RBI: ರೆಪೋ ರೇಟ್ ಶೇ. 4.90ಕ್ಕೆ ಹೆಚ್ಚಿಸಿದ ಆರ್​ಬಿಐ; ಬ್ಯಾಂಕ್ ಸಾಲದ ಬಡ್ಡಿ ದರವೂ ಏರಿಕೆ

Repo Rate Hike: ರೆಪೋ ದರ ಏರಿಕೆಯಿಂದ ಬ್ಯಾಂಕ್​ಗಳಲ್ಲಿನ ಗೃಹ ಸಾಲ, ವಾಹನ‌ ಸಾಲ, ವೈಯಕ್ತಿಕ ಸಾಲದ ಇಎಂಐ ಕೂಡ ಹೆಚ್ಚಳವಾಗಲಿದೆ.

RBI: ರೆಪೋ ರೇಟ್ ಶೇ. 4.90ಕ್ಕೆ ಹೆಚ್ಚಿಸಿದ ಆರ್​ಬಿಐ; ಬ್ಯಾಂಕ್ ಸಾಲದ ಬಡ್ಡಿ ದರವೂ ಏರಿಕೆ
ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್Image Credit source: Hindustan Times
Follow us
| Updated By: ಸುಷ್ಮಾ ಚಕ್ರೆ

Updated on:Jun 08, 2022 | 11:04 AM

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರೆಪೋ ರೇಟ್ ಅನ್ನು ಶೇ. 4.90ಕ್ಕೆ ಹೆಚ್ಚಿಸುವ ಮೂಲಕ ಹೊಸ ಆದೇಶ ಹೊರಡಿಸಿದೆ. ರೆಪೋ ರೇಟ್ 50 ಬೇಸಿಸ್ ಪಾಯಿಂಟ್ ಹೆಚ್ಚಳವಾದ್ದರಿಂದ ಬ್ಯಾಂಕ್ ಸಾಲದ ಬಡ್ಡಿ ದರವೂ ಏರಿಕೆಯಾಗಿದೆ. ರೆಪೋ ದರ ಏರಿಕೆಯಿಂದ ಬ್ಯಾಂಕ್​ಗಳಲ್ಲಿನ ಗೃಹ ಸಾಲ (Home Loan), ವಾಹನ‌ ಸಾಲ (Vehicle Loan), ವೈಯಕ್ತಿಕ ಸಾಲದ ಇಎಂಐ (EMI) ಕೂಡ ಹೆಚ್ಚಳವಾಗಲಿದೆ. ಈ ಕುರಿತು ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ (RBI Governor Shaktikanta Das) ತಿಳಿಸಿದ್ದಾರೆ. ಎರಡು ತಿಂಗಳಲ್ಲಿ 2ನೇ ಸಲ ಆರ್​ಬಿಐನಿಂದ ರೆಪೋ ರೇಟ್ ಹೆಚ್ಚಿಸಲಾಗಿದೆ. ಈ ಕುರಿತು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಜೂನ್‌ನ ಹಣಕಾಸು ನೀತಿಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ಪ್ರಮುಖ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ (ಬಿಪಿಎಸ್) ಶೇಕಡಾ 4.90 ಕ್ಕೆ ಹೆಚ್ಚಿಸಿದೆ. ಬ್ಯಾಂಕ್ ದರವು ಶೇ. 4.65ರಿಂದ ಶೇ. 5.15ಕ್ಕೆ ಏರಿಕೆಯಾಗಿದೆ. MPC ಸಹ ಹೊಂದಾಣಿಕೆಯ ನಿಲುವನ್ನು ತೆಗೆದುಹಾಕುವುದರ ಮೇಲೆ ಕೇಂದ್ರೀಕರಿಸಲು ನಿರ್ಧರಿಸಿದೆ. ಸಾಂಕ್ರಾಮಿಕ ಮತ್ತು ಯುದ್ಧದ ಹೊರತಾಗಿಯೂ ಭಾರತೀಯ ಆರ್ಥಿಕ ಚೇತರಿಕೆ ವೇಗವನ್ನು ಪಡೆದುಕೊಂಡಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: RBI Repo Rate: ಆರ್‌ಬಿಐನಿಂದ ರೆಪೋ ದರ ಹೆಚ್ಚಳ: 900 ಅಂಕಗಳಿಗಿಂತ ಹೆಚ್ಚು ಕುಸಿದ ಸೆನ್ಸೆಕ್ಸ್

ರೆಪೋ ರೇಟ್ 50 ಬೇಸಿಸ್ ಪಾಯಿಂಟ್ ಹೆಚ್ಚಳ ಮಾಡಲಾಗಿದೆ. ರಷ್ಯಾ-ಉಕ್ರೇನ್‌ ಯುದ್ಧದಿಂದ ಹಣದುಬ್ಬರ ಹೆಚ್ಚಾಗಿದೆ. ದೇಶದಲ್ಲಿ ಹಣದುಬ್ಬರ ಶೇ. 6ರಷ್ಟಿದೆ ಎಂದು ಆರ್‌ಬಿಐ ಗವರ್ನರ್‌ ಹೇಳಿದ್ದಾರೆ. ಆರ್‌ಬಿಐನ ಗವರ್ನರ್‌ ಶಕ್ತಿಕಾಂತ್‌ ನೇತೃತ್ವದ ಹಣಕಾಸು ನೀತಿ ಸಮಿತಿಯು ಸೋಮವಾರದಿಂದ 3 ದಿನಗಳ ಸಭೆ ನಡೆಸಿತ್ತು. ಇಂದು ಹಣಕಾಸು ನೀತಿ ಸಮಿತಿಯ ಮೂರು ದಿನಗಳ ಸಭೆಯ ಮುಕ್ತಾಯದ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ (RBI) 5 ವಾರಗಳಲ್ಲಿ ಎರಡನೇ ಬಾರಿಗೆ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಸಮಿತಿಯು ಮೇ ತಿಂಗಳ ಆರಂಭದಲ್ಲಿ ಅನಿಶ್ಚಿತ ಸಭೆಯನ್ನು ನಡೆಸಿ, ರೆಪೋ ದರ ಏರಿಕೆಗೆ ಸರ್ವಾನುಮತದಿಂದ ಮತ ಹಾಕಿತ್ತು.

FY23ರ ಹಣದುಬ್ಬರವು 6.7% ಎಂದು ಅಂದಾಜಿಸಲಾಗಿದೆ. ಈ ಹಿಂದೆ ಯೋಜಿತವಾದ 5.7%ರಿಂದ ಹೆಚ್ಚಾಗಿದೆ ಎಂದು ಆರ್‌ಬಿಐ ಗವರ್ನರ್ ಹೇಳಿದ್ದರು. ಹಣದುಬ್ಬರದಲ್ಲಿ ಸುಮಾರು 75% ಏರಿಕೆಯಾಗಿರುವುದು ಆಹಾರದ ಬೆಲೆಗಳ ಏರಿಕೆಗೆ ಕಾರಣವಾಗಿದೆ. RBI FY23 GDP ಬೆಳವಣಿಗೆಯ ಅಂದಾಜನ್ನು 7.2%ರಲ್ಲಿ ಉಳಿಸಿಕೊಂಡಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Wed, 8 June 22

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ