ಇರುವ ಇ-ಪೋಸ್ ಯಂತ್ರದ ಮೂಲಕ ನಿಮ್ಮ ಬೆರಳಚ್ಚು ನೀಡಿ ಆಧಾರ್ ಮತ್ತು ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಬಹುದು.

ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸುವುದು ಹೇಗೆ?

ಹಂತ 1: ಗೂಗಲ್ ಪ್ಲೇ ಸ್ಟೋರ್‌ನಿಂದ ಮೇರಾ ರೇಷನ್ ಆ್ಯಪ್ ಡೌನ್‌ಲೋಡ್ ಮಾಡಿ.

ಹಂತ 2: ನಿಮ್ಮ ಆಧಾರ್ ಅಥವಾ ರೇಷನ್ ಕಾರ್ಡ್ ಸಂಖ್ಯೆ ಬಳಸಿ ಲಾಗಿನ್ ಆಗಿ ಲಿಂಕ್ ಸ್ಥಿತಿ ತಿಳಿಯಬಹುದು.

ಇದನ್ನೂ ಓದಿ: mAadhaar ಆ್ಯಪ್​ನಲ್ಲಿ ಐವರ ಪ್ರೊಫೈಲ್ ಸೇರಿಸಲು ಅವಕಾಶ; ಷರತ್ತುಗಳು, ಅನುಕೂಲಗಳು ಇತ್ಯಾದಿ ವಿವರ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ರೇಷನ್ ಕಾರ್ಡ್ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?

ಉತ್ತರ: ರೇಷನ್ ಕಾರ್ಡ್ ಇ-ಕೆವೈಸಿ ಸ್ಥಿತಿಯನ್ನು ಆನ್ಲೈನ್ ಅಥವಾ ಆಫ್ ಲೈನ್‌ನಲ್ಲಿ ಪರಿಶೀಲಿಸಲು ಸಾಧ್ಯ.

ಪ್ರಶ್ನೆ: ರೇಷನ್ ಕಾರ್ಡ್ ಇ -ಕೆವೈಸಿ ಎಂದರೇನು?

ಉತ್ತರ: ರೇಷನ್ ಕಾರ್ಡ್ ಇ-ಕೆವೈಸಿಯೂ ಪಡಿತರ ಚೀಟಿದಾರರ ಗುರುತನ್ನು ಆಧಾರ್ ಮೂಲಕ ದೃಢೀಕರಿಸುವ ಪ್ರಕ್ರಿಯೆಯಾಗಿದೆ.

ಪ್ರಶ್ನೆ: ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವುದು ಎಷ್ಟು ಮುಖ್ಯ?

ಉತ್ತರ: ರೇಷನ್ ಕಾರ್ಡ್ ಇ-ಕೆವೈಸಿ ಉಚಿತ ರೇಷನ್ ರದ್ದಾಗದಿರಲು, ನಕಲಿ ಕಾರ್ಡ್‌ಗಳನ್ನು ತಡೆಯಲು ಹಾಗೂ ಅರ್ಹರಿಗೆ ನೇರವಾಗಿ ಸಬ್ಸಿಡಿ ತಲುಪಿಸಲು ಕಡ್ಡಾಯವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Mon, 3 August 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು