AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI MPC Meet: ಆರ್​ಬಿಐ ಹಣಕಾಸು ಸಮಿತಿ ಸಭೆ ಫೆಬ್ರವರಿ 8ರಿಂದ 10ಕ್ಕೆ ಮರು ನಿಗದಿ

ಭಾರತರತ್ನ ಲತಾ ಮಂಗೇಶ್ಕರ್ ನಿಧನದ ಶೋಕಾಚರಣೆ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಭೆ ದಿನಾಂಕವನ್ನು ಫೆಬ್ರವರಿ 8ರಿಂದ 10ಕ್ಕೆ ಮರು ನಿಗದಿ ಮಾಡಲಾಗಿದೆ.

RBI MPC Meet: ಆರ್​ಬಿಐ ಹಣಕಾಸು ಸಮಿತಿ ಸಭೆ ಫೆಬ್ರವರಿ 8ರಿಂದ 10ಕ್ಕೆ ಮರು ನಿಗದಿ
ಆರ್​ಬಿಐ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Feb 07, 2022 | 11:43 AM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank Of India) ಭಾನುವಾರದಂದು ಘೋಷಣೆ ಮಾಡಿರುವಂತೆ, ಹಣಕಾಸು ನೀತಿ ಸಮಿತಿ (Monetary Policy Committee) ತ್ರೈಮಾಸಿಕ ಸಭೆಯನ್ನು ಒಂದು ದಿನ ಮುಂದೂಡಲಾಗಿದೆ. ಭಾರತರತ್ನ ಲತಾ ಮಂಗೇಶ್ಕರ್ ಅವರ ನಿಧನದ ಕಾರಣಕ್ಕೆ ಫೆಬ್ರವರಿ 7ಕ್ಕೆ ಮಹಾರಾಷ್ಟ್ರದಲ್ಲಿ ಶೋಕಾಚರಣೆಗಾಗಿ ರಜಾ ಘೋಷಣೆ ಮಾಡಲಾಗಿದೆ. ಸಭೆಯನ್ನು ಫೆಬ್ರವರಿ 7ರಿಂದ 9ರ ತನಕ ನಿಗದಿ ಮಾಡಲಾಗಿತ್ತು. ಇದೀಗ ಫೆಬ್ರವರಿ 8ರಂದು ಆರಂಭಗೊಳ್ಳಲಿದ್ದು, 10ನೇ ತಾರೀಕಿನಂದು ನಿರ್ಣಯಗಳನ್ನು ಘೋಷಿಸಲಾಗುತ್ತದೆ. “ಫೆಬ್ರವರಿ 7, 2022ರಂದು ನೆಗೋಷಿಯೆಬಲ್ ಇನ್​​ಸ್ಟ್ರುಮೆಂಟ್ಸ್ ಕಾಯ್ದೆ 1881 ಸೆಕ್ಷನ್ 25ರ ಅಡಿಯಲ್ಲಿ ಮಹಾರಾಷ್ಟ್ರ ಸರ್ಕಾರವು ಭಾರತರತ್ನ ಕು. ಲತಾ ಮಂಗೇಶ್ಕರ್ ಅವರಿಗೆ ಗೌರವ ಸಲ್ಲಿಸುವ ಪ್ರಯುಕ್ತ ಆರ್​ಬಿಐ ಹಣಕಾಸು ಸಮಿತಿ ಸಭೆಯನ್ನು ಫೆಬ್ರವರಿ 8ರಿಂದ 10ರ ತನಕ ಮರುನಿಗದಿ ಮಾಡಲಾಗಿದೆ,” ಆರ್​ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈನ ಆಸ್ಪತ್ರೆಯಲ್ಲಿ ಭಾನುವಾರದಂದು ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಮುಂದಿನ ದ್ವೈಮಾಸಿಕ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಪ್ರಮುಖ ಬಡ್ಡಿ ದರಗಳು ಯಥಾ ಸ್ಥಿತಿ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಕೇಂದ್ರ ಬಜೆಟ್ 2022ರ ಮಂಡನೆ ಆದ ನಂತರದ ಮೊದಲ ಹಣಕಾಸು ನೀತಿ ಸಮಿತಿ ಸಭೆ ಇದಾಗಿದೆ. ವಿಶ್ಲೇಷಕರ ಅಭಿಪ್ರಾಯದ ಪ್ರಕಾರ, ಆರ್​ಬಿಐನ ಹಣಕಾಸು ನೀತಿ ಸಮಿತಿಯು ಪಾಲಿಸಿ ನಿರ್ಧಾರವನ್ನು “ಅಕಾಮಡೇಟಿವ್​”ನಿಂದ “ನ್ಯೂಟ್ರಲ್​”ಗೆ ಬದಲಾಗಬಹುದು. ಮತ್ತು ಲಿಕ್ವಿಡಿಟಿ ಸಹಜ ಸ್ಥಿತಿಗೆ ತರುವ ಪ್ರಕ್ರಿಯೆಯಲ್ಲಿ ರಿವರ್ಸ್ ರೆಪೋ ದರದಲ್ಲಿ ಸ್ವಲ್ಪ ಬದಲಾವಣೆ ಆಗಬಹುದು.

ಕೊವಿಡ್​-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರ ಹಾಗೂ ರಿವರ್ಸ್ ರೆಪೋ ದರವನ್ನು ಕ್ರಮವಾಗಿ ಶೇ 4 ಮತ್ತು ಶೇ 3.35ರಲ್ಲೇ ಮುಂದುವರಿಸಿದೆ. ಇದರ ಜತೆಗೆ ಹಣದುಬ್ಬರ ದರವನ್ನು ಸಹ ಸಂಭಾಳಿಸಬೇಕಾದ ಹೊಣೆ ಆರ್​ಬಿಐ ಮೇಲಿದೆ. ಆರ್​ಬಿಐನಿಂದ ಪ್ರತಿ 2 ತಿಂಗಳಿಗೊಮ್ಮೆ ಹಣಕಾಸು ನೀತಿ ಸಭೆಯನ್ನು ನಡೆಸಲಾಗುತ್ತದೆ. ಬ್ಯಾಂಕ್ ಬಡ್ಡಿ ದರ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಘೋಷಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 11:43 am, Mon, 7 February 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ