Paytm: ಹೊಸ ಡೆಪಾಸಿಟ್ ಪಡೆಯುವಂತಿಲ್ಲ; ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ; ಪೇಟಿಎಂ ಆ್ಯಪ್ ಬಳಸುವಂತಿಲ್ಲವಾ?

RBI imposes restrictions on Paytm Payments Bank: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ ಎಂದು ಆರ್​ಬಿಐ ನಿರ್ಬಂಧ ಹಾಕಿದೆ. ಪೇಟಿಎಂ ಬ್ಯಾಂಕ್​ನಲ್ಲಿ ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಪೇಟಿಎಂನ ಇತರ ಯುಪಿಐ ಸೇವೆಗಳಿಗೆ ಈ ನಿರ್ಬಂಧ ಅನ್ವಯ ಆಗುವುದಿಲ್ಲ.

Paytm: ಹೊಸ ಡೆಪಾಸಿಟ್ ಪಡೆಯುವಂತಿಲ್ಲ; ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ; ಪೇಟಿಎಂ ಆ್ಯಪ್ ಬಳಸುವಂತಿಲ್ಲವಾ?
ಪೇಟಿಎಂ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 31, 2024 | 6:12 PM

ನವದೆಹಲಿ, ಜನವರಿ 31: ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಮೇಲೆ ಆರ್​ಬಿಐ ಹಲವು ನಿರ್ಬಂಧಗಳನ್ನು ವಿಧಿಸಿದೆ. ಹೊಸ ಗ್ರಾಹಕರನ್ನು ಸ್ವೀಕರಿಸಬಾರದು; ಹೊಸ ಡೆಪಾಸಿಟ್ ಪಡೆಯಬಾರದು; ಫೆಬ್ರುವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಜೋಡಿತವಾದ ವ್ಯಾಲಟ್, ಫಾಸ್​ಟ್ಯಾಗ್ ಇತ್ಯಾದಿ ಪ್ರೀಪೇಡ್ ಯಂತ್ರಗಳಿಗೆ (prepaid instruments) ಟಾಪಪ್ ಹಾಕಿಸುವಂತಿಲ್ಲ ಎಂದು ಆರ್​ಬಿಐ ನಿರ್ಬಂಧ ಹಾಕಿದೆ.

ಪೇಟಿಎಂ ಆ್ಯಪ್​ಗೂ ಇದಕ್ಕೂ ಸಂಬಂಧ ಇಲ್ಲ

ಆದರೆ, ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಇದನ್ನೂ ಓದಿ: ಇಪಿಎಫ್​ಒದಿಂದ ನಿಮ್ಮ ಮೊಬೈಲ್​ಗೂ ಈ ಮೆಸೇಜ್ ಬಂದಿರಬೇಕು; ನಾರಿಶಕ್ತಿ ಪರೀಕ್ಷೆಯಾ ಇದು? ಮೆಸೇಜ್​ನಲ್ಲಿರೋ ಲಿಂಕ್ ಕ್ಲಿಕ್ ಮಾಡಿ ಫಾರ್ಮ್ ತುಂಬಿಸಿ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಯಾಕೆ ಈ ನಿರ್ಬಂಧ?

ಹೊರಗಿನ ಆಡಿಟರ್​ಗಳು ಪೇಟಿಎಂ ಬ್ಯಾಂಕ್​ನಲ್ಲಿ ಆಡಿಟಿಂಗ್ ಮಾಡಿವೆ. ಬ್ಯಾಂಕಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ವಿಚಾರ ಆಡಿಟಿಂಗ್​ನಿಂದ ಗೊತ್ತಾಗಿದೆ. ಎರಡು ವರ್ಷದ ಹಿಂದೆಯೇ ಇದು ನಡೆದಿತ್ತು. 2022ರ ಮಾರ್ಚ್ ತಿಂಗಳಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಸ ಗ್ರಾಹಕರನ್ನು ಹೊಂದಬಾರದು ಎಂದು ಆರ್​ಬಿಐ ನಿರ್ಬಂಧ ಹಾಕಿತ್ತು. ಇದೀಗ 2024ರ ಫೆಬ್ರುವರಿ 29ರ ನಂತರ ಪ್ರೀಪೇಡ್ ಇನ್ಸ್​ಟ್ರುಮೆಂಟ್ಸ್, ವ್ಯಾಲಟ್ಸ್, ಫಾಸ್​ಟ್ಯಾಗ್, ಎನ್​ಸಿಎಂಸಿ ಕಾರ್ಡ್ ಇತ್ಯಾದಿಗೆ ಹಣ ರವಾನಿಸುವಂತಿಲ್ಲ, ಟಾಪಪ್ ಹಾಕುವಂತಿಲ್ಲ ಎಂದು ಆರ್​ಬಿಐ ಆದೇಶಿಸಿದೆ.

ಅದರೆ, ಈ ಮೊದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಅಕೌಂಟ್ ಹೊಂದಿರುವವರ ಖಾತೆಗೆ ಕ್ಯಾಷ್​ಬ್ಯಾಕ್, ಬಡ್ಡಿ, ರೀಫಂಡ್ ಇತ್ಯಾದಿಯನ್ನು ಹಾಕಲು ಅಡ್ಡಿ ಇಲ್ಲ. ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಸಂಪೂರ್ಣ ವಿತ್​ಡ್ರಾ ಮಾಡಿಕೊಳ್ಳಲು ಯಾವುದೇ ಅಡ್ಡಿ ಆಗಬಾರದು ಎಂದೂ ಆರ್​ಬಿಐ ಸೂಚಿಸಿದೆ.

ಇದನ್ನೂ ಓದಿ: Infosys: ಇನ್ಫೋಸಿಸ್ ಸಂಸ್ಥೆಗೆ ಅಮೆರಿಕದ ಪ್ರಾಧಿಕಾರದಿಂದ ದಂಡ; ಶಾರ್ಟ್ ಪೇಮೆಂಟ್ ಕಾರಣ

ಹಾಗೆಯೇ, ಪೇಟಿಎಂ ಮಾಲೀಕ ಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ ಮತ್ತು ಪೇಟಿಎಂ ಪೇಮೆಂಟ್ಸ್ ಸರ್ವಿಸಸ್​ನ ನೋಡಲ್ ಅಕೌಂಟ್​​ಗಳನ್ನು ಫೆಬ್ರುವರಿ 29ರೊಳಗೆ ನಿಲ್ಲಿಸುವಂತೆಯೂ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ