RBI Meet: ನಿಯಂತ್ರಣಕ್ಕೆ ಬರುತ್ತಿಲ್ಲ ಹಣದುಬ್ಬರ; ನವೆಂಬರ್​ 3ಕ್ಕೆ ಎಂಪಿಸಿ ವಿಶೇಷ ಸಭೆ ಕರೆದ ಆರ್​ಬಿಐ

ಹಣದುಬ್ಬರ ನಿಯಂತ್ರಿಸಲು ವಿಫಲವಾಗಿದ್ದಕ್ಕೆ ಸರ್ಕಾರಕ್ಕೆ ವರದಿ ನೀಡಬೇಕಿದೆ ಆರ್​ಬಿಐ; ನವೆಂಬರ್ 3ಕ್ಕೆ ನಡೆಯಲಿದೆ ವಿಶೇಷ ಸಭೆ

RBI Meet: ನಿಯಂತ್ರಣಕ್ಕೆ ಬರುತ್ತಿಲ್ಲ ಹಣದುಬ್ಬರ; ನವೆಂಬರ್​ 3ಕ್ಕೆ ಎಂಪಿಸಿ ವಿಶೇಷ ಸಭೆ ಕರೆದ ಆರ್​ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ (ಸಂಗ್ರಹ ಚಿತ್ರ)
Follow us
TV9 Web
| Updated By: Ganapathi Sharma

Updated on:Oct 27, 2022 | 6:23 PM

ನವದೆಹಲಿ: ಚಿಲ್ಲರೆ ಹಣದುಬ್ಬರ (Retail Inflation) ನಿಯಂತ್ರಿಸಲು ವಿಫಲವಾಗುತ್ತಿರುವುದಕ್ಕೆ ಸಂಬಂಧಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನವೆಂಬರ್​​ 3ರಂದು ಹಣಕಾಸು ನೀತಿ ಸಮಿತಿಯ (MPC) ವಿಶೇಷ ಸಭೆ ಕರೆದಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ, ಚಿಲ್ಲರೆ ಹಣದುಬ್ಬರ ಏರಿಕೆ (Inflation) ಮಧ್ಯೆಯೇ ಆರ್​ಬಿಐ ಎಂಪಿಸಿ ವಿಶೇಷ ಸಭೆ ಕರೆದಿದೆ. ಸತತ ಮೂರು ತ್ರೈಮಾಸಿಕಗಳಲ್ಲಿ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 6ಕ್ಕಿಂತ ಕೆಳಗಿನ ಮಟ್ಟದಲ್ಲಿ ಕಾಯ್ದುಕೊಳ್ಳುವಲ್ಲಿ ಆರ್​ಬಿಐ ವಿಫಲವಾಗಿದೆ. ಹೀಗಾಗಿ ತನ್ನ ವೈಫಲ್ಯಕ್ಕೆ ಸಂಬಂಧಿಸಿದ ವರದಿ ಸಿದ್ಧಪಡಿಸುವ ಸಲುವಾಗಿ ಹಣಕಾಸು ನೀತಿ ಸಮಿತಿಯ ಸಭೆ ಕರೆದಿದೆ.

‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಯ ಸೆಕ್ಷನ್ 45 ಝಡ್​ಎನ್​ ಅಡಿಯಲ್ಲಿ ಹಣಕಾಸು ನೀತಿ ಸಮಿತಿಯ ಹೆಚ್ಚುವರಿ ಸಭೆ ಕರೆಯಲಾಗಿದೆ’ ಎಂದು ಗುರುವಾರ ಸಂಜೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಆರ್​ಬಿಐ ತಿಳಿಸಿದೆ.

ಆರ್​ಬಿಐ ಕಾಯ್ದೆ ಹೇಳುವುದೇನು?

ಇದನ್ನೂ ಓದಿ
Image
Salary Hike Survey: ವೇತನ ಹೆಚ್ಚಳಕ್ಕೆ ಕಾಯುತ್ತಿದ್ದೀರಾ? ಸಿಹಿ ಸುದ್ದಿ ನೀಡಿದೆ ಹೊಸ ಸಮೀಕ್ಷೆ
Image
Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
Image
Gold Price Today: ಚಿನ್ನ, ಬೆಳ್ಳಿ ದರ ತುಸು ಹೆಚ್ಚಳ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಲ್ಲಿದೆ ವಿವರ
Image
Fake Currency: ಎಟಿಎಂನಲ್ಲಿ ಬಂದ 200 ರೂ. ನಕಲಿ ನೋಟುಗಳು, ಗ್ರಾಹಕರು ತಬ್ಬಿಬ್ಬು

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಯ ಸೆಕ್ಷನ್ ‘45 ಝಡ್​ಎನ್’ ಹಣದುಬ್ಬರ ನಿಯಂತ್ರಿಸಲು ವಿಫಲವಾಗಿದ್ದಕ್ಕೆ ಸಂಬಂಧಿಸಿದ್ದಾಗಿದೆ. ಹಣದುಬ್ಬರ ಪ್ರಮಾಣವು ಕಳೆದ ಮೂರು ತ್ರೈಮಾಸಿಕಗಳಲ್ಲಿ ಸಹನೆಯ ಮಟ್ಟವಾದ ಶೇಕಡಾ 6ಕ್ಕಿಂತಲೂ ಹೆಚ್ಚಿದೆ. ಸತತ ಮೂರು ತ್ರೈಮಾಸಿಕಗಳವರೆಗೆ ಹಣದುಬ್ಬರವನ್ನು ಮಿತಿಯೊಳಗೆ ಇರಿಸಲು ಸಾಧ್ಯವಾಗದಿದ್ದರೆ, ಅದಕ್ಕೆ ಕಾರಣ ಏನು ಎಂಬುದನ್ನು ಆರ್‌ಬಿಐ ಕೇಂದ್ರಕ್ಕೆ ತಿಳಿಸಬೇಕು ಎಂದು ಈ ಸೆಕ್ಷನ್ ಹೇಳುತ್ತದೆ.

ಇದನ್ನೂ ಓದಿ: RBI Monetary Policy: ಮತ್ತೆ ರೆಪೊ ದರ ಹೆಚ್ಚಿಸಲಿದೆಯೇ ಆರ್​ಬಿಐ?

ಇದರ ಪ್ರಕಾರ, ಬೆಲೆ ಏರಿಕೆ ನಿಯಂತ್ರಿಸಲು ಯಾಕೆ ಸಾಧ್ಯವಾಗಿಲ್ಲ ಎಂಬ ಬಗ್ಗೆ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ಲಿಖಿತವಾಗಿ ಉತ್ತರ ನೀಡಬೇಕಾಗುತ್ತದೆ. ಜತೆಗೆ ಭವಿಷ್ಯದಲ್ಲಿ ಬೆಲೆ ಏರಿಕೆ ನಿಯಂತ್ರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬುದನ್ನೂ ವಿವರವಾಗಿ ತಿಳಿಸಬೇಕಾಗುತ್ತದೆ. 2016ರ ನಂತರ ಕೇಂದ್ರ ಸರ್ಕಾರಕ್ಕೆ ಆರ್​ಬಿಐ ಈ ರೀತಿ ವರದಿ ನೀಡಬೇಕಾಗಿ ಬಂದಿರುವುದು ಇದೇ ಮೊದಲಾಗಿದೆ.

ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕೈಗೊಂಡ ಕ್ರಮಗಳು:

ಸತತ 9 ತಿಂಗಳುಗಳಿಂದ ಏರಿಕೆಯ ಹಾದಿಯಲ್ಲಿರುವ ಚಿಲ್ಲರೆ ಹಣದುಬ್ಬರ ಸೆಪ್ಟೆಂಬರ್ ತಿಂಗಳಲ್ಲಿ ಶೇಕಡಾ 7.4ಕ್ಕೆ ಹೆಚ್ಚಿತ್ತು. ಹೆಚ್ಚುತ್ತಿರುವ ಹಣದುಬ್ಬರ ತಡೆಗೆ ಆರ್​ಬಿಐ ಅನೇಕ ಕ್ರಮಗಳನ್ನೂ ಕೈಗೊಂಡಿತ್ತು. ಸತತವಾಗಿ ನಾಲ್ಕು ಬಾರಿ ರೆಪೊ ದರ ಹೆಚ್ಚಿಸಿದ್ದೂ ಅವುಗಳಲ್ಲೊಂದು. ಸೆಪ್ಟೆಂಬರ್ 30ರಂದು ಪ್ರಕಟಿಸಿದ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು ಶೇಕಡಾ 0.50 ಹೆಚ್ಚಿಸಿ, 5.9ಕ್ಕೆ ನಿಗದಿಪಡಿಸಿತ್ತು. ಇದರೊಂದಿಗೆ ಮೇ ತಿಂಗಳ ನಂತರ ಈವರೆಗೆ ಆರ್​ಬಿಐ ಒಟ್ಟಾರೆಯಾಗಿ 190 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿತ್ತು.

ಮುಂದಿನ ಹಣಕಾಸು ನೀತಿಯಲ್ಲಿ ಆರ್​ಬಿಐ ಮತ್ತೆ ರೆಪೊ ದರ ಹೆಚ್ಚಿಸುವ ಸಾಧ್ಯತೆಗಳಿವೆ ಎಂದೂ ಇತ್ತೀಚೆಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಜಾಗತಿಕ ಆರ್ಥಿಕ ತಲ್ಲಣದ ಪರಿಣಾಮ ಮತ್ತು ಹಣದುಬ್ಬರ ನಿಯಂತ್ರಣಕ್ಕೆ ಬಾರದಿರುವ ಕಾರಣ ಹಣಕಾಸು ನೀತಿ ಸಮಿತಿಯು ಮತ್ತೆ 35ರಿಂದ 50 ಮೂಲಾಂಶಗಳ ವರೆಗೆ ರೆಪೊ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Thu, 27 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್