RBI Repo Rate: ಆರ್‌ಬಿಐನಿಂದ ರೆಪೋ ದರ ಹೆಚ್ಚಳ: 900 ಅಂಕಗಳಿಗಿಂತ ಹೆಚ್ಚು ಕುಸಿದ ಸೆನ್ಸೆಕ್ಸ್

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ದಿಢೀರ್ ಪತ್ರಿಕಾಗೋಷ್ಠಿ ಕರೆದು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೋ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ ಎಂದು ಘೋಷಿಸಿದ್ದಾರೆ.

RBI Repo Rate: ಆರ್‌ಬಿಐನಿಂದ ರೆಪೋ ದರ ಹೆಚ್ಚಳ: 900 ಅಂಕಗಳಿಗಿಂತ ಹೆಚ್ಚು ಕುಸಿದ ಸೆನ್ಸೆಕ್ಸ್
ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 04, 2022 | 3:35 PM

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ದಿಢೀರ್ ಪತ್ರಿಕಾಗೋಷ್ಠಿ ಕರೆದು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೋ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ರೆಪೋ (Repo) ದರ ಏರಿಕೆಯಿಂದ ಬ್ಯಾಂಕ್ ಸಾಲದ ಬಡ್ಡಿ ದರ‌ ಏರಿಕೆ ಆಗಲಿದೆ. ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಬಡ್ಡಿ ದರ ಹೆಚ್ಚಳವಾಗಲಿದೆ.ನಗದು ಮೀಸಲು ಅನುಪಾತವನ್ನು (ಕ್ಯಾಶ್ ರಿಸರ್ವ್ ರೇಷಿಯೊ) ಬೇಡಿಕೆಯ 50 ಮೂಲಾಂಶ ಹೆಚ್ಚಿಸಲಾಗಿದ್ದು, ಶೇ 4.5ಕ್ಕೆ ನಿಗದಿಪಡಿಸಲಾಗಿದೆ. ಇದು 2022ರ ಮೇ 21ರಿಂದ ಜಾರಿಗೆ ಬರಲಿದೆ.

ರಿಸರ್ವ್ ಬ್ಯಾಂಕ್​ಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸುದ್ದಿ ಹೊರ ಬರುತ್ತಿದ್ದಂತೆ ಸೆನ್ಸೆಕ್ಸ್ 900 ಅಂಶಗಳಿಗಿಂತಲೂ ಹೆಚ್ಚು ಕುಸಿತ ದಾಖಲಿಸಿತು. ನಿಫ್ಟಿ 16,800ರ ಅಂಶಕ್ಕಿಂತಲೂ ಕಡಿಮೆ ಮಟ್ಟಕ್ಕೆ ಇಳಿಯಿತು. ಮಾನಿಟರಿ ಪಾಲಿಸಿ ಕಮಿಟಿ ಮೇ 2ರಿಂದ ಸಭೆ ನಡೆಸಿ ಆರ್ಥಿಕ ಪರಿಸ್ಥಿತಿ ಹಾಗು ಅದನ್ನು ಎದುರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬುದನ್ನು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಜಾಗತಿಕ ಆರ್ಥಿಕ ಅಸ್ಥಿರತೆ ನಡುವೆಯೂ ಭಾರತೀಯ ಆರ್ಥಿಕತೆ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಮೇ 2ರಿಂದ 4ರವರೆಗೆ ಆರ್​ಬಿಐನ ಹಣಕಾಸು ನೀತಿ ಸಮಿತಿ ನಡೆಸಿದ್ದ ಸಭೆಯಲ್ಲಿ ರೆಪೋ ದರ ಏರಿಕೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗವರ್ನರ್ ತಿಳಿಸಿದ್ದಾರೆ. ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತಿಕ ಆರ್ಥಿಕತೆ ಚೇತರಿಕೆ ಹಳಿ ತಪ್ಪುತ್ತಿದೆ. ಇತ್ತೀಚಿನ ಜಿಡಿಪಿ ವಿವರಗಳು ಜಾಗತಿಕ ಆರ್ಥಿಕ ಹಿನ್ನಡೆಗೆ ಕೈಗನ್ನಡಿ ಹಿಡಿದಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕ ಪ್ರಗತಿಗೆ ಪುಷ್ಟಿ ಕೊಡುವ ಉದ್ದೇಶದಿಂದ ರೆಪೋ ಮತ್ತು ಸಿಆರ್‌ಆರ್ ದರಗಳನ್ನ ಏರಿಸಲಾಗಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಯನ್ನು ಉಲ್ಲೇಖಿಸಿದ ಅವರು, ಹಲವು ಕಾರಣಗಳಿಂದಾಗಿ ಜಾಗತಿಕ ಆರ್ಥಿಕತೆ ಅಸ್ಥಿರತೆ ಅನುಭವಿಸುತ್ತಿದೆ. ಈ ನಡುವೆಯೂ ಭಾರತದ ಆರ್ಥಿಕತೆ ಸ್ಥಿರತೆ ಕಾಪಾಡಿಕೊಂಡಿದೆ.  ರಷ್ಯಾ-ಉಕ್ರೇನ್ ಯುದ್ಧದ  ಪರಿಣಾಮಗಳು ಎಲ್ಲ ಕಡೆ ಹರಡುತ್ತಿವೆ. ಸರಕು ಮತ್ತು ಹಣಕಾಸು ಮಾರುಕಟ್ಟೆಯಲ್ಲಿ ಕೊರತೆ ಹಾಗೂ ಏರಳಿತ ಹೆಚ್ಚಾಗುತ್ತಿದೆ. ಸಮರ್ಪಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಭಾರತವು ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿದರು.

ಇದನ್ನೂ ಓದಿ: RBI Recruitment 2022: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 950 ನೇಮಕಾತಿಗಳು, ಯಾರೆಲ್ಲ ಅರ್ಜಿ ಹಾಕಬಹುದು, ವಿವರ ಏನಿದೆ?

ಇದನ್ನೂ ಓದಿ: GDP: ಭಾರತದ ಜಿಡಿಪಿ FY22ಕ್ಕೆ ಶೇ 9.5ರಷ್ಟಾಗುವ ಅಂದಾಜು ಮಾಡಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

Published On - 2:59 pm, Wed, 4 May 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್