ರೆಪೋ ದರದಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ

RBI Governor Shaktikanta Das Announcement: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರಲ್ಲಿ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಶೇ. 6.5ರಲ್ಲಿ ಮುಂದುವರಿಯಲಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ರೆಪೋ ದರದಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ
ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 10, 2023 | 11:15 AM

ನವದೆಹಲಿ, ಆಗಸ್ಟ್ 10: ನಿರೀಕ್ಷೆಯಂತೆ ಆರ್​ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್​ಬಿಐನ ಬಡ್ಡಿದರ ಶೇ. 6.50ರಲ್ಲೇ ಮುಂದುವರಿಯಲಿದೆ. ಆಗಸ್ಟ್ 8ರಿಂದ ನಡೆದಿದ್ದ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿ (ಮಾನಿಟರಿ ಪಾಲಿಸಿ ಕಮಿಟಿ) ಸಭೆ ಇಂದು ಮುಕ್ತಾಯಗೊಂಡ ಬೆನ್ನಲ್ಲೇ ಅದರ ಗವರ್ನರ್ ಶಕ್ತಿಕಾಂತ ದಾಸ್ ಆ ಸಭೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್, ರೆಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ರಿವರ್ಸ್ ರೆಪೋ ಇತ್ಯಾದಿ ಇತರ ದರಗಳಲ್ಲೂ ಯಾವುದೇ ವ್ಯತ್ಯಯವಾಗಿಲ್ಲ. 2023-24ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ. ಹಾಗೆಯೇ, ಹಣದುಬ್ಬರ ಶೇ. 5.625ರಷ್ಟು ಇರಬಹುದು ಎಂಬುದು ಅವರ ಅಂದಾಜು.

ಏನಿದು ರೆಪೋ ದರ?

ರೆಪೋ ಎಂದರೆ ರೀಪರ್ಚೇಸಿಂಗ್ ಆಪ್ಷನ್. ಅಂದರೆ ಮರುಖರೀದಿ ಆಯ್ಕೆ. ಬ್ಯಾಂಕುಗಳಿಗೆ ತುರ್ತು ಅಗತ್ಯಬಿದ್ದಾಗ ಅಥವಾ ಫಂಡಿಂಗ್ ಕೊರತೆ ಇದ್ದಾಗ ಆರ್​ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್​ಬಿಐ ವಿಧಿಸುವ ಬಡ್ಡಿಯೇ ರೆಪೋ ದರ. ರೆಪೋ ದರವನ್ನು ಆರ್​​ಬಿಐನ ಬಡ್ಡಿದರ ಎಂದೂ ಕರೆಯಲಾಗುತ್ತದೆ.

ಇನ್ನು, ರಿವರ್ಸ್ ರಿಪೋ ಎಂಬುದು ಇದರ ತಿರುವುಮುರುವು. ಬ್ಯಾಂಕುಗಳು ತಮ್ಮಲ್ಲಿರುವ ಹೆಚ್ಚುವರಿ ಹಣವನ್ನು ಬೇಕಾದರೆ ಆರ್​ಬಿಐನಲ್ಲಿ ಠೇವಣಿಯಾಗಿ ಇರಿಸಬಹುದು. ಇದಕ್ಕೆ ಆರ್​ಬಿಐ ನೀಡುವ ಬಡ್ಡಿದರವೇ ರಿವರ್ಸ್ ರೆಪೋ.

ಇದನ್ನೂ ಓದಿ: ಆರ್ಥಿಕ ಹಿಂಜರಿತವಾದರೆ ಷೇರುಮಾರುಕಟ್ಟೆಗೆ ಏನಾಗುತ್ತೆ? ಷೇರುಪೇಟೆ ಕುಸಿದರೂ ನಿಮ್ಮ ಹೂಡಿಕೆ ಹಣ ಭದ್ರವಾಗಿಸುವುದು ಹೇಗೆ?

ಆರ್​ಬಿಐ ಬಡ್ಡಿದರ ಹೆಚ್ಚಿಸಿದರೆ ಬ್ಯಾಂಕುಗಳು ಅದಕ್ಕೆ ಅನುಗುಣವಾಗಿ ತಮ್ಮ ಗ್ರಾಹಕರಿಗೆ ಅದರ ಲಾಭ ಅಥವಾ ನಷ್ಟವನ್ನು ವರ್ಗಾಯಿಸಬಹುದು. ಆದರೆ, ಅದು ಬ್ಯಾಂಕುಗಳ ಆಯ್ಕೆ.

ಹಣದುಬ್ಬರ ಎಷ್ಟಾಗಬಹುದು?

ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಪ್ರಕಾರ, ಭಾರತದಲ್ಲಿ ಈ ಹಣಕಾಸು ವರ್ಷದಲ್ಲಿ (2023-24) ಸಿಪಿಐ ಹಣದುಬ್ಬರ ಶೇ. 5.5 ಆಗಬಹುದು. ಕಳೆದ ಬಾರಿ ನಡೆದಿದ್ದ ಸಭೆಯಲ್ಲಿ ಮಾಡಲಾಗಿದ್ದ ಅಂದಾಜು ಪ್ರಕಾರ ಈ ಹಣಕಾಸುವ ವರ್ಷದಲ್ಲಿ ಹಣದುಬ್ಬರ ಶೇ. 5.1ರಷ್ಟು ಇರಬಹುದು ಎನ್ನಲಾಗಿತ್ತು. ಈಗ ಅಂದಾಜನ್ನು ಪರಿಷ್ಕರಿಸಿ, ಹಣದುಬ್ಬರ ಇನ್ನಷ್ಟು ಏರಿಕೆಯನ್ನು ಆರ್​ಬಿಐ ನಿರೀಕ್ಷಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ (2024-25) ಹಣದುಬ್ಬರ ಶೇ. 5.2ರಷ್ಟಿರಬಹುದು ಎಂದು ಅಂದಾಜು ಮಾಡಲಾಗಿದೆ.

ಆರ್​ಬಿಐ ಹಣದುಬ್ಬರ ಸದ್ಯ ಉತ್ತಮ ಸ್ಥಿತಿಯಲ್ಲಿದೆ. ಈ ಬಾರಿ ಮುಂಗಾರು ಉತ್ತಮವಾಗಿರುವುದರಿಂದ ಆಹಾರ ಕೊರತೆ ಎದುರಾಗದು. ಆದರೆ, ಹೆಡ್​ಲೈನ್ ಇನ್​ಫ್ಲೇಶನ್ ಸದ್ಯೋಭವಿಷ್ಯದಲ್ಲಿ ಏರಿಕೆ ಆಗಬಹುದು ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ.

ಇದನ್ನೂ ಓದಿ: Explainer: ಜಗತ್ತು ಹಣದುಬ್ಬರದಿಂದ ತತ್ತರಿಸಿದರೆ ಚೀನಾಗೆ ಹಣದುಬ್ಬರಕುಸಿತದ ತಲೆನೋವು; ಏನಿದು ಡೀಫ್ಲೇಶನ್? ಆರ್ಥಿಕತೆಯ ಮೇಲೇನು ಪರಿಣಾಮ?

2023-24ರ ಹಣಕಾಸು ವರ್ಷಕ್ಕೆ ಹಣದುಬ್ಬರದ ತ್ರೈಮಾಸಿಕ ಅಂದಾಜು

ಕ್ವಾರ್ಟರ್ 1: 5.4%

ಕ್ವಾರ್ಟರ್ 2: 6.2%

ಕ್ವಾರ್ಟರ್ 3: 5.7%

ಕ್ವಾರ್ಟರ್ 4: 5.2%

ಶೇ. 6.5ರಷ್ಟು ಜಿಡಿಪಿ ಬೆಳೆಯುವ ಅಂದಾಜು

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.5ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಎಂಪಿಸಿ ಸಭೆಯ ಅಂದಾಜನ್ನು ಪ್ರಕಟಿಸಿದ್ದಾರೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಗರಿಷ್ಠ ದರದಲ್ಲಿ ಬೆಳೆದರೆ ಕೊನೆಯ ಕ್ವಾರ್ಟರ್ ತುಸು ದುರ್ಬಲ ಬೆಳವಣಿಗೆ ಕಾಣಲಿದೆ.

ಇದನ್ನೂ ಓದಿ: ಬಲಿಷ್ಠ ಬ್ಯಾಂಕ್; ಲಾಭದ ಓಟದಲ್ಲಿ ರಿಲಾಯನ್ಸ್ ಸಾಮ್ರಾಜ್ಯವನ್ನೇ ಹಿಂದಿಕ್ಕಿದ ಎಸ್​ಬಿಐ; ಎರಡು ದಶಕಗಳಲ್ಲಿ ಇದು ಎರಡನೇ ಸಲ

ಜಿಡಿಪಿ ದರ ಅಂದಾಜು (2023-24ರಲ್ಲಿ)

ಒಟ್ಟು ಜಿಡಿಪಿ ದರ: ಶೇ. 6.5

ಕ್ವಾರ್ಟರ್ 1: 8.0%

ಕ್ವಾರ್ಟರ್ 2: 6.5%

ಕ್ವಾರ್ಟರ್ 3: 6.0%

ಕ್ವಾರ್ಟರ್ 4: 5.7%

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:09 am, Thu, 10 August 23

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?