AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Monetary Policy: ಕೆವೈಸಿಯಿಂದ ಹಿಡಿದು ರೀಟೇಲ್ ಡೈರೆಕ್ಟ್​ವರೆಗೆ ಆರ್​ಬಿಐನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ

RBI announces 3 consumer centric steps announced: ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಬುಧವಾರ ಎಂಪಿಸಿ ಸಭೆಯ ನಿರ್ಧಾರ ಪ್ರಕಟಿಸಿದ್ದಾರೆ. ಪಿಎಂ ಜನ್ ಧನ್ ಯೋಜನೆಗಳಲ್ಲಿ ಶುರುವಾದ ಬ್ಯಾಂಕ್ ಖಾತೆಗಳಿಗೆ ಮತ್ತೊಮ್ಮೆ ಕೆವೈಸಿ ಪಡೆಯಲು ಬ್ಯಾಂಕುಗಳೇ ಜನರ ಸಮೀಪ ಹೋಗಲಿವೆ. ಮೃತ ಬ್ಯಾಂಕ್ ಗ್ರಾಹಕರ ಹಣಕ್ಕೆ ಸಲ್ಲಿಸುವ ಕ್ಲೇಮ್ ಅನ್ನು ಸೆಟಲ್ಮೆಂಟ್ ಮಾಡುವ ಕ್ರಮ ಸರಳಗೊಳಿಸಲಾಗಿದೆ.

RBI Monetary Policy: ಕೆವೈಸಿಯಿಂದ ಹಿಡಿದು ರೀಟೇಲ್ ಡೈರೆಕ್ಟ್​ವರೆಗೆ ಆರ್​ಬಿಐನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 06, 2025 | 11:26 AM

Share

ನವದೆಹಲಿ, ಆಗಸ್ಟ್ 6: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಪ್ರಕಟಿಸಿದ ಎಂಪಿಸಿ ಸಭೆ (RBI MPC meeting) ನಿರ್ಧಾರಗಳಲ್ಲಿ ಕೆಲ ಗ್ರಾಹಕ ಕೇಂದ್ರಿತ ಕ್ರಮಗಳೂ (consumer centric steps) ಒಳಗೊಂಡಿವೆ. ಗ್ರಾಹಕರ ಅನುಕೂಲತೆ, ಹಣಕಾಸು ಒಳಗೊಳ್ಳುವಿಕೆಯನ್ನು ಗಮನದಲ್ಲಿಟ್ಟುಕೊಂಡು ಕ್ರಮಗಳನ್ನು ರೂಪಿಸಲಾಗಿದೆ ಎಂದು ಮಲ್ಹೋತ್ರಾ ತಿಳಿಸಿದ್ದಾರೆ. ಮೃತ ಗ್ರಾಹಕರ ಅಕೌಂಟ್​ಗಳನ್ನು ಅವರ ವಾರಸುದಾರರಿಗೆ ಸೆಟಲ್ಮೆಂಟ್ ಮಾಡುವ ಪ್ರಕ್ರಿಯೆ ಸರಳಗೊಳಿಸಿರುವುದೂ ಈ ಕ್ರಮಗಳಲ್ಲಿ ಒಳಗೊಳ್ಳಲಾಗಿದೆ.

ಜನರ ಬಳಿಗೇ ಹೋಗಿ ಪುನರ್​ಕೆವೈಸಿ ಪಡೆಯುವ ವ್ಯವಸ್ಥೆ

ಪಿಎಂ ಜನ್ ಧನ್ ಯೋಜನೆ ಶುರುವಾಗಿ 10 ವರ್ಷ ಆಗಿದೆ. ಈ ಸ್ಕೀಮ್ ಅಡಿ ಶುರುವಾದ ಹೆಚ್ಚಿನ ಬ್ಯಾಂಕ್ ಅಕೌಂಟ್​ಗಳಿಗೆ ಮತ್ತೊಮ್ಮೆ ಕೆವೈಸಿ ಪಡೆಯಬೇಕಿದೆ. ಇದಕ್ಕಾಗಿ, ಪಂಚಾಯತ್ ಮಟ್ಟದಲ್ಲಿ ಬ್ಯಾಂಕುಗಳು ಜುಲೈ 1ರಿಂದ ಸೆಪ್ಟೆಂಬರ್ 30ರವರೆಗೆ ಶಿಬಿರಗಳನ್ನು ನಡೆಸಲಿವೆ. ಇಲ್ಲಿ ಬ್ಯಾಂಕ್ ಖಾತೆದಾರರಿಗೆ ಮರು-ಕೆವೈಸಿ ಪ್ರಕ್ರಿಯೆಯಲ್ಲಿ ನೆರವು ನೀಡಲಾಗುತ್ತದೆ. ಹಾಗೆಯೇ, ಮೈಕ್ರೋ ಇನ್ಷೂರೆನ್ಸ್, ಪೆನ್ಷನ್ ಸ್ಕೀಮ್ ಇತ್ಯಾದಿ ಸಂಬಂಧಿತ ಸೇವೆ ಹಾಗೂ ಮಾಹಿತಿಯನ್ನೂ ಈ ಶಿಬಿರಗಳಲ್ಲಿ ನೀಡಲಾಗುತ್ತದೆ ಎಂದು ಆರ್​ಬಿಐ ಗವರ್ನರ್ ತಿಳಿಸಿದ್ದಾರೆ.

ಮೃತ ಗ್ರಾಹಕರ ಬ್ಯಾಂಕ್ ಹಣಕ್ಕೆ ಕ್ಲೇಮ್ ಸಲ್ಲಿಸುವುದು ಸರಳ

ಮೃತ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿನ ಹಣಕ್ಕೆ ವಾರಸುದಾರರು ಸಲ್ಲಿಸಿದ ಕ್ಲೇಮ್ ಅನ್ನು ಸೆಟಲ್ಮೆಂಟ್ ಮಾಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದಾಗಿ ಆರ್​ಬಿಐ ಹೇಳಿದೆ.

ಇದನ್ನೂ ಓದಿ: RBI Repo Rate: ಆರ್​ಬಿಐ ರಿಪೋ ದರದಲ್ಲಿ ಬದಲಾವಣೆ ಇಲ್ಲ; ಶೇ. 5.5 ಬಡ್ಡಿದರ ಮುಂದುವರಿಸಿದ ರಿಸರ್ವ್ ಬ್ಯಾಂಕ್

ಆರ್​ಬಿಐ ರೀಟೇಲ್ ಡೈರೆಕ್ಟ್

ಆರ್​ಬಿಐ ತನ್ನ ರೀಟೇಲ್ ಡೈರೆಕ್ಟ್ ಪ್ಲಾಟ್​ಫಾರ್ಮ್ ಅನ್ನು ಅಪ್​ಗ್ರೇಡ್ ಮಾಡಿದೆ. ಸರ್ಕಾರಿ ಬಾಂಡ್ ಇತ್ಯಾದಿ ಗವರ್ನ್ಮೆಂಟ್ ಸೆಕ್ಯೂರಿಟೀಸ್​ಗಳಲ್ಲಿ ವ್ಯಕ್ತಿಗಳು ಹೂಡಿಕೆ ಮಾಡಲು ಈ ವೇದಿಕೆ ಅವಕಾಶ ಮಾಡಿಕೊಡುತ್ತದೆ. ಈ ರೀಟೇಲ್ ಹೂಡಿಕೆದಾರರು ತಮ್ಮ ಹೂಡಿಕೆಗಳನ್ನು ಮತ್ತಷ್ಟು ಉತ್ತಮವಾಗಿ ನಿಭಾಯಿಸಲು ಸಹಾಯವಾಗುವಂತಹ ಮತ್ತಷ್ಟು ಪರಿಕರಗಳನ್ನು ರೀಟೇಲ್ ಡೈರೆಕ್ಟ್ ಪ್ಲಾಟ್​ಫಾರ್ಮ್​ನಲ್ಲಿ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ